AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; 4 ಮಹಿಳೆಯರು ಸಾವು, 6 ಮಂದಿಗೆ ಗಾಯ

ಉತ್ತರ ಪ್ರದೇಶದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; 4 ಮಹಿಳೆಯರು ಸಾವು, 6 ಮಂದಿಗೆ ಗಾಯ

ಸುಷ್ಮಾ ಚಕ್ರೆ
|

Updated on:Jun 16, 2025 | 5:26 PM

Share

ಉತ್ತರ ಪ್ರದೇಶದ ಅಮ್ರೋಹಾದಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ ನಾಲ್ವರು ಮಹಿಳೆಯರು ಸಾವನ್ನಪ್ಪಿದ್ದು, 6 ಮಂದಿಗೆ ಗಾಯಗಳಾಗಿವೆ. ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯ ರಜತ್‌ಪುರ ಪೊಲೀಸ್ ಠಾಣೆ ಪ್ರದೇಶದ ಅತ್ರಾಸಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯ ರಾಜಬ್‌ಪುರ ಪೊಲೀಸ್ ಠಾಣೆ ಪ್ರದೇಶದಲ್ಲಿರುವ ಅತ್ರಾಸಿ ಗ್ರಾಮದಲ್ಲಿ ಸ್ಫೋಟ ಸಂಭವಿಸಿದೆ. ಪೊಲೀಸರ ಪ್ರಕಾರ, ಪಟಾಕಿ ಕಾರ್ಖಾನೆಯನ್ನು ಹಾಪುರ್‌ಗೆ ಸೇರಿದ ಸೈಫ್-ಉರ್-ರೆಹಮಾನ್ ಹೆಸರಿನಲ್ಲಿ ನೋಂದಾಯಿಸಲಾಗಿದೆ.

ಅಮ್ರೋಹಾ, ಜೂನ್ 16: ಉತ್ತರ ಪ್ರದೇಶದ (Uttar Pradesh) ಅಮ್ರೋಹಾ ಜಿಲ್ಲೆಯ ಲೈಸೆನ್ಸ್ ಪಡೆದ ಪಟಾಕಿ ಕಾರ್ಖಾನೆಯಲ್ಲಿ ಇಂದು ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ನಾಲ್ವರು ಮಹಿಳೆಯರು ಸಾವನ್ನಪ್ಪಿದ್ದು, 6 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯ ರಾಜಬ್‌ಪುರ ಪೊಲೀಸ್ ಠಾಣೆ ಪ್ರದೇಶದಲ್ಲಿರುವ ಅತ್ರಾಸಿ ಗ್ರಾಮದಲ್ಲಿ ಸ್ಫೋಟ ಸಂಭವಿಸಿದೆ. ಪೊಲೀಸರ ಪ್ರಕಾರ, ಪಟಾಕಿ ಕಾರ್ಖಾನೆಯನ್ನು ಹಾಪುರ್‌ಗೆ ಸೇರಿದ ಸೈಫ್-ಉರ್-ರೆಹಮಾನ್ ಹೆಸರಿನಲ್ಲಿ ನೋಂದಾಯಿಸಲಾಗಿದೆ. “ರಜತ್‌ಪುರ ಪೊಲೀಸ್ ಠಾಣೆ ಪ್ರದೇಶದ ಅತ್ರಾಸಿ ಗ್ರಾಮದಲ್ಲಿ ಪರವಾನಗಿ ಪಡೆದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದೆ ಎಂಬ ಮಾಹಿತಿ ನಮಗೆ ಸಿಕ್ಕಿತು. ತಕ್ಷಣ ಪೊಲೀಸರು ಮತ್ತು ಆಂಬ್ಯುಲೆನ್ಸ್ ಸ್ಥಳಕ್ಕೆ ಧಾವಿಸಿತು. ಈ ಘಟನೆಯಲ್ಲಿ ನಾಲ್ವರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ, 6 ಮಹಿಳೆಯರು ಗಾಯಗೊಂಡಿದ್ದಾರೆ” ಎಂದು ಅಮ್ರೋಹಾ ಎಸ್‌ಪಿ ಅಮಿತ್ ಕುಮಾರ್ ಆನಂದ್ ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published on: Jun 16, 2025 05:22 PM