ಡಿಕೆ ಶಿವಕುಮಾರ್ ಗೆ ಹೈ ಸೆಕ್ಯೂರಿಟಿ: ದೆಹಲಿಯಲ್ಲಿ ಸಿಎಂಗೆ ವಿಶೇಷ ಭದ್ರತೆ ನೀಡಿರುವುದು ಇದೇ ಮೊದಲು

Updated on: Jul 27, 2026 | 6:19 PM

ದೆಹಲಿಯಲ್ಲೂ ಸಹ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​​​​ಗೆ ಭದ್ರತೆ ಒದಗಿಸಲಾಗಿದೆ. ಬೆಂಗಳೂರಿನ ಭದ್ರತೆ ವ್ಯವಸ್ಥೆ ಮಾದರಿಯಲ್ಲೇ ದೆಹಲಿಯಲ್ಲಿ ಪೊಲೀಸ್ ಭದ್ರತೆ ನೀಡಲಾಗಿದೆ. ಸಚಿವ ಸಂಪುಟ ಹಾಗೂ ಕೇಂದ್ರ ಸಚಿವರ ಭೇಟಿಗೆಂದು ದೆಹಲಿಗೆ ತೆರಳಿರುವ ಡಿಕೆ ಶಿವಕುಮಾರ್ ಅವರಿಗೆ ಇದೇ ಮೊದಲ ಬಾರಿಗೆ ದೆಹಲಿಯಲ್ಲಿ ಭದ್ರತೆ ಒದಗಿಸಲಾಗಿದೆ. ರಾಜ್ಯದ ಮುಖ್ಯಮಂತ್ರಿಯೊಬ್ಬರಿಗೆ ದೆಹಲಿಯಲ್ಲಿ ಇಷ್ಟೊಂದು ವಿಶೇಷ ಭದ್ರತಾ ವ್ಯವಸ್ಥೆ ಕಲ್ಪಿಸಿರುವುದು ಇದೇ ಮೊದಲು ಎನ್ನಲಾಗಿದೆ. ಬೆಂಗಳೂರಿನಿಂದ ಆಗಮಿಸಿದ 7 ಮಂದಿ ಪೊಲೀಸರ ವಿಶೇಷ ತಂಡವು ಸಿಎಂ ಡಿ.ಕೆ.ಶಿವಕುಮಾರ್ ಭದ್ರತೆಯ ಜವಾಬ್ದಾರಿ ವಹಿಸಿಕೊಂಡಿದ್ದು, ಎಸ್‌ಪಿ, ಇನ್ಸ್‌ಪೆಕ್ಟರ್‌ ಸೇರಿದಂತೆ ಹಲವು ಹಂತದ ಅಧಿಕಾರಿಗಳನ್ನು ನಿಯೋಜಿಸಲಾಗಿದೆ.

ನವದೆಹಲಿ, (ಜುಲೈ 27): ದೆಹಲಿಯಲ್ಲೂ ಸಹ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​​​​ಗೆ ಭದ್ರತೆ ಒದಗಿಸಲಾಗಿದೆ. ಬೆಂಗಳೂರಿನ ಭದ್ರತೆ ವ್ಯವಸ್ಥೆ ಮಾದರಿಯಲ್ಲೇ ದೆಹಲಿಯಲ್ಲಿ ಪೊಲೀಸ್ ಭದ್ರತೆ ನೀಡಲಾಗಿದೆ. ಸಚಿವ ಸಂಪುಟ ಹಾಗೂ ಕೇಂದ್ರ ಸಚಿವರ ಭೇಟಿಗೆಂದು ದೆಹಲಿಗೆ ತೆರಳಿರುವ ಡಿಕೆ ಶಿವಕುಮಾರ್ ಅವರಿಗೆ ಇದೇ ಮೊದಲ ಬಾರಿಗೆ ದೆಹಲಿಯಲ್ಲಿ ಭದ್ರತೆ ಒದಗಿಸಲಾಗಿದೆ. ರಾಜ್ಯದ ಮುಖ್ಯಮಂತ್ರಿಯೊಬ್ಬರಿಗೆ ದೆಹಲಿಯಲ್ಲಿ ಇಷ್ಟೊಂದು ವಿಶೇಷ ಭದ್ರತಾ ವ್ಯವಸ್ಥೆ ಕಲ್ಪಿಸಿರುವುದು ಇದೇ ಮೊದಲು ಎನ್ನಲಾಗಿದೆ. ಬೆಂಗಳೂರಿನಿಂದ ಆಗಮಿಸಿದ 7 ಮಂದಿ ಪೊಲೀಸರ ವಿಶೇಷ ತಂಡವು ಸಿಎಂ ಡಿ.ಕೆ.ಶಿವಕುಮಾರ್ ಭದ್ರತೆಯ ಜವಾಬ್ದಾರಿ ವಹಿಸಿಕೊಂಡಿದ್ದು, ಎಸ್‌ಪಿ, ಇನ್ಸ್‌ಪೆಕ್ಟರ್‌ ಸೇರಿದಂತೆ ಹಲವು ಹಂತದ ಅಧಿಕಾರಿಗಳನ್ನು ನಿಯೋಜಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Jul 27, 2026 06:14 PM
Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More