ಮುರುಗೇಶ್ ಪಾಳ್ಯದ ಬಳಿ ಬಿಎಂಟಿಸಿ ಬಸ್ ಹರಿದು ಇಬ್ಬರ ಸಾವು, ಪ್ರತ್ಯಕ್ಷದರ್ಶಿಗಳು ಹೇಳೋದೇನು?

ಅರುಣ್​ ಕುಮಾರ್​ ಬೆಳ್ಳಿ

Updated on: Mar 27, 2025 | 10:27 AM

ಅಪಘಾತದಲ್ಲಿ ದುರ್ಮರಣಕ್ಕೀಡಾದ ಪಾದಾಚಾರಿ ಜಿಮ್ ನಿಂದ ಮನೆಗೆ ವಾಪಸ್ಸಾಗುತ್ತಿದ್ದರೆ ಬೈಕ್ ಓಡಿಸುತ್ತಿದ್ದ ವ್ಯಕ್ತಿ ಖಾಸಗಿ ಸಂಸ್ಥೆಯೊಂದರಲ್ಲಿ ಉದ್ಯೋಗಿಯಾಗಿದ್ದರೆಂದು ಹೇಳಲಾಗಿದೆ. ಸಿಗ್ನಲ್ ಬಳಿಯೇ ಇಷ್ಟು ಭೀಕರ ಅಪಘಾತ ಜರುಗಿರುವುದು ಆಶ್ಚರ್ಯ ಮೂಡಿಸುತ್ತದೆ. ಅಪಘಾತ ನಡೆದ ತಕ್ಷಣ ಬಸ್ಸಿನ ಡ್ರೈವರ್ ಮತ್ತು ಕಂಡಕ್ಟರ್ ಇಬ್ಬರೂ ಸ್ಥಳದಿಂದ ಪರಾರಿಯಾಗಿದ್ದಾರೆ.

ಬೆಂಗಳೂರು, ಮಾರ್ಚ್ 27: ಕಳೆದ ರಾತ್ರಿ ಏರ್ಪೋರ್ಟ್ ರಸ್ತೆಯ ಮುರುಗೇಶ್ ಪಾಳ್ಯದ ಸಿಗ್ನಲ್ ಬಳಿ ನಡೆದ ಅಫಘಾತವೊಂದರಲ್ಲಿ ಬಿಎಂಟಿಸಿ ಬಸ್ ಹರಿದು ಒಬ್ಬ ಪಾದಾಚಾರಿ ಮತ್ತು ಒಬ್ಬ ಬೈಕ್ ಸವಾರ (biker) ಮೃತಪಟ್ಟಿದ್ದಾರೆ. ಪ್ರತ್ಯಕ್ಷದರ್ಶಿಗಳು ಹೇಳುವ ಪ್ರಕಾರ ಬಸ್ಸಿನ ಡ್ರೈವರ್ ಬ್ರೇಕ್ ಅದುಮಿ ಬಸ್ ನಿಲ್ಲಿಸುವ ಪ್ರಯತ್ನ ಮಾಡಿದರೂ ಬ್ರೇಕ್ ಹತ್ತಿಲ್ಲ. ಹೊಸದಾಗಿ ಆಪರೇಟ್ ಆಗುತ್ತಿರುವ ಎಲೆಕ್ಟ್ರಿಕ್ ಬಸ್​ಗಳಲ್ಲಿ ಏರ್ ಕಂಪ್ರೆಸರ್ ಬ್ರೇಕ್ ಅಳವಡಿಕೆಯಾಗಿರುವುದರಿಂದ ಏರ್ ಲೀಕಾಗುತ್ತಿದ್ದರೆ ಬ್ರೇಕ್ ಹಿಡಿಯಲ್ಲ ಎಂದು ಖುದ್ದು ಡ್ರೈವರ್ ಆಗಿರುವ ಒಬ್ಬ ಪ್ರತ್ಯಕ್ಷದರ್ಶಿ ಹೇಳುತ್ತಾರೆ.

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಬಿಎಂಟಿಸಿ ಬಸ್ ಹರಿದು ಮಹಿಳೆ ಸಾವು

Published on: Mar 27, 2025 10:27 AM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.