ಬೆಂಗಳೂರು ಎಲೆಕ್ಟ್ರಿಕ್ ಶೋರೂಮಲ್ಲಿ ಅಗ್ನಿ ಅವಘಡಕ್ಕೆ ಯುವತಿ ಬಲಿ, ಪ್ರತ್ಯಕ್ಷದರ್ಶಿಗಳು ಹೇಳೋದೇನು?

ಅರುಣ್​ ಕುಮಾರ್​ ಬೆಳ್ಳಿ

Updated on: Nov 20, 2024 | 10:42 AM

ಶೋರೂಮಲ್ಲಿದ್ದ ಬ್ಯಾಟರಿಗಳು ಸ್ಫೋಟಗೊಂಡ ಕಾರಣ ಬೆಂಕಿಯ ಪ್ರಮಾಣ ಹೆಚ್ಚಿದೆ ಮತ್ತು ಹೊರಗಿದ್ದವರು ಹತ್ತಿರ ಹೋಗಲು ಸಾಧ್ಯವಾಗಲಿಲ್ಲ ಎಂದು ಪ್ರತ್ಯಕ್ಷದರ್ಶಿ ಪ್ರವೀಣ್ ಹೇಳುತ್ತಾರೆ. ಪ್ರಿಯಾ ಇದ್ದ ಸ್ಥಳದಲ್ಲಿ ದಟ್ಟವಾದ ಹೊಗೆಯ ಜೊತೆ ಬೆಂಕಿಯೂ ಆವರಿಸಿದ್ದ ಕಾರಣ ಆಕೆಯನ್ನು ರಕ್ಷಿಸಲಾಗಲಿಲ್ಲ ಎಂದು ಅವರು ಹೇಳುತ್ತಾರೆ.

ಬೆಂಗಳೂರು: ನಿನ್ನೆ ಸಾಯಂಕಾಲ 5:30ರ ಸುಮಾರಿಗೆ ರಾಜ್ ಕುಮಾರ್ ರಸ್ತೆಯಲ್ಲಿರುವ ಮೈ ಈವಿ ಎಲೆಕ್ಟ್ರಿಕ್ ಬೈಕ್ ಶೋ ರೂಂನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ಮತ್ತು ಪ್ರಿಯಾ ಹೆಸರಿನ 20-ವರ್ಷ ವಯಸ್ಸಿನ ಯುವತಿ ಅಗ್ನಿಗಾಹುತಿಯಾಗಿದ್ದು ಈಗಾಗಲೇ ವರದಿಯಾಗಿದೆ. ಪ್ರತ್ಯಕ್ಷದರ್ಶಿಗಳು ಹೇಳುವ ಪ್ರಕಾರ ಶೋರೂಮಿಗೆ ಬೆಂಕಿ ಹೊತ್ತಿಕೊಂಡಾಗ ಒಳಗಡೆ 7-8 ಜನ ಕೆಲಸ ಮಾಡುತ್ತಿದ್ದರು. ಆದರೆ ಕೊನೆಯಲ್ಲಿ ಉಳಿದಿದ್ದು ಮೂರು ಜನ ಮತ್ತು ಶೋರೂಮಿನ ಗ್ಲಾಸ್​​​ಗಳನ್ನು ಒಡೆದು ಅವರಲ್ಲಿ ಇಬ್ಬರನ್ನು ರಕ್ಷಿಸಲಾಗಿದ್ದರೂ ಅವರ ದೇಹ ಕನಿಷ್ಠ ಶೇಕಡ 50ರಷ್ಟು ಸುಟ್ಟಿದೆ. ಅವರನ್ನು ಖಾಸಗಿ ಆಸ್ಪತ್ರೆಯೊಂದರಲ್ಲಿ ದಾಖಲಿಸಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ತಮಿಳುನಾಡು: ಹೊಸೂರಿನ ಟಾಟಾ ಎಲೆಕ್ಟ್ರಾನಿಕ್ಸ್ ಉತ್ಪಾದನಾ ಘಟಕದಲ್ಲಿ ಭಾರೀ ಅಗ್ನಿ ಅವಘಡ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.