AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಜ್ಞಾನಭಾರತಿ ವಿವಿ ಬಳಿ ಸಿಕ್ಕಿದ್ದು ಫೇಕ್​ ಬಾಂಬ್​! ಖಾಲಿ ಪೈಪ್ ಪತ್ತೆ

ಬೆಂಗಳೂರಿನ ಜ್ಞಾನಭಾರತಿ ವಿವಿ ಬಳಿ ಸಿಕ್ಕಿದ್ದು ಫೇಕ್​ ಬಾಂಬ್​! ಖಾಲಿ ಪೈಪ್ ಪತ್ತೆ

ರಾಚಪ್ಪಾಜಿ ನಾಯ್ಕ್
| Edited By: |

Updated on: Oct 31, 2026 | 4:08 PM

Share

ಮುಖ್ಯಾಂಶಗಳು

  • ಬೆಂಗಳೂರಿನ ಜ್ಞಾನಭಾರತಿ ವಿವಿ ಬಳಿ ಅನುಮಾನಾಸ್ಪದ ವಸ್ತು ಪತ್ತೆ
  • ಪರಿಶೀಲಿಸಿದಾಗ ಖಾಲಿ ಪೈಪ್ ಅನ್ನೋದು ಗೊತ್ತಾಗಿದೆ
  • ಜನರನ್ನು ಭಯಪಡಿಸುವ ಉದ್ದೇಶದಿಂದ ಈ ರೀತಿ ಮಾಡಲಾಗಿದೆ

ಜ್ಞಾನಭಾರತಿ ಬಳಿ ಪತ್ತೆಯಾದ ಶಂಕಿತ ಸ್ಫೋಟಕ ವಸ್ತು ನಕಲಿ ಎಂದು ಬಾಂಬ್ ನಿಷ್ಕ್ರಿಯ ದಳ ದೃಢಪಡಿಸಿದೆ. ಇದು ಸಾರ್ವಜನಿಕರಲ್ಲಿ ಭೀತಿ ಮೂಡಿಸುವ ದುರುದ್ದೇಶದಿಂದ ಇಡಲಾದ ನಕಲಿ ಬಾಂಬ್ ಆಗಿದ್ದು, ಅದರಲ್ಲಿ ಯಾವುದೇ ಸ್ಫೋಟಕ ಅಂಶವಿರಲಿಲ್ಲ. ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಆರೋಪಿಗಳ ಪತ್ತೆಗೆ ಮುಂದಾಗಿದ್ದಾರೆ. ಜನರು ನಿಟ್ಟುಸಿರು ಬಿಟ್ಟಿದ್ದಾರೆ.

ಬೆಂಗಳೂರು, ಅಕ್ಟೋಬರ್​​ 31: ನಗರದ ಜ್ಞಾನಭಾರತಿ ಸಮೀಪ ಪತ್ತೆಯಾದ ಶಂಕಿತ ಸ್ಫೋಟಕ ವಸ್ತುವೊಂದು ನಕಲಿ ಎಂಬುವುದು ದೃಢವಾಗಿದೆ. ಆರಂಭದಲ್ಲಿ ಇದೊಂದು ಬಾಂಬ್ ಇರಬಹುದು ಎಂಬ ಮಾಹಿತಿ ಲಭ್ಯವಾಗಿತ್ತು. ತಕ್ಷಣ ಸ್ಥಳಕ್ಕೆ ಧಾವಿಸಿದ ಬಾಂಬ್ ನಿಷ್ಕ್ರಿಯ ದಳ ಮತ್ತು ಪೊಲೀಸರು ಪರಿಶೀಲನೆ ಮಾಡಿದ್ದು, ಫೇಕ್​ ಬಾಂಬ್​​ ಎಂದು ಪತ್ತೆ ಆಗಿದೆ. ಈ ಕುರಿತಾಗಿ ಬೆಂಗಳೂರು ನೈರುತ್ಯ ವಿಭಾಗದ ಡಿಸಿಪಿ ಸೌಮ್ಯಲತಾ ಪ್ರತಿಕ್ರಿಯಿಸಿದ್ದು, ‘ಸಾರ್ವಜನಿಕರು ಅನುಮಾನಾಸ್ಪದ ವಸ್ತು ಇದೆ ಅಂತಾ ಹೇಳಿದರು. ಸೋಕೋ ಟೀಂ ಮತ್ತು ಬಾಂಬ್ ನಿಷ್ಕ್ರಿಯ ದಳ ಕರೆಸಿಕೊಂಡಿದ್ದೆವು. ಪರಿಶೀಲಿಸಿದಾಗ ಖಾಲಿ ಪೈಪ್ ಅನ್ನೋದು ಗೊತ್ತಾಗಿದೆ. ಐಇಡಿ ಮಾದರಿಯಲ್ಲಿ ಮೂರು ಪೈಪ್ ಜೋಡಿಸಿ ಇಡಲಾಗಿತ್ತು. ಜನರನ್ನು ಭಯಪಡಿಸುವ ಉದ್ದೇಶದಿಂದ ಈ ರೀತಿ ಮಾಡಲಾಗಿದೆ’ ಎಂದು ಸ್ಪಷ್ಟನೆ ನೀಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
ರಾಚಪ್ಪಾಜಿ ನಾಯ್ಕ್
ರಾಚಪ್ಪಾಜಿ ನಾಯ್ಕ್

ರಾಚಪ್ಪಾಜಿ ನಾಯ್ಕ್ ಆದ ನಾನು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೊಲ್ಲರದಿಂಬ ಗ್ರಾಮದವನು ಕಳೆದ 2 ವರ್ಷ 11 ತಿಂಗಳಿನಿಂದ ಟಿವಿ9 ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದು.ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ್ದೇನೆ.ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದೇನೆ.

Read More