AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕಲಿ ದಾಖಲೆ ಸೃಷ್ಟಿಸಿ ಜೈಲಿನಿಂದ ಬಿಡುಗಡೆ ಕೇಸ್​​: ಪತ್ನಿಗೆ ಕೈದಿ ಕೈಕೊಟ್ಟಿದ್ದರಿಂದ ಪ್ರಕರಣ ಬಹಿರಂಗ; ಡಿಐಜಿ ಕಳ್ಳಾಟವೂ ಪತ್ತೆ

ನಕಲಿ ದಾಖಲೆ ಸೃಷ್ಟಿಸಿ ಜೈಲಿನಿಂದ ಬಿಡುಗಡೆ ಕೇಸ್​​: ಪತ್ನಿಗೆ ಕೈದಿ ಕೈಕೊಟ್ಟಿದ್ದರಿಂದ ಪ್ರಕರಣ ಬಹಿರಂಗ; ಡಿಐಜಿ ಕಳ್ಳಾಟವೂ ಪತ್ತೆ

ರಾಚಪ್ಪಾಜಿ ನಾಯ್ಕ್
| Edited By: |

Updated on:Oct 06, 2026 | 12:08 PM

Share

ಡಿಐಜಿ ಸೋಮಶೇಖರ್ ನಕಲಿ ದಾಖಲೆ ಸೃಷ್ಟಿಸಿ, ಸಜಾ ಕೈದಿಯೊಬ್ಬನ ಬಿಡುಗಡೆಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿದ್ದಾರೆ. ಕಾರಾಗೃಹ ಇಲಾಖೆಯ ಉನ್ನತ ಅಧಿಕಾರಿಯಾಗಿದ್ದ ಸೋಮಶೇಖರ್, ಕೈದಿ ಶಂಕರ್‌ನ ಪತ್ನಿಯನ್ನು ಲೈಂಗಿಕವಾಗಿ ಶೋಷಿಸಿ, ನಕಲಿ ಸುಪ್ರೀಂ ಕೋರ್ಟ್ ಆದೇಶ ಸೃಷ್ಟಿಸಿ ಬಿಡುಗಡೆ ಮಾಡಿಸಿದ್ದರು. ಅನಾಮಧೇಯ ಪತ್ರದ ಮೂಲಕ ಈ ಕರ್ಮಕಾಂಡ ಬಯಲಾಗಿದ್ದು, ಸೋಮಶೇಖರ್, ಶಂಕರ್ ಮತ್ತು ಶ್ರೀಕಾಂತ್ ಬಂಧನವಾಗಿದೆ.

ಬೆಂಗಳೂರು, ಅಕ್ಟೋಬರ್​​ 06: ನಕಲಿ ದಾಖಲೆ ಸೃಷ್ಟಿಸಿ ಜೈಲಿನಿಂದ ಕೈದಿ ಬಿಡುಗಡೆ ಆರೋಪ ಪ್ರಕರಣ ಸಂಬಂಧ ಹಲವು ಸ್ಫೋಟಕ ವಿಚಾರಗಳು ಬಯಲಾಗಿವೆ. ಬಿಡುಗಡೆ ನಂತರ ಪತ್ನಿಗೆ ಕೈದಿ ಕೈಕೊಟ್ಟಿದ್ದರಿಂದ ಪ್ರಕರಣ ಬಹಿರಂಗವಾಗಿದೆ ಎನ್ನಲಾಗಿದ್ದು, ಪತಿ ಮತ್ತೊಂದು ಮದುವೆಯಾಗಿದ್ದಕ್ಕೆ ಕೆರಳಿ ಪತ್ನಿ ಸತ್ಯ ಹೇಳಿರುವ ಮಾಹಿತಿ ಲಭ್ಯವಾಗಿದೆ. ‎ಅನಾಮಧೇಯ ಪತ್ರದ ಆಧಾರದ ಮೇಲೆ ಕಾರಾಗೃಹ ಇಲಾಖೆ ತನಿಖೆ ನಡೆಸಿದಾಗ ಬೃಹತ್ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. ಅಪಹರಣ, ಕೊಲೆ ಪ್ರಕರಣದಲ್ಲಿ ಶಂಕರ್ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ. ಜೈಲಿಗೆ ಭೇಟಿ ನೀಡುತ್ತಿದ್ದ ಶಂಕರ್ ಪತ್ನಿಯನ್ನು ಲೈಂಗಿಕವಾಗಿ ಬಳಸಿಕೊಂಡು, 2018ರಲ್ಲಿ ಪರಪ್ಪನ ಅಗ್ರಹಾರ ಜೈಲಿನ ಅಧೀಕ್ಷಕರಾಗಿದ್ದ ಸೋಮಶೇಖರ್ ಸಹಾಯ ಮಾಡಿದ್ದರು. ಸಜಾ ಬಂದಿಗಳ ವಿಭಾಗದ ಸಿಬ್ಬಂದಿ ಶ್ರೀಕಾಂತ್‌ಗೆ ನಕಲಿ ದಾಖಲೆ ಸೃಷ್ಟಿಸಲು ಸೂಚಿಸಿದ್ದಸೋಮಶೇಖರ್, ಸುಪ್ರೀಂಕೋರ್ಟ್‌ನ ನಕಲಿ ಆದೇಶ ಇಟ್ಟುಕೊಂಡು 2018ರಲ್ಲಿ ಶಂಕರ್​​ನ ಜೈಲಿನಿಂದ ಬಿಡುಗಡೆ ಮಾಡಿದ್ದರು ಎನ್ನಲಾಗಿದೆ. ತನಿಖೆಗೆ ಅಸಹಕಾರ ಹಿನ್ನೆಲೆ ಇತ್ತೀಚೆಗೆ ಶಂಕರ್ ಹಾಗೂ ಶ್ರೀಕಾಂತ್‌ನನ್ನು ಪೊಲೀಸರು ಬಂಧಿಸಿದ್ದರು. ತನಿಖೆ ವೇಳೆ ಶಂಕರ್‌ ಪತ್ನಿಗೆ ಡಿಐಜಿ ವಿಡಿಯೋ ಕರೆ ಮಾಡಿರೋದು ಪತ್ತೆಯಾಗಿದೆ. ‎ವಿಡಿಯೋ ಕಾಲ್‌ನಲ್ಲಿ ವಿವಸ್ತ್ರವಾಗುವಂತೆ ಡಿಐಜಿ ಸೋಮಶೇಖರ್‌ ಹೇಳಿದ್ದು, ‎ವಿಡಿಯೋ ವಶಕ್ಕೆ ಪಡೆದ ಪೊಲೀಸರು ಅದನ್ನು ಎಫ್ಎಸ್ಎಲ್‌ಗೆ ರವಾನಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Oct 06, 2026 12:05 PM

Follow Us
ರಾಚಪ್ಪಾಜಿ ನಾಯ್ಕ್
ರಾಚಪ್ಪಾಜಿ ನಾಯ್ಕ್

ರಾಚಪ್ಪಾಜಿ ನಾಯ್ಕ್ ಆದ ನಾನು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೊಲ್ಲರದಿಂಬ ಗ್ರಾಮದವನು ಕಳೆದ 2 ವರ್ಷ 11 ತಿಂಗಳಿನಿಂದ ಟಿವಿ9 ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದು.ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ್ದೇನೆ.ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದೇನೆ.

Read More