ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟದ ಜಾಲ ಪತ್ತೆ

Edited By:

Updated on: Aug 22, 2026 | 2:58 PM

ಚಿಕ್ಕಮಗಳೂರಿನ ಮಾರ್ಕೆಟ್ ರಸ್ತೆಯಲ್ಲಿ ನಕಲಿ ನಾಟಿ ತುಪ್ಪ ತಯಾರಿಕಾ ದಂಧೆ ಪತ್ತೆಯಾಗಿದೆ. ಬಳ್ಳಾರಿ ಮೂಲದ ಸಿದ್ದೇಶ್, ಚೆನ್ನೇಶ್ ಸೇರಿದಂತೆ 25ಕ್ಕೂ ಹೆಚ್ಚು ಜನರ ಗ್ಯಾಂಗ್ ಕೆಮಿಕಲ್‌ಗಳನ್ನು ಬಳಸಿ ಕಲಬೆರಕೆ ತುಪ್ಪ ತಯಾರಿಸಿ ಮಾರಾಟ ಮಾಡುತ್ತಿತ್ತು. ಸ್ಥಳೀಯರ ದೂರಿನ ಮೇರೆಗೆ ದಾಳಿ ನಡೆದರೂ ಆರೋಪಿಗಳು ತಪ್ಪಿಸಿಕೊಂಡಿದ್ದಾರೆ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಚಿಕ್ಕಮಗಳೂರು, ಆಗಸ್ಟ್​ 22: ಅಸಲಿ ನಾಟಿ ತುಪ್ಪವೆಂದು ಹೇಳಿ ಅಪಾಯಕಾರಿ ಕೆಮಿಕಲ್‌ಗಳನ್ನು ಬಳಸಿ ನಕಲಿ ತುಪ್ಪ (Fake Ghee) ತಯಾರಿಸಿ ಮಾರಾಟ ಮಾಡುತ್ತಿದ್ದ ಬಳ್ಳಾರಿ ಮೂಲದ ದೊಡ್ಡ ಜಾಲವನ್ನು ಆಹಾರ ಇಲಾಖೆಯ ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ಸಿದ್ದೇಶ್, ಚನ್ನೇಶ್ ಹಾಗೂ ಅವರ ತಂಡದ 25ಕ್ಕೂ ಹೆಚ್ಚು ಸದಸ್ಯರು ಜಿಲ್ಲೆಯಾದ್ಯಂತ ಯಾರಿಗೂ ಅನುಮಾನ ಬಾರದಂತೆ ಈ ದಂಧೆ ನಡೆಸುತ್ತಿದ್ದು, ಸಾರ್ವಜನಿಕರ ಆರೋಗ್ಯದ ಜೊತೆ ಚೆಲ್ಲಾಟವಾಡುತ್ತಿದ್ದ ಕಿಂಗ್‌ಪಿನ್‌ಗಳ ಕೃತ್ಯವನ್ನು ಸ್ಥಳೀಯರೇ ವಿಡಿಯೋ ಸಮೇತ ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದ್ದರು. ಸ್ಥಳೀಯರ ಮಾಹಿತಿ ಆಧರಿಸಿ ಪೊಲೀಸರು ತುಪ್ಪ ತಯಾರಿಕಾ ಅಡ್ಡೆಯ ಮೇಲೆ ದಾಳಿ ಮಾಡಿದ್ದು, ಈ ವೇಳೆ ಕಲಬೆರಕೆ ತುಪ್ಪಕ್ಕೆ ಬಳಸುತ್ತಿದ್ದ ರಾಸಾಯನಿಕ ಪರಿಕರಗಳು ಪತ್ತೆಯಾಗಿವೆ. ಇನ್ನು ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದು ಸದ್ಯ ಪೊಲೀಸರು ಬಲೆ ಬೀಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us