ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ, ಕಿಂಗ್‌ಪಿನ್ ಪ್ರಶಾಂತ್ ಪಾಲುದಾರ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ನಕಲಿ ಔಷಧ ದಂಧೆ ಪ್ರಕರಣದಲ್ಲಿ ಕಿಂಗ್‌ಪಿನ್ ಪ್ರಶಾಂತ್ ನಂತರ ಸಹಪಾಲುದಾರ ಬಾಲಸುಬ್ರಮಣಿಯನ್ನನ್ನು ಚೆನ್ನೈನಲ್ಲಿ ಎಸ್ಐಟಿ ಬಂಧಿಸಿದೆ. ಡಿಎಂ ಫಾರ್ಮಾ ಕಂಪನಿಯಲ್ಲಿ ಪ್ರಶಾಂತ್ ಜೊತೆ ಸೇರಿ ನಕಲಿ ಔಷಧಿಗಳ ತಯಾರಿಕೆ ಹಾಗೂ ವಿತರಣೆಯಲ್ಲಿ ಬಾಲಸುಬ್ರಮಣಿಯನ್ ಪಾತ್ರ ವಹಿಸಿದ್ದ. ನ್ಯಾಯಾಲಯಕ್ಕೆ ಹಾಜರುಪಡಿಸಿ ಏಳು ದಿನಗಳ ಎಸ್ಐಟಿ ಕಸ್ಟಡಿಗೆ ಪಡೆಯಲಾಗಿದೆ. ಈ ಜಾಲದಲ್ಲಿ ಬಂಧಿತರ ಸಂಖ್ಯೆ ಈಗ ಏಳಕ್ಕೆ ಏರಿದೆ.
ಬೆಂಗಳೂರು, ಸೆಪ್ಟೆಂಬರ್ 30: ನಕಲಿ ಔಷಧ ದಂಧೆ ಪ್ರಕರಣದಲ್ಲಿ ಮತ್ತೋರ್ವ ಪ್ರಮುಖ ಆರೋಪಿ ಬಾಲಸುಬ್ರಮಣಿಯನ್ನನ್ನು ಚೆನ್ನೈನಲ್ಲಿ ವಿಶೇಷ ತನಿಖಾ ದಳ (ಎಸ್ಐಟಿ) ಅಧಿಕಾರಿಗಳು ಬಂಧಿಸಿದ್ದಾರೆ. ಈ ಮೂಲಕ, ಕಿಂಗ್‌ಪಿನ್ ಪ್ರಶಾಂತ್ ಬಂಧನದ ನಂತರ ಇದೀಗ ಪ್ರಕರಣದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆಯಾದಂತಾಗಿದೆ. ತನಿಖೆಯ ವೇಳೆ ಲಭ್ಯವಾದ ಸುಳಿವುಗಳ ಆಧಾರದ ಮೇಲೆ ಈ ಬಂಧನ ನಡೆದಿದೆ. ಬಾಲಸುಬ್ರಮಣಿಯನ್ ಅನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ನಂತರ, ಮುಂದಿನ ವಿಚಾರಣೆಗಾಗಿ ಏಳು ದಿನಗಳ ಕಾಲ ಎಸ್ಐಟಿ ಕಸ್ಟಡಿಗೆ ಒಪ್ಪಿಸಲಾಗಿದೆ.
ಚೆನ್ನೈ ಮೂಲದ ಫಾರ್ಮಾ ಪಾಲುದಾರ ಎಂದು ಗುರುತಿಸಲಾಗಿರುವ ಬಾಲಸುಬ್ರಮಣಿಯನ್, ಡಿಎಂ ಫಾರ್ಮಾ ಔಷಧಿ ಕಂಪನಿಯಲ್ಲಿ ಪ್ರಶಾಂತ್ ಜೊತೆ ಪಾಲುದಾರರಾಗಿದ್ದ. ನಕಲಿ ಔಷಧಿಗಳ ತಯಾರಿಕೆ ಮತ್ತು ವಿತರಣೆಯಲ್ಲಿ ಈತನ ಪಾತ್ರ ಪ್ರಮುಖವಾಗಿತ್ತು ಎಂದು ತನಿಖೆಯಿಂದ ಬಯಲಾಗಿದೆ. ಈ ನಕಲಿ ಔಷಧ ಜಾಲದ ಪ್ರಕರಣದಲ್ಲಿ ಇದುವರೆಗೆ ಬಂಧಿತರ ಸಂಖ್ಯೆ ಈಗ ಏಳಕ್ಕೆ ಏರಿಕೆಯಾಗಿದೆ. ಎಸ್ಐಟಿ ತಂಡವು ಆರೋಪಿಯನ್ನು ತೀವ್ರ ವಿಚಾರಣೆಗೆ ಒಳಪಡಿಸಿದೆ. ನಕಲಿ ಔಷಧಿಗಳ ಉತ್ಪಾದನೆ ಮತ್ತು ಮಾರಾಟದ ಹಿಂದಿರುವ ಸಂಪೂರ್ಣ ಜಾಲವನ್ನು ಬಯಲಿಗೆಳೆಯಲು ಅಧಿಕಾರಿಗಳು ಪ್ರಯತ್ನಿಸುತ್ತಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

