ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ: ಕ್ಷಣಮಾತ್ರದಲ್ಲಿ ಕದ್ದು ಎಸ್ಕೇಪ್​​

Edited By:

Updated on: Jun 22, 2026 | 11:32 AM

ಬೆಂಗಳೂರಿನ ಆರ್‌ಪಿಸಿ ಲೇಔಟ್‌ನಲ್ಲಿ ನಕಲಿ ನಾಗಸಾಧುಗಳ ಸೋಗಿನಲ್ಲಿ ಬಂದ ವಂಚಕರು ಅರುಣ್ ಶ್ರೀಪಾದ್ ಎಂಬುವವರಿಗೆ ಮೋಸ ಮಾಡಿದ್ದಾರೆ. ಕಾಶಿ ಮತ್ತು ಗಂಗಾ ಸ್ನಾನದ ಬಗ್ಗೆ ಮಾತನಾಡಿ ನಂಬಿಕೆ ಗಳಿಸಿದ ಈ ವೇಷಧಾರಿಗಳು, ಆಶೀರ್ವಾದ ಮಾಡುವ ನೆಪದಲ್ಲಿ ಅವರ ಕೈಲಿದ್ದ ಉಂಗುರವನ್ನು ಕಸಿದುಕೊಂಡು ಪರಾರಿಯಾಗಿದ್ದಾರೆ. ಈ ಕುರಿತು ವಿಜಯನಗರ ಠಾಣೆಯಲ್ಲಿ ದೂರು ದಾಖಲಾಗಿದೆ.

ಬೆಂಗಳೂರು, ಜೂನ್​​ 22: ನಕಲಿ ನಾಗಸಾಧುಗಳ ಸೋಗಿನಲ್ಲಿ ಬಂದ ವಂಚಕರು ಅಮಾಯಕರನ್ನು ಗುರಿಯಾಗಿಸಿಕೊಂಡು ಕಳ್ಳತನ ಮಾಡುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ. ನಗರದ ಆರ್‌ಪಿಸಿ ಲೇಔಟ್ ನಿವಾಸಿ ಅರುಣ್ ಶ್ರೀಪಾದ್ ಎಂಬುವರು ಇಂತಹದೊಂದು ವಂಚನೆಗೆ ಒಳಗಾಗಿದ್ದಾರೆ. ಸಾಧುಗಳ ವೇಷದಲ್ಲಿದ್ದ ಕೆಲ ವ್ಯಕ್ತಿಗಳು ಅರುಣ್ ಶ್ರೀಪಾದ್ ಅವರ ಬಳಿ ತೆರಳಿ, ಕಾಶಿ ಮತ್ತು ಗಂಗಾ ಸ್ನಾನದ ಮಹತ್ವದ ಬಗ್ಗೆ ಮನವರಿಕೆ ಮಾಡಿದ್ದಾರೆ. ಧಾರ್ಮಿಕ ಚರ್ಚೆಗಳಲ್ಲಿ ತೊಡಗಿಸಿಕೊಂಡು, ಅವರ ನಂಬಿಕೆಯನ್ನು ಗಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಂತರ, ಆಶೀರ್ವಾದ ಮಾಡುವ ಸೋಗಿನಲ್ಲಿ ಅರುಣ್ ಶ್ರೀಪಾದ್ ಅವರ ಕೈಲಿದ್ದ ಉಂಗುರವನ್ನು ಎಗರಿಸಿ ಕ್ಷಣ ಮಾತ್ರದಲ್ಲಿ ಕಣ್ಮರೆಯಾಗಿದ್ದಾರೆ. ವಂಚಕರು ಪರಾರಿಯಾದ ನಂತರವೂ, ಅರುಣ್ ಶ್ರೀಪಾದ್​​ಗೆ ತಮ್ಮ ಉಂಗುರ ಕಳುವಾಗಿರುವ ಬಗ್ಗೆ ತಕ್ಷಣವೇ ಅರಿವಾಗಿಲ್ಲ. ಮನೆಗೆ ತಲುಪಿದಾಗಷ್ಟೇ ಅವರು ವಂಚನೆಗೆ ಒಳಗಾಗಿರುವುದು ಗೊತ್ತಾಗಿದೆ. ಈ ಸಂಬಂಧ ಅವರು ವಿಜಯನಗರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

 

Loading...
Unable to load recommendations.
Follow Us
ಶಿವಪ್ರಸಾದ್​ ಬಿ.

2015 ರಲ್ಲಿ ಸಮಯ ವಾಹಿನಿ ಮೂಲಕ ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ವರದಿಗಾರನಾಗಿ ವೃತ್ತಿ ಆರಂಭಿಸಿದೆ. ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಹಿರಿಯ ಕ್ರೈಮ್ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ . ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿಗಳನ್ನು ಮಾಡುತ್ತಿದ್ದೇನೆ. ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನವನಾಗಿದ್ದು, ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಎಂಎಸ್ (ಕಮ್ಯೂನಿಕೇಷನ್) ಸ್ನಾತಕೋತ್ತರ ಪದವಿ ಹಾಗೂ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿ ಕಾನೂನು ಪದವೀಧರನಾಗಿದ್ದೇನೆ.

Read More