AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru: ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​; ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್​​

Bengaluru: ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​; ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್​​

ಪ್ರಜ್ವಲ್​ ಕುಮಾರ್ ಎನ್​ ವೈ
| Updated By: ಪ್ರಸನ್ನ ಹೆಗಡೆ|

Updated on: Dec 14, 2025 | 10:27 AM

Share

ದರೋಡೆ ಮತ್ತು ಬೆದರಿಕೆ ಪ್ರಕರಣ ಸಂಬಂಧ ಬೆಂಗಳೂರಿನ ವಿದ್ಯಾರಣ್ಯಪುರದಲ್ಲಿ ನಕಲಿ ಪಿಎಸ್ಐ ಹಾಗೂ ಆತನ ಗ್ಯಾಂಗ್​​ನ ಪೊಲೀಸರು ಬಂಧಿಸಿದ್ದಾರೆ. ಪೊಲೀಸ್ ವೇಷದಲ್ಲಿ ಮನೆಗೆ ನುಗ್ಗಿ ವ್ಯಕ್ತಿಯೊಬ್ಬರಿಗೆ ಹಲ್ಲೆ ಮಾಡಿದ್ದ ನಾಲ್ವರ ತಂಡ ಹಣ ದರೋಡೆ ಮಾಡಿತ್ತು. ಪ್ರಕರಣ ಸಂಬಂಧ ಪೊಲೀಸರು ಆರೋಪಿಗಳಿಂದ 1.37 ಲಕ್ಷ ನಗದು ಮತ್ತು ನಕಲಿ ಪೊಲೀಸ್ ಸಮವಸ್ತ್ರ ವಶಪಡಿಸಿಕೊಂಡಿದ್ದಾರೆ.

ಬೆಂಗಳೂರು, ಡಿಸೆಂಬರ್​​ 14: ನಗರದ ವಿದ್ಯಾರಣ್ಯಪುರದಲ್ಲಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಹೆಸರಲ್ಲಿ ಮನೆಗೆ ನುಗ್ಗಿ ಬೆದರಿಸಿ ಹಣ ದರೋಡೆ ಮಾಡಿದ್ದ ಘಟನೆ ಸಂಬಂಧ ಮಲ್ಲಿಕಾರ್ಜುನ್ ಅಲಿಯಾಸ್ ಪಿಎಸ್ಐ ಮಲ್ಲಣ್ಣ, ಪ್ರಮೋದ್, ವಿನಯ್ ಮತ್ತು ಋತ್ವಿಕ್ ಎಂಬ ನಾಲ್ವರ ತಂಡವನ್ನು ವಿದ್ಯಾರಣ್ಯಪುರ ಪೊಲೀಸರು ಬಂಧಿಸಿದ್ದಾರೆ. ಡಿ. 7ರಂದು ನಡೆದ ದರೋಡೆ ನಡೆದಿದ್ದು, ಆರೋಪಿ ಮಲ್ಲಿಕಾರ್ಜುನ್ ತಾನು ಪಿಎಸ್ಐ ಎಂದು ಪರಿಚಯಿಸಿಕೊಂಡಿದ್ದ. ತನ್ನ ಸಹಚರರೊಂದಿಗೆ ನವೀನ್ ಎಂಬುವರ ಮನೆಗೆ ನುಗ್ಗಿ ಗಾಂಜಾ ಮಾರಾಟ ಮಾಡುತ್ತಿದ್ದೀರಿ ಎಂದು ಬೆದರಿಸಿದ್ದಾನೆ. ಅಲ್ಲದೆ, ನವೀನ್‌ಗೆ ಲಾಠಿ ಮತ್ತು ಕಬ್ಬಿಣದ ರಾಡ್‌ನಿಂದ ಹಲ್ಲೆ ಮಾಡಿ, ಅವರ ಬಳಿಯಿದ್ದ ನಗದು ಮತ್ತು ಬ್ಯಾಂಕ್ ಖಾತೆಯಿಂದ ಹಣ ವರ್ಗಾವಣೆ ಮಾಡಿಸಿಕೊಂಡು ಗ್ಯಾಂಗ್​​ ಪರಾರಿಯಾಗಿತ್ತು. ಪ್ರಕರಣ ಬೆನ್ನತ್ತಿದ ಪೊಲೀಸರು ಆರೋಪಿಗಳನ್ನ ಬಂಧಿಸಿದ್ದಾರೆ. ಮಲ್ಲಿಕಾರ್ಜುನ್ ಎರಡು ಬಾರಿ ಪಿಎಸ್ಐ ಪರೀಕ್ಷೆಯಲ್ಲಿ ಫೇಲ್ ಆಗಿದ್ದರೂ ಪಿಎಸ್ಐ ಆಗಿದ್ದೇನೆ ಎಂದು ಬಿಲ್ಡಪ್ ಕೊಟ್ಟು ನಕಲಿ ಸಮವಸ್ತ್ರ ಹೊಲಿಸಿಕೊಂಡು ಫೋಟೋಶೂಟ್ ಕೂಡ ಮಾಡಿಸಿದ್ದ ಎಂಬುದು ತನಿಖೆ ವೇಳೆ ಬಯಲಾಗಿದೆ. ಬಂಧಿತರಿಂದ 87,000 ರೂ. ನಗದು, ಬ್ಯಾಂಕ್ ಖಾತೆಯಿಂದ 50,000 ಮತ್ತು ಪೊಲೀಸ್ ಸಮವಸ್ತ್ರವನ್ನು ವಶಪಡಿಸಿಕೊಳ್ಳಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.