ಸರಿಯಾಗಿ ಚಿಕಿತ್ಸೆ ನೀಡಿಲ್ಲ.. ಕೊರೊನಾದಿಂದ ಮೃತಪಟ್ಟವನ ಸಂಬಂಧಿಕರಿಂದ ಕಲ್ಲು ತೂರಾಟ
[lazy-load-videos-and-sticky-control id=”845kqlb9c3w”] ವಿಜಯಪುರ: ಖಾಸಗಿ ಆಸ್ಪತ್ರೆಯಲ್ಲಿ ಕೊರೊನಾಗೆ ವ್ಯಕ್ತಿ ಬಲಿಯಾಗಿದ್ದು, ಆಸ್ಪತ್ರೆಯಲ್ಲಿ ಸರಿಯಾಗಿ ಚಿಕಿತ್ಸೆ ನೀಡಿಲ್ಲವೆಂದು ಆರೋಪಿಸಿ ಆಸ್ಪತ್ರೆ ಎದುರು ಸಂಬಂಧಿಕರು ಕಲ್ಲು ತೂರಾಟ ಮಾಡಿ ಗಲಾಟೆ ಮಾಡಿರುವ ಘಟನೆ ವಿಜಯಪುರ ನಗರದ ಬಂಜಾರಾ ಆಸ್ಪತ್ರೆ ಬಳಿ ನಡೆದಿದೆ. ತಡರಾತ್ರಿ ಕೊರೊನಾದಿಂದ ಮೃತಪಟ್ಟ ವ್ಯಕ್ತಿಯ ಸಂಬಂಧಿಕರು ಆಸ್ಪತ್ರೆಯ ಆ್ಯಂಬುಲೆನ್ಸ್ ಗಾಜು ಪುಡಿ ಪುಡಿ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಸ್ಪತ್ರೆಯಲ್ಲಿ ಕೊರೊನಾಗೆ ಸರಿಯಾಗಿ ಚಿಕಿತ್ಸೆ ನೀಡದೆ ನಿರ್ಲಕ್ಷ್ಯವಹಿಸಿದ್ದಕ್ಕೆ ಸಾವು ಸಂಭವಿಸಿದೆ ಎಂದು ಆಸ್ಪತ್ರೆ ವಿರುದ್ಧ ಆರೋಪ ಮಾಡಿದ್ದಾರೆ. ಕೊರೊನಾ […]
[lazy-load-videos-and-sticky-control id=”845kqlb9c3w”]
ವಿಜಯಪುರ: ಖಾಸಗಿ ಆಸ್ಪತ್ರೆಯಲ್ಲಿ ಕೊರೊನಾಗೆ ವ್ಯಕ್ತಿ ಬಲಿಯಾಗಿದ್ದು, ಆಸ್ಪತ್ರೆಯಲ್ಲಿ ಸರಿಯಾಗಿ ಚಿಕಿತ್ಸೆ ನೀಡಿಲ್ಲವೆಂದು ಆರೋಪಿಸಿ ಆಸ್ಪತ್ರೆ ಎದುರು ಸಂಬಂಧಿಕರು ಕಲ್ಲು ತೂರಾಟ ಮಾಡಿ ಗಲಾಟೆ ಮಾಡಿರುವ ಘಟನೆ ವಿಜಯಪುರ ನಗರದ ಬಂಜಾರಾ ಆಸ್ಪತ್ರೆ ಬಳಿ ನಡೆದಿದೆ.
ತಡರಾತ್ರಿ ಕೊರೊನಾದಿಂದ ಮೃತಪಟ್ಟ ವ್ಯಕ್ತಿಯ ಸಂಬಂಧಿಕರು ಆಸ್ಪತ್ರೆಯ ಆ್ಯಂಬುಲೆನ್ಸ್ ಗಾಜು ಪುಡಿ ಪುಡಿ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಸ್ಪತ್ರೆಯಲ್ಲಿ ಕೊರೊನಾಗೆ ಸರಿಯಾಗಿ ಚಿಕಿತ್ಸೆ ನೀಡದೆ ನಿರ್ಲಕ್ಷ್ಯವಹಿಸಿದ್ದಕ್ಕೆ ಸಾವು ಸಂಭವಿಸಿದೆ ಎಂದು ಆಸ್ಪತ್ರೆ ವಿರುದ್ಧ ಆರೋಪ ಮಾಡಿದ್ದಾರೆ.
ಕೊರೊನಾ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಇಂಡಿ ತಾಲೂಕಿನ ಹಡಲಸಂಗ ತಾಂಡಾದ ಕಾಶಿನಾಥ(59) ಆಸ್ಪತ್ರೆಗೆ ದಾಖಲಾಗಿದ್ದರು. ಆದ್ರೆ ಚಿಕಿತ್ಸೆ ಫಲಿಸದೆ ನಿನ್ನೆ ಮೃತಪಟ್ಟಿದ್ದಾರೆ. ಇದಕ್ಕೆ ಆಕ್ರೋಶಗೊಂಡ ಸಂಬಂಧಿಕರು ತಡರಾತ್ರಿ ಆಸ್ಪತ್ರೆ ಎದುರು ಗಲಾಟೆ ಮಾಡಿದ್ದಾರೆ. ಸರಿಯಾಗಿ ಚಿಕಿತ್ಸೆ ನೀಡಿಲ್ಲವೆಂದು ಆರೋಪಿಸಿ ಕಲ್ಲು ತೂರಾಟ ಮಾಡಿದ್ದಾರೆ. ಸ್ಥಳಕ್ಕೆ ಗಾಂಧಿಚೌಕ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Published On - 8:08 am, Mon, 31 August 20