ಬಿಮ್ಸ್ ವೈದ್ಯರ ನಿರ್ಲಕ್ಷ್ಯದಿಂದ ಗರ್ಭಿಣಿ, ಹೊಟ್ಟೆಯಲ್ಲಿದ್ದ ಮಗು ಸಾವು ಆರೋಪ!

Edited By:

Updated on: Apr 13, 2026 | 11:31 AM

ಜಿಲ್ಲೆಯಲ್ಲಿ ಬಿಮ್ಸ್ ವೈದ್ಯರ ನಿರ್ಲಕ್ಷ್ಯ ಆರೋಪದ ಹಿನ್ನೆಲೆಯಲ್ಲಿ ಗರ್ಭಿಣಿ ಮಹಿಳೆಯ ಸಾವಿಗೆ ಸಂಬಂಧಿಸಿದಂತೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ತಾಲೂಕಿನ ತುರಮರಿ ಗ್ರಾಮದ ಗರ್ಭಿಣಿಯಾದ ಈರಮ್ಮ ಈರಪ್ಪ ಶಿಗೀಹಳ್ಳಿ (21) ಅವರನ್ನು ಏಪ್ರಿಲ್ 10ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಸರಿಯಾದ ಚಿಕಿತ್ಸೆ ನೀಡದ ಕಾರಣ ಈರಮ್ಮ ಹಾಗೂ ಹೊಟ್ಟೆಯಲ್ಲಿದ್ದ ಶಿಶು ಸಾವನ್ನಪ್ಪಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಸಾವಿನ ಬಳಿಕ ಮಧ್ಯರಾತ್ರಿ ಸಹಿ ಪಡೆದು ದೇಹವನ್ನು ಕಳುಹಿಸಲು ಯತ್ನಿಸಿದ್ದಾಗಿ ತಿಳಿದುಬಂದಿದೆ. ನಿರ್ಲಕ್ಷ್ಯ ವಹಿಸಿದ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಕುಟುಂಬಸ್ಥರು ಒತ್ತಾಯಿಸಿದ್ದು, ಎಪಿಎಂಸಿ ಠಾಣೆಯ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬೆಳಗಾವಿ, ಏಪ್ರಿಲ್ 13: ಜಿಲ್ಲೆಯಲ್ಲಿ ಬಿಮ್ಸ್ ವೈದ್ಯರ ನಿರ್ಲಕ್ಷ್ಯ ಆರೋಪದ ಹಿನ್ನೆಲೆಯಲ್ಲಿ ಗರ್ಭಿಣಿ ಮಹಿಳೆಯ ಸಾವಿಗೆ ಸಂಬಂಧಿಸಿದಂತೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ತಾಲೂಕಿನ ತುರಮರಿ ಗ್ರಾಮದ ಗರ್ಭಿಣಿಯಾದ ಈರಮ್ಮ ಈರಪ್ಪ ಶಿಗೀಹಳ್ಳಿ (21) ಅವರನ್ನು ಏಪ್ರಿಲ್ 10ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಸರಿಯಾದ ಚಿಕಿತ್ಸೆ ನೀಡದ ಕಾರಣ ಈರಮ್ಮ ಹಾಗೂ ಹೊಟ್ಟೆಯಲ್ಲಿದ್ದ ಶಿಶು ಸಾವನ್ನಪ್ಪಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಸಾವಿನ ಬಳಿಕ ಮಧ್ಯರಾತ್ರಿ ಸಹಿ ಪಡೆದು ದೇಹವನ್ನು ಕಳುಹಿಸಲು ಯತ್ನಿಸಿದ್ದಾಗಿ ತಿಳಿದುಬಂದಿದೆ. ನಿರ್ಲಕ್ಷ್ಯ ವಹಿಸಿದ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಕುಟುಂಬಸ್ಥರು ಒತ್ತಾಯಿಸಿದ್ದು, ಎಪಿಎಂಸಿ ಠಾಣೆಯ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Apr 13, 2026 11:25 AM
Loading...
Unable to load recommendations.
Follow Us
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More