ಸ್ಪಂದನಾ ವಿಜಯ್​ ರಾಘವೇಂದ್ರ ಅಂತಿಮ ದರ್ಶನಕ್ಕೆ ತವರು ಮನೆಯಲ್ಲಿ ಸಕಲ ಸಿದ್ಧತೆ; ಇಲ್ಲಿದೆ ವಿಡಿಯೋ

Updated on: Aug 08, 2023 | 6:03 PM

Spandana Vijay Raghavendra Funeral: ಸ್ಪಂದನಾ ವಿಜಯ್​ ರಾಘವೇಂದ್ರ ಅವರು ವಿದೇಶದಲ್ಲಿ ನಿಧನರಾದ್ದರಿಂದ ಅಲ್ಲಿನ ಕಾನೂನು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದ ನಂತರವಷ್ಟೇ ಮೃತದೇಹವನ್ನು ಭಾರತಕ್ಕೆ ಶಿಫ್ಟ್​ ಮಾಡಲಾಗುವುದು. ಅಂತಿಮ ದರ್ಶನ ಪಡೆಯಲು ಕುಟುಂಬಸ್ಥರು ಮತ್ತು ಅಭಿಮಾನಿಗಳು ಕಾದಿದ್ದಾರೆ.

ನಟ ವಿಜಯ್​ ರಾಘವೇಂದ್ರ (Vijay Raghavendra) ಅವರ ಪತ್ನಿ ಸ್ಪಂದನಾ ನಿಧನರಾಗಿ ಎರಡು ದಿನ ಕಳೆದಿದೆ. ಬ್ಯಾಂಕಾಕ್​ನಲ್ಲಿ ಆಗಸ್ಟ್​ 6ರಂದು ಅವರು ಕೊನೆಯುಸಿರು ಎಳೆದರು. ಇಂದು (ಆಗಸ್ಟ್​ 8) ಮೃತದೇಹವನ್ನು ಭಾರತಕ್ಕೆ ತರಲಾಗುತ್ತಿದೆ. ಅವರ ತಂದೆ ಬಿ.ಕೆ. ಶಿವರಾಂ (BK Shivaram) ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಸಿದ್ಧತೆ ಮಾಡಲಾಗುತ್ತಿದೆ. ಕುಟುಂಬದವರ ಜೊತೆ ವಿದೇಶಕ್ಕೆ ತೆರಳಿದ್ದ ಸ್ಪಂದನಾ ವಿಜಯ್​ ರಾಘವೇಂದ್ರ (Spandana Vijay Raghavendra) ಅವರು ಅಲ್ಲಿಯೇ ಹೃದಯಾಘಾತದಿಂದ ಮೃತರಾದರು. ವಿದೇಶದಲ್ಲಿ ನಿಧನರಾದ್ದರಿಂದ ಅಲ್ಲಿನ ಹಲವು ಕಾನೂನು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದ ನಂತರವಷ್ಟೇ ಮೃತದೇಹವನ್ನು ಭಾರತಕ್ಕೆ ಶಿಫ್ಟ್​ ಮಾಡಲಾಗುವುದು. ಅಂತಿಮ ದರ್ಶನ ಪಡೆಯಲು ಕುಟುಂಬಸ್ಥರು ಮತ್ತು ಅಭಿಮಾನಿಗಳು ಕಾದಿದ್ದಾರೆ. ಆಗಸ್ಟ್​ 9ರಂದು ಅಂತ್ಯಕ್ರಿಯೆ ನಡೆಯಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More