ವೃದ್ಧೆಯ ಅಂತ್ಯಕ್ರಿಯೆಯಲ್ಲಿ ನಿಯಮ ಉಲ್ಲಂಘನೆ..

[lazy-load-videos-and-sticky-control id=”uFXn9uENNt4″] ಬೆಳಗಾವಿ: ಕೊರೊನಾ ಸೋಂಕು ಜನರನ್ನು ಹಿಂಡಿ ಹಿಪ್ಪೆ ಮಾಡುತ್ತಿದೆ. ಈ ನಡುವೆ ಸರ್ಕಾರದ ಆದೇಶ ಮೀರಿ ಜನ ಸಾಗರ ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ಧೆಯೊಬ್ಬರು ಮನೆಯಲ್ಲೇ ಮೃತಪಟ್ಟಿದ್ದರು. ಈ ಹಿನ್ನೆಲೆಯಲ್ಲಿ ಇಂದು ಅವರ ಅಂತ್ಯಸಂಸ್ಕಾರ ಮಾಡಲಾಗಿದೆ. ನಿಯಮದ ಪ್ರಕಾರ ಅಂತ್ಯಕ್ರಿಯೆಗೆ 20ಕ್ಕೂ ಹೆಚ್ಚು ಜನ ಸೇರಬಾರದು. ಆದರೆ ಇಲ್ಲಿ ಅದ್ಯಾವುದನ್ನೂ ಲೆಕ್ಕಿಸದೆ ಜನ ಸೇರಿದ್ದಾರೆ. ಅಲ್ಲದೆ ಇವತ್ತು ರಾಜ್ಯಾದ್ಯಂತ ಸಂಡೇ ಲಾಕ್​ಡೌನ್ ಮಾಡಲಾಗಿದೆ. ಈ ನಡುವೆ ಪಾಲಿಕೆ ವಾಹನದಲ್ಲೇ […]

ವೃದ್ಧೆಯ ಅಂತ್ಯಕ್ರಿಯೆಯಲ್ಲಿ ನಿಯಮ ಉಲ್ಲಂಘನೆ..
ಆಯೇಷಾ ಬಾನು Edited By: ಸಾಧು ಶ್ರೀನಾಥ್​

Updated on: Jul 12, 2020 | 3:14 PM

[lazy-load-videos-and-sticky-control id=”uFXn9uENNt4″]

ಬೆಳಗಾವಿ: ಕೊರೊನಾ ಸೋಂಕು ಜನರನ್ನು ಹಿಂಡಿ ಹಿಪ್ಪೆ ಮಾಡುತ್ತಿದೆ. ಈ ನಡುವೆ ಸರ್ಕಾರದ ಆದೇಶ ಮೀರಿ ಜನ ಸಾಗರ ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ಧೆಯೊಬ್ಬರು ಮನೆಯಲ್ಲೇ ಮೃತಪಟ್ಟಿದ್ದರು. ಈ ಹಿನ್ನೆಲೆಯಲ್ಲಿ ಇಂದು ಅವರ ಅಂತ್ಯಸಂಸ್ಕಾರ ಮಾಡಲಾಗಿದೆ. ನಿಯಮದ ಪ್ರಕಾರ ಅಂತ್ಯಕ್ರಿಯೆಗೆ 20ಕ್ಕೂ ಹೆಚ್ಚು ಜನ ಸೇರಬಾರದು. ಆದರೆ ಇಲ್ಲಿ ಅದ್ಯಾವುದನ್ನೂ ಲೆಕ್ಕಿಸದೆ ಜನ ಸೇರಿದ್ದಾರೆ.

ಅಲ್ಲದೆ ಇವತ್ತು ರಾಜ್ಯಾದ್ಯಂತ ಸಂಡೇ ಲಾಕ್​ಡೌನ್ ಮಾಡಲಾಗಿದೆ. ಈ ನಡುವೆ ಪಾಲಿಕೆ ವಾಹನದಲ್ಲೇ 20ಕ್ಕೂ ಹೆಚ್ಚು ಜನರು ತೆರಳಿ ವೃದ್ಧೆ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿ ಲಾಕ್​ಡೌನ್ ನಿಯಮ ಉಲ್ಲಂಘನೆ ಮಾಡಿದ್ದಾರೆ. ಈ ವೇಳೆ ಜನ ಅಂತರ ಕಾಯ್ದುಕೊಳ್ಳುವುದನ್ನೂ ಮರೆತಿದ್ದಾರೆ. ಬೈಕ್​ಗಳ ಮೂಲಕ ಸಂಬಂಧಿಕರು, ಸ್ಥಳೀಯರು ಸದಾಶಿವ ನಗರ ಸ್ಮಶಾನಕ್ಕೆ ಬಂದಿದ್ದಾರೆ. ಪೊಲೀಸರ ಮುಂದೆಯೇ ಹತ್ತಾರು ಬೈಕ್​ಗಳು, ನೂರಾರು ಜನ ಸೇರಿದ್ರೂ ಅಧಿಕಾರಿಗಳು ಮಾತ್ರ ಮೌನವಾಗಿದ್ದಾರೆ.

Published On - 1:02 pm, Sun, 12 July 20

ಆಯೇಷಾ ಬಾನು

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Loading...
Unable to load recommendations.
Follow Us