ಮನೆಯೊಂದರ ಬೆಡ್ರೂಂನಲ್ಲಿ 2 ಹಾವುಗಳ ಜಗಳ; ಬೆಚ್ಚಿ ಬೀಳಿಸುವ ವಿಡಿಯೋ ವೈರಲ್
ಮನೆಯೊಂದರೊಳಗೆ ಸೇರಿಕೊಂಡಿದ್ದ 2 ಹಾವುಗಳು ಬೆಡ್ರೂಂನಲ್ಲಿ ಜಗಳವಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ಮನೆಯ ಮಾಲೀಕರು ತಮ್ಮ ಬೆಡ್ರೂಂನೊಳಗೆ ಹಾವುಗಳು ಭುಸುಗುಟ್ಟುತ್ತಾ ಜಗಳವಾಡುತ್ತಿರುವುದನ್ನು ಕಂಡು ಕಂಗಾಲಾಗಿದ್ದಾರೆ. ಬಳಿಕ ಅದನ್ನು ವಿಡಿಯೋ ಮಾಡಿಕೊಂಡಿದ್ದಾರೆ.
2 ಹಾವುಗಳು ಮನೆಯೊಂದರ ಬೆಡ್ರೂಂನಲ್ಲಿ ಜಗಳವಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಭಾರತೀಯ ಅರಣ್ಯ ಸೇವಾ ಅಧಿಕಾರಿ ಪರ್ವೀನ್ ಕಸ್ವಾನ್ ಅವರು ಎಕ್ಸ್ನಲ್ಲಿ ವೀಡಿಯೊವನ್ನು ಪೋಸ್ಟ್ ಮಾಡಿದ್ದಾರೆ. ಆ ಹಾವುಗಳನ್ನು ಹಿಡಿಯುವಂತೆ ಮನೆಯ ಮಾಲೀಕರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಫೋನ್ ಮಾಡಿದ ನಂತರ ಅಧಿಕಾರಿಗಳು ಸ್ಥಳಕ್ಕೆ ಬಂದು ಹಾವುಗಳನ್ನು ರಕ್ಷಿಸಿದ್ದಾರೆ. ಬಳಿಕ ಅವರನ್ನು ಸುರಕ್ಷಿತ ಸ್ಥಳಕ್ಕೆ ಬಿಡಲಾಯಿತು.
ಇನ್ನಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Latest Videos