ಮೆದುಳು ನಿಷ್ಕ್ರಿಯಗೊಂಡ ಪುನೀತ್ ಅಂಗಾಂಗ ದಾನ: ಸಂಬಂಧಿಕರ ನೋವಿನ ಮಾತು

Edited By:

Updated on: May 26, 2026 | 5:44 PM

ಮನೆ ಮಗನ ಸಾವಿನಲ್ಲೂ ಸಹ ಪೋಷಕರು ಸಾರ್ಥಕತೆ ಮೆರೆದಿದ್ದಾರೆ. ಅಪಘಾತದಲ್ಲಿ ಗಾಯಗೊಂಡು ಮೆದುಳು ನಿಷ್ಕ್ರಿಯಗೊಂಡಿದ್ದ ಹಾಸನ ತಾಲ್ಲೂಕಿನ ದೊಡ್ಡಕೊಂಡಗೊಳದ ಪುನೀತ್(30) ಅಂಗಾಗಗಳನ್ನ ಕುಟುಂಬಸ್ಥರು ದಾನ ಮಾಡಿದ್ದಾರೆ. ವೃತ್ತಿಯಲ್ಲಿ ಎಲೆಕ್ಟ್ರೀಷಿಯನ್ ಆಗಿದ್ದ ಪುನಿತ್, ಕೆಲಸದ ಸಲುವಾಗಿ ಸಾಮಗ್ರಿ ತರಲು ಹಾಸನಕ್ಕೆ ತೆರಳೊ ವೇಳೆ ಬೈಕ್ ಗೆ ಕಾರು ಡಿಕ್ಕಿಯಾಗಿತ್ತು. ಪರಿಣಾಮ ತಲೆಗೆ ಗಂಭೀರವಾಗಿ ಗಾಯಗೊಂಡು ಪ್ರಜ್ಞೆ ಕಳೆದುಕೊಂಡಿದ್ದ. ಮೆದುಳು ನಿಷ್ಕ್ರಿಯಗೊಂಡ ಹಿನ್ನೆಲೆಯಲ್ಲಿ ಪೋಷಕರು ಮೈಸೂರಿನ ಮಣಿಪಾಲ್ ಆಸ್ಪತ್ರೆಗೆ ಪುನಿತ್ ಅಂಗಾಂಗಗಳನ್ನ ದಾನ ಮಾಡಿದರು. ಇದರೊಂದಿಗೆ ಬೇರೆವರ ಜೀವನ ಬೆಳಗಿಸುವ ಮೂಲಕ ಸಮಾಜಕ್ಕೆ ಮಾದರಿಯಾಗಿದ್ದಾರೆ.

ಹಾಸನ, (ಮೇ 26): ಮನೆ ಮಗನ ಸಾವಿನಲ್ಲೂ ಸಹ ಪೋಷಕರು ಸಾರ್ಥಕತೆ ಮೆರೆದಿದ್ದಾರೆ. ಅಪಘಾತದಲ್ಲಿ ಗಾಯಗೊಂಡು ಮೆದುಳು ನಿಷ್ಕ್ರಿಯಗೊಂಡಿದ್ದ ಹಾಸನ (Hassan) ತಾಲ್ಲೂಕಿನ ದೊಡ್ಡಕೊಂಡಗೊಳದ ಪುನೀತ್(30) ಅಂಗಾಗಗಳನ್ನ (organs) ಕುಟುಂಬಸ್ಥರು ದಾನ ಮಾಡಿದ್ದಾರೆ. ವೃತ್ತಿಯಲ್ಲಿ ಎಲೆಕ್ಟ್ರೀಷಿಯನ್ ಆಗಿದ್ದ ಪುನಿತ್, ಕೆಲಸದ ಸಲುವಾಗಿ ಸಾಮಗ್ರಿ ತರಲು ಹಾಸನಕ್ಕೆ ತೆರಳೊ ವೇಳೆ ಬೈಕ್ ಗೆ ಕಾರು ಡಿಕ್ಕಿಯಾಗಿತ್ತು. ಪರಿಣಾಮ ತಲೆಗೆ ಗಂಭೀರವಾಗಿ ಗಾಯಗೊಂಡು ಪ್ರಜ್ಞೆ ಕಳೆದುಕೊಂಡಿದ್ದ. ಮೆದುಳು ನಿಷ್ಕ್ರಿಯಗೊಂಡ ಹಿನ್ನೆಲೆಯಲ್ಲಿ ಪೋಷಕರು ಮೈಸೂರಿನ ಮಣಿಪಾಲ್ ಆಸ್ಪತ್ರೆಗೆ ಪುನಿತ್ ಅಂಗಾಂಗಗಳನ್ನ ದಾನ ಮಾಡಿದರು. ಇದರೊಂದಿಗೆ ಬೇರೆವರ ಜೀವನ ಬೆಳಗಿಸುವ ಮೂಲಕ ಸಮಾಜಕ್ಕೆ ಮಾದರಿಯಾಗಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಮಂಜುನಾಥ ಕೆಬಿ

ಮಂಜುನಾಥ ಕೆಬಿ ಪತ್ರಿಕೋದ್ಯಮದಲ್ಲಿ ಕಳೆದ 17 ವರ್ಷಗಳಿಂದ ಸೇವೆ ಮಾಡುತ್ತಿದ್ದೇನೆ. ಕರುನಾಡಿನ ಹೆಮ್ಮೆಯ ಸುದ್ದಿ ವಾಹಿನಿ ಟಿವಿ9 ಕನ್ನಡ ಜೊತೆಗೆ 15ನೇ ವರ್ಷದ ಪಯಣ ನನ್ನದು. ಓದಿದ್ದು, ಮೈಸೂರು ವಿವಿಯಲ್ಲಿ ಕಾನೂನು ಪದವಿ, ಎರಡು ವರ್ಷ ವಕೀಲ ವೃತ್ತಿ ಬಳಿಕ ಮಾಧ್ಯಮ ಕ್ಷೇತ್ರಕ್ಕೆ ಆಗಮಿಸಿ ಟಿವಿ9 ವಾಹಿನಿ ಮೂಲಕ ಸಮಸ್ಯೆಗೆ ಧ್ವನಿಯಾಗಿ ಕಾಯಕ. ಕೊಡಗಿನಲ್ಲಿ ಐದುವರೆ ವರ್ಷ ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದು, ಇದೀಗ ಹಾಸನದ ಹಿರಿಯ ವರದಿಗಾರನಾಗಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದೇನೆ.

Read More