ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆಸಿ ಕುಟುಂಬದವರ ಮೇಲೆ ಹಲ್ಲೆ

Edited By:

Updated on: Apr 03, 2026 | 11:34 AM

ಜಿಲ್ಲೆಯ ಭರಮಸಾಗರ ಗ್ರಾಮದಲ್ಲಿ ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಗಲಾಟೆ ಸಂಭವಿಸಿದೆ. ಬೇವಿನಹಳ್ಳಿಯ ತೀರ್ಥೇಶ್ವರ ನಾಯ್ಕ್ ತಮ್ಮ ಅತ್ತೆ ಮಗಳು ಭಾವನಾ ಜೊತೆ ಫೆಬ್ರವರಿ 8ರಂದು ರಿಜಿಸ್ಟರ್ ಮ್ಯಾರೇಜ್ ಮಾಡಿಕೊಂಡಿದ್ದರು. ಆದರೆ ಭಾವನಾ ಪೋಷಕರು ಈ ಮದುವೆಗೆ ವಿರೋಧ ವ್ಯಕ್ತಪಡಿಸಿ, ತೀರ್ಥೇಶ್ವರ ವಿರುದ್ಧ ಮತಾಂತರ ಆರೋಪ ಮಾಡಿದ್ದಾರೆ. ನಿನ್ನೆ ರಾಜಿ ಸಂಧಾನಕ್ಕೆ ಕರೆದು ಗಲಾಟೆ ನಡೆದಿದ್ದು, ಯುವತಿಯ ದೊಡ್ಡಪ್ಪ ಮಲ್ಲೇಶ್ ನಾಯ್ಕ್ ಸೇರಿದಂತೆ ಮೂವರಿಗೆ ಗಾಯಗಳಾಗುವೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ

ಚಿತ್ರದುರ್ಗ, ಏಪ್ರಿಲ್ 03: ಜಿಲ್ಲೆಯ ಭರಮಸಾಗರ ಗ್ರಾಮದಲ್ಲಿ ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಗಲಾಟೆ ಸಂಭವಿಸಿದೆ. ಬೇವಿನಹಳ್ಳಿಯ ತೀರ್ಥೇಶ್ವರ ನಾಯ್ಕ್ ತಮ್ಮ ಅತ್ತೆ ಮಗಳು ಭಾವನಾ ಜೊತೆ ಫೆಬ್ರವರಿ 8ರಂದು ರಿಜಿಸ್ಟರ್ ಮದುವೆಯಾಗಿದ್ದರು. ಆದರೆ ಭಾವನಾ ಪೋಷಕರು ಈ ಮದುವೆಗೆ ವಿರೋಧ ವ್ಯಕ್ತಪಡಿಸಿ, ತೀರ್ಥೇಶ್ವರ ವಿರುದ್ಧ ಮತಾಂತರ ಆರೋಪ ಮಾಡಿದ್ದಾರೆ. ನಿನ್ನೆ ರಾಜಿ ಸಂಧಾನಕ್ಕೆ ಕರೆದು ಗಲಾಟೆ ನಡೆದಿದ್ದು, ಯುವತಿಯ ದೊಡ್ಡಪ್ಪ ಮಲ್ಲೇಶ್ ನಾಯ್ಕ್ ಸೇರಿದಂತೆ ಮೂವರಿಗೆ ಗಾಯಗಳಾಗುವೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ತೀರ್ಥೇಶ್ವರ ನಾಯ್ಕ್ ಮತ್ತು ಅವರ ಕುಟುಂಬದ ವಿರುದ್ಧ ಹಲ್ಲೆ ಆರೋಪ ಕೇಳಿಬಂದಿದೆ. ಈ ವೇಳೆ ನಡೆದ ಹಲ್ಲೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಘಟನೆ ಭರಮಸಾಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Basavaraj Mudnur

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More