ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಹುಟ್ಟುಹಬ್ಬ ಆಚರಿಸಿದ ಶಿವಣ್ಣ ಫ್ಯಾನ್ಸ್

Updated on: Jun 22, 2026 | 10:41 PM

ಶಿವರಾಜ್​ಕುಮಾರ್ ಅವರು ಈಗ ಶೂಟಿಂಗ್ ಸಲುವಾಗಿ ಚೆನ್ನೈನಲ್ಲಿ ಇದ್ದಾರೆ. ಅವರ ಜೊತೆ ಗೀತಾ ಕೂಡ ಇದ್ದಾರೆ. ಹಾಗಾಗಿ ಅಭಿಮಾನಿಗಳು ಕರ್ನಾಟಕದಿಂದ ಚೆನ್ನೈಗೆ ಹೋಗಿ ಅಲ್ಲಿಯೇ ಹುಟ್ಟುಹಬ್ಬವನ್ನು ಸೆಲೆಬ್ರೇಟ್ ಮಾಡಿದ್ದಾರೆ. ಆ ಸಂದರ್ಭದ ವಿಡಿಯೋ ಲಭ್ಯವಾಗಿದೆ. ಚೆನ್ನೈಗೆ ಹೋಗಿ ಜನ್ಮದಿನ ಆಚರಿಸಿದ ಅಭಿಮಾನಿಗಳ ಪ್ರೀತಿ ಕಂಡು ದಂಪತಿಗೆ ಖುಷಿ ಆಗಿದೆ.

ಗೀತಾ ಶಿವರಾಜ್​ಕುಮಾರ್ (Geetha Shiva Rajkumar) ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಅವರ ಜನ್ಮದಿನವನ್ನು ಅಭಿಮಾನಿಗಳು ಸಡಗರದಿಂದ ಆಚರಿಸಿದ್ದಾರೆ. ಕೇಕ್ ಕಟ್ ಮಾಡಿ ಸಂಭ್ರಮಿಸಲಾಗಿದೆ. ಶಿವರಾಜ್​ಕುಮಾರ್ ಅವರು ಈಗ ಶೂಟಿಂಗ್ ಸಲುವಾಗಿ ಚೆನ್ನೈನಲ್ಲಿ ಇದ್ದಾರೆ. ಅವರ ಜೊತೆ ಗೀತಾ ಕೂಡ ಇದ್ದಾರೆ. ಹಾಗಾಗಿ ಅಭಿಮಾನಿಗಳು ಕರ್ನಾಟಕದಿಂದ ಚೆನ್ನೈಗೆ ಹೋಗಿ ಅಲ್ಲಿಯೇ ಹುಟ್ಟುಹಬ್ಬವನ್ನು ಸೆಲೆಬ್ರೇಟ್ ಮಾಡಿದ್ದಾರೆ. ಆ ಸಂದರ್ಭದ ವಿಡಿಯೋ ಲಭ್ಯವಾಗಿದೆ. ಶಿವರಾಜ್​ಕುಮಾರ್ ಅವರ ವೃತ್ತಿಜೀವನಕ್ಕೆ ಗೀತಕ್ಕ ಸದಾ ಬೆಂಬಲವಾಗಿ ನಿಂತಿದ್ದಾರೆ. ಅನಾರೋಗ್ಯದ ಕಷ್ಟದ ದಿನಗಳಲ್ಲಿ ಕೂಡ ಕಾಳಜಿ ಮಾಡಿದ್ದಾರೆ. ಆ ಬಗ್ಗೆ ಅನೇಕ ಸಂದರ್ಶನಗಳಲ್ಲಿ ಶಿವರಾಜ್​ಕುಮಾರ್ ಅವರು ಹೇಳಿಕೊಂಡಿದ್ದಾರೆ. ಶಿವರಾಜ್​ಕುಮಾರ್ ಅವರ ಅಭಿಮಾನಿಗಳಿಗೆ ಗೀತಕ್ಕ ಬಗ್ಗೆ ತುಂಬ ಗೌರವ ಇದೆ. ಚೆನ್ನೈಗೆ ಹೋಗಿ ಜನ್ಮದಿನ ಆಚರಿಸಿದ ಅಭಿಮಾನಿಗಳ ಪ್ರೀತಿ ಕಂಡು ಶಿವರಾಜ್​ಕುಮಾರ್-ಗೀತಾ ದಂಪತಿಗೆ ಖುಷಿ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More