‘ಅಭಿಮಾನಿಗಳ ಶಿಳ್ಳೆ, ಚಪ್ಪಾಳೆ’; ಹೇಗಿತ್ತು ನೋಡಿ ಶಿವರಾಜ್​ಕುಮಾರ್ ಮನೆ ಎದುರು ಬರ್ತ್​​ಡೇ ಸಂಭ್ರಮ

Updated on: Jul 12, 2023 | 10:21 AM

ತಡರಾತ್ರಿಯೇ ಫ್ಯಾನ್ಸ್ ಶಿವಣ್ಣನ ಮನೆ ಎದುರು ನೆರೆದಿದ್ದರು. ಮಧ್ಯರಾತ್ರಿ ಶಿವರಾಜ್​ಕುಮಾರ್ ಅವರು ಕೇಕ್ ಕತ್ತರಿಸಿದರು.

ಶಿವರಾಜ್​ಕುಮಾರ್ ಅವರು ಇಂದು (ಜುಲೈ 12) ಅದ್ದೂರಿಯಾಗಿ ಬರ್ತ್​​ಡೇ ಆಚರಿಸಿಕೊಳ್ಳುತ್ತಿದ್ದಾರೆ. ಮಂಗಳವಾರ ತಡರಾತ್ರಿಯೇ ಫ್ಯಾನ್ಸ್ ಶಿವಣ್ಣನ ಮನೆ ಎದುರು ನೆರೆದಿದ್ದರು. ಮಧ್ಯರಾತ್ರಿ ಶಿವರಾಜ್​ಕುಮಾರ್ (Shivarajkumar) ಅವರು ಕೇಕ್ ಕತ್ತರಿಸಿದರು. ಈ ವೇಳೆ ಅಭಿಮಾನಿಗಳು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಈ ವಿಡಿಯೋ ಟಿವಿ9 ಕನ್ನಡಕ್ಕೆ ಲಭ್ಯವಾಗಿದೆ. ಶಿವಣ್ಣನಿಗೆ ಸೋಶಿಯಲ್ ಮೀಡಿಯಾದಲ್ಲಿ ವಿಶ್​ಗಳು ಬರುತ್ತಿವೆ. ಬರ್ತ್​ಡೇ ಪ್ರಯುಕ್ತ ಶಿವರಾಜ್​ಕುಮಾರ್ ಅಭಿಮಾನಿಗಳು ಹಲವು ರೀತಿಯ ಸಾಮಾಜಿಕ ಕೆಲಸಗಳನ್ನು ಹಮ್ಮಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More