ದರ್ಶನ್ಗೆ ಜಾಮೀನು: ತೂಗುದೀಪ ನಿಲಯದ ಬಳಿ ಅಭಿಮಾನಿಗಳ ಸಂಭ್ರಮ
Darshan Thoogudeepa: ರೇಣುಕಾ ಸ್ವಾಮಿ ಕೊಲೆ ಆರೋಪಿ ನಟ ದರ್ಶನ್ಗೆ ಇಂದು (ಡಿಸೆಂಬರ್ 13) ಕರ್ನಾಟಕ ರಾಜ್ಯ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಜುಲೈ 11 ರಂದು ನಟ ದರ್ಶನ್, ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದರು. ದರ್ಶನ್ಗೆ ಜಾಮೀನು ದೊರೆಯುತ್ತಿದ್ದಂತೆ ಅಭಿಮಾನಿಗಳು ಸಂಭ್ರಮ ಆರಂಭಿಸಿದ್ದಾರೆ. ರಾಜರಾಜೇಶ್ವರಿ ನಗರದ ಅವರ ಮನೆಯ ಬಳಿ ಹಾರಗಳನ್ನು ಹಾಕಿ ಅಭಿಮಾನಿಗಳು ಸಂಭ್ರಮಿಸಿದ ವಿಡಿಯೋ ಇಲ್ಲಿದೆ.
ರೇಣುಕಾ ಸ್ವಾಮಿ ಕೊಲೆ ಆರೋಪಿ ನಟ ದರ್ಶನ್ಗೆ ಇಂದು (ಡಿಸೆಂಬರ್ 13) ಕರ್ನಾಟಕ ರಾಜ್ಯ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ದರ್ಶನ್ ಜೊತೆಗೆ ಪವಿತ್ರಾ ಗೌಡ, ಅನುಕುಮಾರ್, ನಾಗರಾಜ್, ಲಕ್ಷ್ಮಣ್, ಪ್ರದೋಶ್, ಜಗದೀಶ್ ಅವರುಗಳಿಗೆ ಜಾಮೀನು ನೀಡಿದ್ದಾರೆ. ಜುಲೈ 11 ರಂದು ನಟ ದರ್ಶನ್, ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದರು. ಒಂದು ತಿಂಗಳ ಹಿಂದೆ ಅನಾರೋಗ್ಯದ ಕಾರಣ ನೀಡಿ ಮಧ್ಯಂತರ ಜಾಮೀನು ಪಡೆದು ಜೈಲಿನಿಂದ ಹೊರಬಂದಿದ್ದರು. ಇದೀಗ ನಿಯಮಿತ ಜಾಮೀನೆ ಅವರಿಗೆ ದೊರೆತಿದೆ. ಆ ಮೂಲಕ ಪ್ರಕರಣದಲ್ಲಿ ತುಸು ನಿರಾಳತೆ ಒದಗಿದೆ. ದರ್ಶನ್ಗೆ ಜಾಮೀನು ದೊರೆಯುತ್ತಿದ್ದಂತೆ ಅಭಿಮಾನಿಗಳು ಸಂಭ್ರಮ ಆರಂಭಿಸಿದ್ದಾರೆ. ರಾಜರಾಜೇಶ್ವರಿ ನಗರದ ಅವರ ಮನೆಯ ಬಳಿ ಹಾರಗಳನ್ನು ಹಾಕಿ ಅಭಿಮಾನಿಗಳು ಸಂಭ್ರಮಿಸಿದ ವಿಡಿಯೋ ಇಲ್ಲಿದೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Dec 13, 2024 06:18 PM