ಶಿವರಾಜ್ಕುಮಾರ್ ನಟನೆಯ ‘ಭಜರಂಗಿ 2’ ರಿಲೀಸ್ಗೆ ತಯಾರಿ ಹೇಗಿದೆ?
ಶಿವರಾಜ್ಕುಮಾರ್ ನಟನೆಯ ‘ಭಜರಂಗಿ 2’ ಸಿನಿಮಾ ರಿಲೀಸ್ಗೆ ಅದ್ದೂರಿಯಾಗಿ ಪ್ಲ್ಯಾನ್ ಮಾಡಿಕೊಳ್ಳಲಾಗಿದೆ. ಈಗಾಗಲೇ ಸಿನಿಮಾದ ಕಟೌಟ್ಗಳನ್ನು ಚಿತ್ರಮಂದಿರಗಳ ಎದುರು ನಿಲ್ಲಿಸಲಾಗಿದೆ. ಇದಕ್ಕೆ ಅಭಿಮಾನಿಗಳು ಹಾಲಿನ ಅಭಿಷೇಕ ಮಾಡಲಿದ್ದಾರೆ.
ಶಿವರಾಜ್ಕುಮಾರ್ ನಟನೆಯ ‘ಭಜರಂಗಿ 2’ ಸಿನಿಮಾ ರಿಲೀಸ್ಗೆ ಕೌಂಟ್ಡೌನ್ ಶುರುವಾಗಿದೆ. ಈ ಸಿನಿಮಾ ರಾಜ್ಯಾದ್ಯಂತ ಶುಕ್ರವಾರ (ಅಕ್ಟೋಬರ್ 29) ಭರ್ಜರಿಯಾಗಿ ರಿಲೀಸ್ ಆಗುತ್ತಿದೆ. ನಟ ಶಿವರಾಜ್ಕುಮಾರ್ ಹಾಗೂ ಹರ್ಷ ಕಾಂಬಿನೇಷನ್ನಲ್ಲಿ ಮೂಡಿ ಬಂದ ಮೂರನೇ ಸಿನಿಮಾ ಇದಾಗಿದ್ದು, ಪ್ರೇಕ್ಷಕರು ಇದನ್ನು ಹೇಗೆ ಸ್ವೀಕರಿಸುತ್ತಾರೆ ಎನ್ನುವ ಕುತೂಹಲ ಸದ್ಯದ್ದು.
ಕೊವಿಡ್ ಎರಡನೇ ಅಲೆ ಕಡಿಮೆ ಆದ ನಂತರ ತೆರೆಗೆ ಬರುತ್ತಿರುವ ಕನ್ನಡದ ಮೂರನೇ ಬಿಗ್ ಬಜೆಟ್ ಸಿನಿಮಾ ಇದಾಗಿದೆ. ಫ್ಯಾಂಟಸಿ ಕಥೆ ಹೊಂದಿರುವ ಚಿತ್ರ ಇದಾಗಿದ್ದು, ರಾಜ್ಯಾದ್ಯಂತ ಬರೋಬ್ಬರಿ 300 ಚಿತ್ರಮಂದಿರಗಳಲ್ಲಿ ಸಿನಿಮಾ ತೆರೆಗೆ ಬರುತ್ತಿದೆ. ಹೀಗಾಗಿ, ಮೊದಲ ದಿನವೇ ಚಿತ್ರ ಒಳ್ಳೆಯ ಕಲೆಕ್ಷನ್ ಮಾಡುವ ನಿರೀಕ್ಷೆ ಇದೆ.
ಶಿವರಾಜ್ಕುಮಾರ್ ನಟನೆಯ ‘ಭಜರಂಗಿ 2’ ಸಿನಿಮಾ ರಿಲೀಸ್ಗೆ ಅದ್ದೂರಿಯಾಗಿ ಪ್ಲ್ಯಾನ್ ಮಾಡಿಕೊಳ್ಳಲಾಗಿದೆ. ಈಗಾಗಲೇ ಸಿನಿಮಾದ ಕಟೌಟ್ಗಳನ್ನು ಚಿತ್ರಮಂದಿರಗಳ ಎದುರು ನಿಲ್ಲಿಸಲಾಗಿದೆ. ಇದಕ್ಕೆ ಅಭಿಮಾನಿಗಳು ಹಾಲಿನ ಅಭಿಷೇಕ ಮಾಡಲಿದ್ದಾರೆ.
ಇದನ್ನೂ ಓದಿ: ಶಿವರಾಜ್ಕುಮಾರ್ ಕಟೌಟ್, ಹಾಲಿನ ಅಭಿಷೇಕ, ಮುಂಜಾನೆ 5 ಗಂಟೆ ಶೋ; ‘ಭಜರಂಗಿ 2’ ರಿಲೀಸ್ಗೆ ಕೌಂಟ್ಡೌನ್