ಶಾಸಕ ಎಸ್ಆರ್ ಶ್ರೀನಿವಾಸ್ಗೆ ಸಚಿವ ಸ್ಥಾನ ಸಿಗಲೆಂದು ಮಂಜುನಾಥನಿಗೆ ಸಾಮೂಹಿಕ ಮುಡಿ ನೀಡಿದ ಅಭಿಮಾನಿಗಳು
ಗುಬ್ಬಿ ಶಾಸಕ ಎಸ್ಆರ್ ಶ್ರೀನಿವಾಸ್ಗೆ ಸಚಿವ ಸ್ಥಾನ ಕೊಡುವಂತೆ ಗುಬ್ಬಿ ವಾಸಣ್ಣ ಅಭಿಮಾನಿ ಬಳಗದವರು ಧರ್ಮಸ್ಥಳದ ಮಂಜುನಾಥ ಸ್ವಾಮಿಯ ಮೊರೆ ಹೋಗಿದ್ದಾರೆ.
ತುಮಕೂರು: ರಾಜ್ಯದಲ್ಲಿ ಸಿದ್ದರಾಮಯ್ಯ (Siddaramaiah) ನೇತೃತ್ವದ ನೂತನ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದು, ಮೇ. 20ರಂದು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇವರೊಂದಿಗೆ ಕೆಲ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದು, ಈ ಸಂಬಂಧ ಶಾಸಕರ ಲಾಬಿ ಜೋರಾಗಿಯೇ ನಡೆಯುತ್ತದೆ. ಇದರ ಮಧ್ಯೆ ಸಂಪುಟದಲ್ಲಿ ಸ್ಥಾನ ಪಡೆಯಲು ವಿವಿಧ ರೀತಿಯಲ್ಲಿ ಶಾಸಕರು ಯತ್ನಿಸುತ್ತಿದ್ದಾರೆ. ಗುಬ್ಬಿ ಶಾಸಕ ಎಸ್ಆರ್ ಶ್ರೀನಿವಾಸ್ಗೆ ಸಚಿವ ಸ್ಥಾನ ನೀಡಲಿ ಗುಬ್ಬಿ ವಾಸಣ್ಣ ಅಭಿಮಾನಿ ಬಳಗದವರು ಧರ್ಮಸ್ಥಳದ ಮಂಜುನಾಥ ಸ್ವಾಮಿಯ ಮೊರೆ ಹೋಗಿದ್ದಾರೆ. ಜೊತೆಗೆ ದೇವರಿಗೆ ಉರುಳು ಸೇವೆ ಮಾಡಿ, ಮುಡಿ ಕೊಟ್ಟಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.