‘ಕೆಜಿಎಫ್ 2’ ಚಿತ್ರಕ್ಕಾಗಿ ಚಾಮುಂಡಿ ಬೆಟ್ಟದಲ್ಲಿ ಅಭಿಮಾನಿಗಳ ವಿಶೇಷ ಪೂಜೆ
ಬೆಂಗಳೂರಿನ ಒರಾಯನ್ ಮಾಲ್ನಲ್ಲಿರುವ ಪಿವಿಆರ್ ಥಿಯೇಟರ್ನಲ್ಲಿ ‘ಕೆಜಿಎಫ್ 2’ ಚಿತ್ರದ ಟ್ರೇಲರ್ ರಿಲೀಸ್ ಆಗಲಿದೆ. ನಟ ಶಿವರಾಜ್ಕುಮಾರ್ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಲಿದ್ದಾರೆ.
ರಾಕಿಂಗ್ ಸ್ಟಾರ್ ಯಶ್ (Yash) ನಟನೆಯ ‘ಕೆಜಿಎಫ್ 2’ ಚಿತ್ರದ ಟ್ರೇಲರ್ ಇಂದು (ಮಾರ್ಚ್ 27) ರಿಲೀಸ್ ಆಗುತ್ತಿದೆ. ಸಿನಿಮಾದ ಟ್ರೇಲರ್ (KGF 2 Trailer) ಕಣ್ತುಂಬಿಕೊಳ್ಳೋಕೆ ಅಭಿಮಾನಿಗಳು ಕಾದು ಕೂತಿದ್ದಾರೆ. ಜತೆಗೆ ಟ್ರೇಲರ್ ಸ್ವಾಗತಕ್ಕೆ ಫ್ಯಾನ್ಸ್ ಕಡೆಯಿಂದ ದೊಡ್ಡ ಮಟ್ಟದ ಸಿದ್ಧತೆ ನಡೆದಿದೆ. ಅನೇಕ ಪ್ಲ್ಯಾನ್ಗಳನ್ನು ಅಭಿಮಾನಿಗಳು ರೂಪಿಸಿದ್ದಾರೆ. ಈ ಮಧ್ಯೆ ಚಿತ್ರಕ್ಕೆ ಒಳ್ಳೆಯದಾಗಲಿ ಎಂದು ಕೋರಿ ಅಭಿಮಾನಿಗಳು ವಿಶೇಷ ಪೂಜೆ ಮಾಡುತ್ತಿದ್ದಾರೆ. ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ (Chamundi Hills) ಯಶ್ ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬೆಂಗಳೂರಿನ ಒರಾಯನ್ ಮಾಲ್ನಲ್ಲಿರುವ ಪಿವಿಆರ್ ಥಿಯೇಟರ್ನಲ್ಲಿ ‘ಕೆಜಿಎಫ್ 2’ ಚಿತ್ರದ ಟ್ರೇಲರ್ ರಿಲೀಸ್ ಆಗಲಿದೆ. ನಟ ಶಿವರಾಜ್ಕುಮಾರ್ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಲಿದ್ದಾರೆ. ಕರಣ್ ಅವರು ಕಾರ್ಯಕ್ರಮದ ನಿರೂಪಣೆ ಮಾಡಲಿದ್ದಾರೆ. ಚಿತ್ರದ ಹೀರೋ ಯಶ್, ನಾಯಕಿ ಶ್ರೀನಿಧಿ ಶೆಟ್ಟಿ ಮೊದಲಾದವರು ಕಾರ್ಯಕ್ರಮದಲ್ಲಿ ಹಾಜರಿ ಹಾಕಲಿದ್ದಾರೆ.
ಇದನ್ನೂ ಓದಿ: ಕರ್ನಾಟಕದಲ್ಲಿ ‘ಕೆಜಿಎಫ್ 2’ಗೆ ಫೈಟ್ ನೀಡಲು ‘ಬೀಸ್ಟ್’ ಮಾಡಿದ ಪ್ಲ್ಯಾನ್ ಏನು? ಇಲ್ಲಿದೆ ವಿವರ
‘ಕೆಜಿಎಫ್ 2’ ಟ್ರೇಲರ್ ಸ್ವಾಗತಕ್ಕೆ ಕೌಂಟ್ಡೌನ್; ಫ್ಯಾನ್ಸ್ ಕಡೆಯಿಂದಲೂ ನಡೆದಿದೆ ಭರದ ಸಿದ್ಧತೆ