‘ಎಲ್ಲರೂ ನೋಡಲೇಬೇಕಾದ ಸಿನಿಮಾ’; ರಾಮಾಯಣ ನೋಡಿ ವಿಮರ್ಶೆ ಕೊಟ್ಟ ಫ್ಯಾನ್ಸ್

Updated on: Nov 05, 2026 | 1:15 PM

ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ರಾಮಾಯಣ ಸಿನಿಮಾ ಭಾರಿ ಅದ್ದೂರಿಯಾಗಿ ಬಿಡುಗಡೆಗೊಂಡಿದೆ. ರಣಬೀರ್ ಕಪೂರ್ ಶ್ರೀರಾಮ, ಸಾಯಿ ಪಲ್ಲವಿ ಸೀತಾ, ಹಾಗೂ ಯಶ್ ರಾವಣನಾಗಿ ನಟಿಸಿದ್ದಾರೆ. ಯಶ್ ಅವರ ರಾವಣನ ಪಾತ್ರಕ್ಕೆ ಅಭಿಮಾನಿಗಳು ಫಿದಾ ಆಗಿದ್ದು, ಅದ್ಭುತ ಕಮ್‌ಬ್ಯಾಕ್ ಎಂದು ಹೊಗಳಿದ್ದಾರೆ. ಕುಟುಂಬ ಸಮೇತ ನೋಡಬೇಕಾದ ಸಿನಿಮಾ ಇದಾಗಿದೆ ಎಂದು ಪ್ರೇಕ್ಷಕರು ತಿಳಿಸಿದ್ದಾರೆ.

ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ರಾಮಾಯಣ ಸಿನಿಮಾ ಅದ್ದೂರಿಯಾಗಿ ಬಿಡುಗಡೆಯಾಗಿದ್ದು, ದೇಶಾದ್ಯಂತ ಅಪಾರ ಪ್ರೇಕ್ಷಕರನ್ನು ಸೆಳೆದಿದೆ. ಶ್ರೀರಾಮನಾಗಿ ರಣಬೀರ್ ಕಪೂರ್, ಸೀತೆಯಾಗಿ ಸಾಯಿ ಪಲ್ಲವಿ ಹಾಗೂ ರಾವಣನ ಪಾತ್ರದಲ್ಲಿ ಯಶ್ ಅಭಿನಯಿಸಿದ್ದಾರೆ. 2,000 ಕೋಟಿ ಬಜೆಟ್‌ನಲ್ಲಿ ನಿರ್ಮಿಸಲಾಗಿರುವ ಈ ಚಿತ್ರ ವಿಶ್ವದಾದ್ಯಂತ 50 ಸಾವಿರಕ್ಕೂ ಹೆಚ್ಚು ಪರದೆಗಳಲ್ಲಿ ಪ್ರದರ್ಶನ ಕಾಣುತ್ತಿದೆ.

ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ವಿಶೇಷವಾಗಿ ನಟ ಯಶ್ ಅವರ ರಾವಣನ ಪಾತ್ರ ಜನಮನ ಗೆದ್ದಿದೆ. ಅಭಿಮಾನಿಗಳು ಯಶ್ ಅಭಿನಯವನ್ನು ‘ಅದ್ಭುತ ಕಮ್‌ಬ್ಯಾಕ್’ ಎಂದು ಬಣ್ಣಿಸಿದ್ದಾರೆ. ಚಿತ್ರದ ವಿಎಫ್‌ಎಕ್ಸ್ ಹಾಗೂ 3D ತಂತ್ರಜ್ಞಾನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದು, 3D ಯಲ್ಲಿ ಸಿನಿಮಾ ನೋಡುವಂತೆ ಸಲಹೆ ನೀಡಿದ್ದಾರೆ. ‘ಪ್ರತಿಯೊಬ್ಬರೂ ಬಂದು ಸಿನಿಮಾ ನೋಡಬೇಕು. ನಮ್ಮ ಕನ್ನಡಿಗರು ಇಂತಹ ದೊಡ್ಡ ಮಟ್ಟದ ಸಿನಿಮಾದಲ್ಲಿ ಭಾಗಿಯಾಗಿರುವುದು ಹೆಮ್ಮೆಯ ವಿಷಯ’ ಎಂದು ಅಭಿಮಾನಿಗಳು ಹೇಳಿದ್ದಾರೆ. ‘ಕುಟುಂಬ ಸಮೇತ ಮಕ್ಕಳೆಲ್ಲರನ್ನೂ ಕರೆದುಕೊಂಡು ಬಂದು ನೋಡಿ, ಈ ಸಿನಿಮಾ ಮತ್ತೆ ಸಿಗುವುದಿಲ್ಲ’ ಎಂದು ಪ್ರೇಕ್ಷಕರು ಮನವಿ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More