ಅರಣ್ಯ ಭವನದಿಂದ ಕಾರು ಏರಲು ಸಾಕಷ್ಟು ಕಷ್ಟಪಟ್ಟ ಪವನ್ ಕಲ್ಯಾಣ್

Updated on: Aug 09, 2024 | 8:08 AM

ಪವನ್ ಕಲ್ಯಾಣ್ ಅವರು ಬೆಂಗಳೂರಿಗೆ ಬಂದಾಗ ಫ್ಯಾನ್ಸ್ ಮುತ್ತಿಕೊಳ್ಳೋಕೆ ಆರಂಭಿಸಿದ್ದರು. ಅರಣ್ಯ ಭವನದಿಂದ ಅವರು ಕಾರು ಏರುವುದಕ್ಕೆ ಸಾಕಷ್ಟು ತೊಂದರೆ ಅನುಭವಿಸಿದರು. ಈ ಸಂದರ್ಭದ ವಿಡಿಯೋ ಟಿವಿ9 ಕನ್ನಡಕ್ಕೆ ಲಭ್ಯವಾಗಿದೆ. ಆ ಸಂದರ್ಭದ ವಿಡಿಯೋ ಇಲ್ಲಿದೆ.

ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಮತ್ತು ತೆಲುಗು ನಟ ಪವನ್ ಕಲ್ಯಾಣ್ ಅವರು ಆಗಸ್ಟ್​ 8ರಂದು ಬೆಂಗಳೂರಿನ ಅರಣ್ಯ ಭವನಕ್ಕೆ ಭೇಟಿ ನೀಡಿದ್ದರು. ಅವರಿಗೆ ದೊಡ್ಡ ಅಭಿಮಾನಿವರ್ಗ ಇದೆ. ಅವರು ಬೆಂಗಳೂರಿಗೆ ಬಂದಾಗ ಫ್ಯಾನ್ಸ್ ಮುತ್ತಿಕೊಳ್ಳೋಕೆ ಆರಂಭಿಸಿದ್ದರು. ಅರಣ್ಯ ಭವನದಿಂದ ಅವರು ಕಾರು ಏರುವುದಕ್ಕೆ ಸಾಕಷ್ಟು ತೊಂದರೆ ಅನುಭವಿಸಿದರು. ಈ ಸಂದರ್ಭದ ವಿಡಿಯೋ ಟಿವಿ9 ಕನ್ನಡಕ್ಕೆ ಲಭ್ಯವಾಗಿದೆ. ಬೆಂಗಳೂರಿಗೆ ಆಗಮಿಸಿದ ಬಳಿಕ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಪವನ್ ಕಲ್ಯಾಣ್ ಕುಶಲೋಪರಿ ವಿಚಾರಿಸಿದರು. ಬಳಿಕ ಅರಣ್ಯ ಸಚಿವ ಈಶ್ವರ್ ಖಂಡ್ರೆ ಜೊತೆಗೆ ಮಲ್ಲೇಶ್ವರಂನಲ್ಲಿರುವ ಅರಣ್ಯ ಭವನಕ್ಕೆ ತೆರಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More