ಗಿಲ್ಲಿ ಮೇಲಿನ ಅಭಿಮಾನದಿಂದ ವೇದಿಕೆಗೆ ನುಗ್ಗಿದ ಫ್ಯಾನ್ಸ್; ವಿಡಿಯೋ ನೋಡಿ
ಕನಕೋತ್ಸವ ಕಾರ್ಯಕ್ರಮದ ವೇದಿಕೆಗೆ ಬಿಗ್ ಬಾಸ್ ವಿನ್ನರ್ ಗಿಲ್ಲಿ ನಟ ಬಂದಾಗ ಕೆಲವು ಅಭಿಮಾನಿಗಳು ನುಗ್ಗಿದ್ದಾರೆ. ಕೂಡಲೇ ಅವರನ್ನು ನಿಯಂತ್ರಿಸಲಾಯಿತು. ಗಿಲ್ಲಿ ಮೇಲೆ ಜನರಿಗೆ ಇರುವ ಕ್ರೇಜ್ ಎಷ್ಟು ಎಂಬುದಕ್ಕೆ ಈ ಘಟನೆ ಸಾಕ್ಷಿ ಆಗಿದೆ. ಆ ಸಂದರ್ಭದ ವಿಡಿಯೋ ಇಲ್ಲಿದೆ ನೋಡಿ..
ಕನಕಪುರದಲ್ಲಿ ಕನಕೋತ್ಸವ ಕಾರ್ಯಕ್ರಮ ನಡೆದಿದೆ. ‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada 12) ರಿಯಾಲಿಟಿ ಶೋ ವಿನ್ನರ್ ಗಿಲ್ಲಿ ನಟ ಅವರು ಇದರಲ್ಲಿ ಭಾಗಿ ಆಗಿದ್ದಾರೆ. ಗಿಲ್ಲಿ ಅವರು ಹೋದಲ್ಲೆಲ್ಲ ಅಭಿಮಾನಿಗಳು ಸೇರುತ್ತಿದ್ದಾರೆ. ಗಿಲ್ಲಿ ಜೊತೆ ಫೋಟೋ ತೆಗೆದುಕೊಳ್ಳಬೇಕು ಎಂಬುದು ಫ್ಯಾನ್ಸ್ ಆಸೆ. ಕನಕೋತ್ಸವ ಕಾರ್ಯಕ್ರಮದ ವೇದಿಕೆಗೆ ಗಿಲ್ಲಿ ಬಂದಾಗ ಕೆಲವು ಅಭಿಮಾನಿಗಳು ನುಗ್ಗಿದ್ದಾರೆ. ಕೂಡಲೇ ಅವರನ್ನು ನಿಯಂತ್ರಿಸಲಾಯಿತು. ಗಿಲ್ಲಿ ನಟ (Gilli Nata) ಮೇಲೆ ಜನರಿಗೆ ಇರುವ ಕ್ರೇಜ್ ಎಷ್ಟು ಎಂಬುದಕ್ಕೆ ಈ ಘಟನೆ ಸಾಕ್ಷಿ ಆಗಿದೆ. ಇದೇ ಕಾರ್ಯಕ್ರಮದಲ್ಲಿ ಮ್ಯೂಟೆಂಟ್ ರಘು, ಕಾವ್ಯಾ ಶೈವ, ಧನುಷ್ ಕೂಡ ಭಾಗಿ ಆಗಿದ್ದಾರೆ. ಕಾರ್ಯಕ್ರಮದ ಅಂಗವಾಗಿ ಮೆಹಂದಿ ಹಾಗೂ ರಂಗೋಲಿ ಸ್ಪರ್ಧೆ ಆಯೋಜಿಸಲಾಗಿತ್ತು.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
