ಕಂಠೀರವ ಸ್ಟುಡಿಯೋ ಹೊರಗೆ ‘ಪುಷ್ಪ’ ಘೋಷಣೆ; ಅಲ್ಲು ಅರ್ಜುನ್ ನೋಡೋಕೆ ಅಭಿಮಾನಿಗಳ ದಂಡು
ಕಂಠೀರವ ಸ್ಟುಡಿಯೋದ ಹೊರ ಭಾಗದಲ್ಲಿ ಅಭಿಮಾನಿಗಳು ದೊಡ್ಡ ಮಟ್ಟದಲ್ಲಿ ನೆರೆದಿದ್ದರು. ಈ ವೇಳೆ ‘ಪುಷ್ಪ’, ‘ಪುಷ್ಪ’ ಎಂದು ಅಭಿಮಾನಿಗಳು ಕೂಗಿದ್ದಾರೆ.
ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ (Puneeth Rajkumar) ನಿಧನರಾಗಿ ಮೂರು ತಿಂಗಳ ಬಳಿಕ ಟಾಲಿವುಡ್ ನಟ ಅಲ್ಲು ಅರ್ಜುನ್ (Allu Arjun) ಪುನೀತ್ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಪುನೀತ್ ಸಹೋದರ ಶಿವರಾಜ್ಕುಮಾರ್ ಅವರನ್ನೂ ಭೇಟಿ ಮಾಡಿ ಸಮಾಧಾನದ ಮಾತುಗಳನ್ನು ಆಡಿದ್ದಾರೆ. ಇದರ ವಿಡಿಯೋ ಹಾಗೂ ಫೋಟೋಗಳು ವೈರಲ್ ಆಗುತ್ತಿವೆ. ಅಲ್ಲು ಅರ್ಜುನ್ ಅವರು ಪುನೀತ್ ಸಮಾಧಿಗೆ ಭೇಟಿ ನೀಡಿ ಪುಷ್ಪ ನಮನ ಸಲ್ಲಿಸಿದ್ದಾರೆ. ಇದರ ಜತೆಜತೆಗೆ ರಾಜ್ಕುಮಾರ್, ಪಾರ್ವತಮ್ಮ ಹಾಗೂ ಅಂಬರೀಷ್ ಸಮಾಧಿಗೂ ನಮನ ಸಲ್ಲಿಸಿದ್ದಾರೆ. ಕಂಠೀರವ ಸ್ಟುಡಿಯೋದ ಹೊರ ಭಾಗದಲ್ಲಿ ಅಭಿಮಾನಿಗಳು ದೊಡ್ಡ ಮಟ್ಟದಲ್ಲಿ ನೆರೆದಿದ್ದರು. ಈ ವೇಳೆ ‘ಪುಷ್ಪ’, ‘ಪುಷ್ಪ’ ಎಂದು ಅಭಿಮಾನಿಗಳು ಕೂಗಿದ್ದಾರೆ. ಅಲ್ಲು ಅರ್ಜುನ್ ನಟನೆಯ ‘ಪುಷ್ಪ’ ಸಿನಿಮಾ (Pushpa Movie) ಇತ್ತೀಚೆಗೆ ಗೆಲುವು ಕಂಡಿದೆ. ಪುಷ್ಪರಾಜ್ ಪಾತ್ರದಲ್ಲಿ ಅಲ್ಲು ಅರ್ಜುನ್ ಕಾಣಿಸಿಕೊಂಡಿದೆ.
ಇದನ್ನೂ ಓದಿ: ಪುನೀತ್ ಮನೆಯಲ್ಲಿ ಅಪ್ಪು ಫೋಟೋ ಮುಂದೆ ಅಲ್ಲು ಅರ್ಜುನ್ ಭಾವುಕ ಕ್ಷಣ; ವಿಡಿಯೋ ನೋಡಿ
ಪುನೀತ್ ಮನೆಗೆ ಭೇಟಿ, ಸಮಾಧಿಗೆ ನಮನ; ಇಲ್ಲಿವೆ ಅಲ್ಲು ಅರ್ಜುನ್ ಭೇಟಿಯ ಫೋಟೋ ಚಿತ್ರಣ

ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ

ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್

ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್

ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್
