AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸ್​​ ಟಿಕೆಟ್​​ ದರ ಏರಿಕೆ ಬಳಿಕವೂ ಬಿಎಂಟಿಸಿಯಿಂದ 'ಡಕೋಟಾ ಬಸ್'​​ ಸೇವೆ!: ಪ್ರಯಾಣಿಕರು ಕಿಡಿ

ಬಸ್​​ ಟಿಕೆಟ್​​ ದರ ಏರಿಕೆ ಬಳಿಕವೂ ಬಿಎಂಟಿಸಿಯಿಂದ ‘ಡಕೋಟಾ ಬಸ್’​​ ಸೇವೆ!: ಪ್ರಯಾಣಿಕರು ಕಿಡಿ

ಲಕ್ಷ್ಮಿ ನರಸಿಂಹ ಸ್ವಾಮಿ ಎಲ್.
| Edited By: |

Updated on: Nov 11, 2026 | 12:31 PM

Share

ಬಿಎಂಟಿಸಿ ಟಿಕೆಟ್ ದರ ಏರಿಕೆಯಾಗಿದ್ದರೂ ಪ್ರಯಾಣಿಕರಿಗೆ ಸುಸಜ್ಜಿತ ಬಸ್ ಸೌಲಭ್ಯ ಸಿಗುತ್ತಿಲ್ಲ. ಮೆಜೆಸ್ಟಿಕ್‌ನಿಂದ ಬಾಗಲೂರು ಕಡೆಗೆ ಸಾಗುವ ಬಸ್ ಒಂದರಲ್ಲಿ ಸೀಟ್‌ಗಳೇ ಇಲ್ಲದೆ ಪ್ರಯಾಣಿಕರು ಪರದಾಡಿದ್ದು, ಮೂಲಸೌಕರ್ಯದ ಕೊರತೆಗೆ ಆಕ್ರೋಶ ವ್ಯಕ್ತವಾಗಿದೆ. ಟಿಕೆಟ್​​ ದರ ಹೆಚ್ಚಿಸಿರುವ ಬಿಎಂಟಿಸಿ ಕನಿಷ್ಠ ಮೂಲಸೌಲಭ್ಯ ಒದಗಿಸುವುದನ್ನೂ ಮರೆತಿದ್ಯಾ ಎಂಬ ಪ್ರಶ್ನೆ ಉದ್ಭವಿಸಿದೆ.

ಬೆಂಗಳೂರು, ನವೆಂಬರ್​​ 11: ನಿರ್ವಹಣಾ ವೆಚ್ಚ ಮತ್ತು ಡೀಸೆಲ್​​ ದರದ ಏರಿಕೆಯಂತಹ ಕಾರಣ ನೀಡಿ ರಾಜ್ಯದಲ್ಲಿ ಬಿಎಂಟಿಸಿ ಸೇರಿದಂತೆ ಸಾರಿಗೆ ಬಸ್​​ಗಳ ಟಿಕೆಟ್​​ ದರವನ್ನು ಸರ್ಕಾರ ಇತ್ತೀಚೆಗಷ್ಟೇ ಹೆಚ್ಚಳ ಮಾಡಿದೆ. ಆದರೆ ಅದಕ್ಕೆ ತಕ್ಕಂತೆ ಪ್ರಯಾಣಿಕರಿಗೆ ಸೌಲಭ್ಯ ಒದಗಿಸುವುದನ್ನು ಮಾತ್ರ ಮರೆತಂತಿದೆ. ಬೆಂಗಳೂರಲ್ಲಿ ದಿನನಿತ್ಯ ಲಕ್ಷಾಂತರ ಮಂದಿ ಪ್ರಯಾಣಿಕರು ನೆಚ್ಚಿಕೊಂಡಿರುವ ಬಿಎಂಟಿಸಿಯ ಕೆಲ ಬಸ್​​ಗಳು ತೀರಾ ಹದಗೆಟ್ಟ ಸ್ಥಿತಿಗೆ ತಲುಪಿದ್ದು, ಬಸ್​ಗಳಲ್ಲಿ ಸೀಟ್​​ಗಳೇ ಇಲ್ಲದಿರುವ ಸ್ಥಿತಿ ಇದೆ. ಮೆಜೆಸ್ಟಿಕ್​​ನಿಂದ ಬಾಗಲೂರು ಕಡೆಗೆ ಸಂಚರಿಸುತ್ತಿದ್ದ ಬಸ್​​ ಒಂದರಲ್ಲಿಯೂ ಇಂತಹುದ್ದೇ ಸ್ಥಿತಿ ಕಂಡುಬಂದಿದ್ದು, ಟಿಕೆಟ್​​ ದರ ಹೆಚ್ಚಿಸಿರುವ ಬಿಎಂಟಿಸಿ ಕನಿಷ್ಠ ಮೂಲಸೌಲಭ್ಯ ಒದಗಿಸುವುದನ್ನೂ ಮರೆತಿದ್ಯಾ ಎಂಬ ಪ್ರಶ್ನೆ ಉದ್ಭವಿಸಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಲಕ್ಷ್ಮಿ ನರಸಿಂಹ ಸ್ವಾಮಿ ಎಲ್.
ಲಕ್ಷ್ಮಿ ನರಸಿಂಹ ಸ್ವಾಮಿ ಎಲ್.

ಲಕ್ಷ್ಮಿ ನರಸಿಂಹ ಸ್ವಾಮಿ. ಎಲ್ ಆದ ನಾನು ಮೂಲತಃ ಬೆಂಗಳೂರಿನವಾಗಿದ್ದು, ಪೂರ್ವ ತಾಲೂಕಿನ ದೊಡ್ಡಗುಬ್ಬಿ ಎಂಬ ಗ್ರಾಮದಲ್ಲಿ ವಾಸವಿದ್ದೇನೆ. ಕಳೆದ 6 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಪ್ರಸ್ತುತ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಬೆಂಗಳೂರು ವರದಿಗಾರನಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಐತಿಹಾಸಿಕ ಸರ್ಕಾರಿ ಕಲಾ ಕಾಲೇಜಿನಲ್ಲಿ ಸ್ನಾತಕ ಪದವಿ ಪೂರೈಸಿದ ಬಳಿಕ ಬೆಂಗಳೂರು ವಿಶ್ವವಿದ್ಯಾಲಯ (ಜ್ಞಾನಭಾರತಿ) ದಲ್ಲಿ M.A (ಪತ್ರಿಕೋದ್ಯಮ ಮತ್ತು ಸಂವಹನ) ಸ್ನಾತಕೋತ್ತರ ಪದವಿ ಪೂರೈಸಿದ್ದೇನೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಡಿಯ ನಗರ ಪಾಲಿಕೆಗಳು, ಬೆಸ್ಕಾಂ, ಜಲಮಂಡಳಿ, ಆಹಾರ, ಆರೋಗ್ಯ, ಶಿಕ್ಷಣ ಸೇರಿ ವಿವಿಧ ಕ್ಷೇತ್ರಗಳಲ್ಲಿ ನಾಗರಿಕರಿಗೆ ಎದುರಾಗುವ ಸಮಸ್ಯೆಗಳಿಗೆ, ಸಂಕಷ್ಟಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಈವರೆಗೂ ಶ್ರಮವಹಿಸಿದ್ದು, ಮುಂದಿನ ದಿನಗಳಲ್ಲೂ ನಾಗರಿಕರ ಸೇವೆಯನ್ನೂ ಮುಂದುವರೆಸುವ ಗುರಿಯೊಂದಿಗೆ ಉತ್ತಮ ಸಮಾಜಕ್ಕಾಗಿ ಬದ್ಧನಾಗಿದ್ದೇನೆ..

Read More