AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆ ಕಟ್ಟಲು ಅನುಮತಿ ನೀಡದ ಪಿಡಿಒ: ಗ್ರಾಮ ಪಂಚಾಯತ್ ಕಚೇರಿಯಲ್ಲೇ ಆತ್ಮಹತ್ಯೆಗೆ ಯತ್ನಿಸಿದ ರೈತ, ವಿಡಿಯೋ ವೈರಲ್

ಮನೆ ಕಟ್ಟಲು ಅನುಮತಿ ನೀಡದ ಪಿಡಿಒ: ಗ್ರಾಮ ಪಂಚಾಯತ್ ಕಚೇರಿಯಲ್ಲೇ ಆತ್ಮಹತ್ಯೆಗೆ ಯತ್ನಿಸಿದ ರೈತ, ವಿಡಿಯೋ ವೈರಲ್

ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on: Feb 17, 2026 | 7:28 AM

Share

ಮನೆ ಕಟ್ಟಲು ಪರವಾನಗಿ ನೀಡದ ಆಡಳಿತದ ವಿರುದ್ಧ ರೈತ ಆಕ್ರೋಶ ವ್ಯಕ್ತಪಡಿಸಿದ್ದು, ಗ್ರಾಮ ಪಂಚಾಯತ್ ಕಚೇರಿಯಲ್ಲೇ ಆತ್ಮಹತ್ಯೆಗೆ ಯತ್ನಿಸಿದ ಘಟನೆ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಕಡಬಗೆರೆ ಗ್ರಾಮ ಪಂಚಾಯತ್‌ನಲ್ಲಿ ನಡೆದಿದೆ. ಘಟನೆ ಕುರಿತು ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ವಿಜಯನಗರ, ಫೆಬ್ರವರಿ 17: ಮನೆ ಕಟ್ಟಲು ಪರವಾನಗಿ ನೀಡದ ಹಿನ್ನೆಲೆಯಲ್ಲಿ ರೈತೊಬ್ಬ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಕಡಬಗೆರೆ ಗ್ರಾಮ ಪಂಚಾಯತ್‌ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಕಡಬಗೆರೆ ಪಂಚಾಯತ್ ವ್ಯಾಪ್ತಿಯ ಪವನಪುರ ಗ್ರಾಮದ ನಿವಾಸಿ ಕೆ. ಬಸವರಾಜ್ ಎಂಬವರು ಗ್ರಾ.ಪಂ. ಕಚೇರಿಯಲ್ಲೇ ಮೈ ಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಮನೆ ನಿರ್ಮಾಣಕ್ಕಾಗಿ ಇ-ಸೊತ್ತು ಹಾಗೂ ಪರವಾನಗಿ ನೀಡುವಂತೆ ಹಲವಾರು ಬಾರಿ ಅರ್ಜಿ ಸಲ್ಲಿಸಿದ್ದರೂ ಅನುಮತಿ ನೀಡಲಾಗಿಲ್ಲವೆಂದು ರೈತ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪರವಾನಗಿ ಇಲ್ಲದೇ ಬ್ಯಾಂಕ್ ಸಾಲ ಸಿಗುತ್ತಿಲ್ಲಲ. ಕಳೆದ ಆರು ತಿಂಗಳಿಂದ ಕಚೇರಿಗೆ ಸುತ್ತಾಡುತ್ತಿದ್ದೇನೆ ಎಂದು ಅವರು ತಿಳಿಸಿದ್ದಾರೆ. ಈ ವೇಳೆ ಪಿಡಿಒ ಆಗಿರುವ ಕೃಷ್ಣಪ್ಪ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಕಚೇರಿಯಲ್ಲೇ ಅರ್ಧ ಲೀಟರ್ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಘಟನೆಯನ್ನು ಗಮನಿಸಿದ ಪಿಡಿಒ ಕೃಷ್ಣಪ್ಪ ಹಾಗೂ ಸ್ಥಳೀಯರು ತಕ್ಷಣ ಮಧ್ಯಪ್ರವೇಶಿಸಿ ರೈತನನ್ನು ರಕ್ಷಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ