ಬಿಗ್​ ಬಾಸ್​ಗೆ ಹೋಗಲು ಚಾನ್ಸ್​ ಕೇಳಿಕೊಂಡು ಎತ್ತಿನ ಗಾಡಿಯಲ್ಲಿ ಸುದೀಪ್​ ಮನೆಗೆ ಬಂದ ‘ಅವಿದ್ಯಾವಂತ ರೈತ’

Edited By:

Updated on: Nov 20, 2023 | 9:26 AM

ವ್ಯಕ್ತಿಯೊಬ್ಬರು ಎತ್ತಿನ ಗಾಡಿನಲ್ಲಿ ಬೆಂಗಳೂರಿಗೆ ಬಂದು ಕಿಚ್ಚ ಸುದೀಪ್​ ನಿವಾಸದ ಎದುರಿನಲ್ಲಿ ಹೈಡ್ರಾಮಾ ಮಾಡಿದ್ದಾರೆ. ‘ನಮ್ಮ ನಡಿಗೆ ಬಿಗ್​ ಬಾಸ್​ ಕಡೆಗೆ. ಅವಿದ್ಯಾವಂತ ರೈತರಿಗೆ ಒಂದು ಅವಕಾಶ ಕೊಡಿ’ ಎಂಬ ಬ್ಯಾನರ್​ ಅನ್ನು ಎತ್ತಿನ ಗಾಡಿಗೆ ಕಟ್ಟಿಕೊಂಡು ಅವರು ಬಂದಿದ್ದಾರೆ. ಈ ಸಂದರ್ಭದ ವಿಡಿಯೋ ಇಲ್ಲಿದೆ..

ಬಿಗ್​ ಬಾಸ್​ (Bigg Boss Kannada) ಶೋನಲ್ಲಿ ಸ್ಪರ್ಧಿಸಬೇಕು ಎಂಬ ಆಸೆ ಬಹುತೇಕರಿಗೆ ಇರುತ್ತದೆ. ಆದರೆ ಎಲ್ಲರಿಗೂ ಚಾನ್ಸ್​ ಸಿಗುವುದಿಲ್ಲ. ಅವಕಾಶಕ್ಕಾಗಿ ಕೆಲವರು ಹಲವಾರು ಬಗೆಯ ಸರ್ಕಸ್​ ಮಾಡುತ್ತಾರೆ. ವಿವಿಧ ರೀತಿಯಲ್ಲಿ ಗಮನ ಸೆಳೆಯುವ ಪ್ರಯತ್ನ ಮಾಡಲಾಗುತ್ತದೆ. ಈಗ ವ್ಯಕ್ತಿಯೊಬ್ಬರು ಎತ್ತಿನ ಗಾಡಿನಲ್ಲಿ ಬೆಂಗಳೂರಿಗೆ ಬಂದು ಕಿಚ್ಚ ಸುದೀಪ್​ (Kichcha Sudeep) ಅವರ ಮನೆಯ ಎದುರಿನಲ್ಲಿ ಹೈಡ್ರಾಮಾ ಮಾಡಿದ್ದಾರೆ. ‘ನಮ್ಮ ನಡಿಗೆ ಬಿಗ್​ ಬಾಸ್​ ಕಡೆಗೆ. ಅವಿದ್ಯಾವಂತ ರೈತರಿಗೆ ಒಂದು ಅವಕಾಶ ಕೊಡಿ’ ಎಂಬ ಬ್ಯಾನರ್​ ಅನ್ನು ಎತ್ತಿನ ಗಾಡಿಗೆ ಕಟ್ಟಿಕೊಂಡು ಅವರು ಬಂದಿದ್ದಾರೆ. ತಾವು ಟಿ. ನರಸೀಪುರದಿಂದ ಬಂದಿರುವುದಾಗಿ ಈ ವ್ಯಕ್ತಿ ಹೇಳಿಕೊಂಡಿದ್ದಾರೆ. ಸದ್ಯಕ್ಕೆ ಸುದೀಪ್​ ಮನೆಯ (Kichcha Sudeep House) ಭದ್ರತಾ ಸಿಬ್ಬಂದಿ ಈ ರೈತನಿಗೆ ಬುದ್ಧಿ ಹೇಳಿ ವಾಪಸ್​ ಕಳಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮಾಲತೇಶ ಜಗ್ಗೀನ್

ಮಾಲತೇಶ ಜಗ್ಗೀನ್. Tv9 ಕನ್ನಡ ವಾಹಿನಿ ಫಿಲಂ ಬ್ಯೂರೋ ಮುಖ್ಯಸ್ಥನಾಗಿ ಕೆಲಸ ಮಾಡ್ತಿದ್ದಾರೆ. ಮಾಲತೇಶ ವಿಜಯನಗರ ಜಿಲ್ಲೆ ಹೂವಿನ ಹಡಗಲಿ ತಾಲ್ಲೂಕು ಹೊಳಲು ಗ್ರಾಮದವರು. ಕಳೆದ 15 ವರ್ಷಗಳಲ್ಲಿ ಮಾಧ್ಯಮ ಲೋಕದ ವಿವಿಧ ವಿಭಾಗಗಳಲ್ಲಿ ವರದಿಗಾರಿಕೆ ಮಾಡಿದ ಅನುಭವ ಇದೆ. ಸಿನಿಮಾ ವಿಭಾಗದ ಜೊತೆ ರಾಜಕೀಯ, ಮೆಟ್ರೋ, ಕ್ರೈಂ ವಿಭಾಗದಲ್ಲೂ ಕೆಲವು ಸನ್ನಿವೇಶಗಳಲ್ಲಿ ವರದಿಗಾರಿಕೆ ಮಾಡಿದ್ದಾರೆ. ಹಾವೇರಿಯ ಕೆಎಫ್ ಚಾನಲ್ , ನಂತರ ಬೆಂಗಳೂರಿನ ಸಮಯ ನ್ಯೂಸ್, ಜನಶ್ರಿ ನ್ಯೂಸ್, ಪಬ್ಲಿಕ್ ಟಿವಿ ಸೇರಿದಂತೆ ವಿವಿಧ ವಾಹಿನಿಗಳಲ್ಲಿ ಕೆಲಸ ಮಾಡಿದ ಅನುಭವ ಇದೆ. Tv9kannada ನ್ಯೂಸ್ ಚಾನಲ್ ನಲ್ಲಿ ಕಳೆದ 10 ವರ್ಷಗಳಿಂದ ಇದ್ದಾರೆ. ಕಲೆ, ಸಾಹಿತ್ಯ, ಸಿನಿಮಾ, ಕ್ರಿಡೆ ಆಸಕ್ತಿ ವಿಷಯಗಳು.

Read More