ಹುಲಿ ದಾಳಿಯಿಂದ ರೈತ ಸಾವು: ಅರಣ್ಯ ಸಚಿವ ಈಶ್ವರ್ ಖಂಡ್ರೆಗೆ ಮೈಸೂರಲ್ಲಿ ಘೇರಾವ್
ಹುಲಿ ದಾಳಿಯಿಂದ ನಿನ್ನೆ ಸರಗೂರು ತಾಲೂಕಿನ ಬೆಣ್ಣೆಗೆರೆ ಗ್ರಾಮದಲ್ಲಿ ರೈತ ಸಾವನ್ನಪ್ಪಿದ್ದ ಪ್ರಕರಣ ಸಂಬಂಧ ಮೈಸೂರಿನ ಕೆ.ಆರ್.ಆಸ್ಪತ್ರೆ ಶವಾಗಾರದ ಎದುರು ಪ್ರತಿಭಟನೆ ನಡೆದಿದೆ. ಆಸ್ಪತ್ರೆಗೆ ಭೇಟಿ ನೀಡಿದ ಅರಣ್ಯ ಸಚಿವ ಈಶ್ವರ್ ಖಂಡ್ರೆಗೆ ರೈತರು ಘೇರಾವ್ ಹಾಕಿದ್ದು, ಸಂಬಂಧಪಟ್ಟ ಅರಣ್ಯ ಅಧಿಕಾರಿಗಳ ಅಮಾನತು ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ಮೈಸೂರು, ಅಕ್ಟೋಬರ್ 27: ಸರಗೂರು ತಾಲೂಕಿನ ಬೆಣ್ಣೆಗೆರೆ ಗ್ರಾಮದಲ್ಲಿ ನಿನ್ನೆ ಹುಲಿ ದಾಳಿಯಿಂದ ರೈತ ರಾಜಶೇಖರ(58) ಸಾವನ್ನಪ್ಪಿದ್ದ ಪ್ರಕರಣ ಸಂಬಂಧ ಅರಣ್ಯ ಸಚಿವ ಈಶ್ವರ್ ಖಂಡ್ರೆಗೆ (Eshwar Khandre) ರೈತರು ಘೇರಾವ್ ಹಾಕಿರುವ ಪ್ರಸಂಗ ನಡೆದಿದೆ. ರೈತ ರಾಜಶೇಖರ ಅವರ ಶವ ಇದ್ದ ಮೈಸೂರಿನ ಕೆ.ಆರ್.ಆಸ್ಪತ್ರೆ ಶವಾಗಾರಕ್ಕೆ ಸಚಿವರು ಭೆಟಿ ನೀಡಿದ್ದರು. ಈ ವೇಳೆ ಘೇರಾವ್ ಹಾಕಲಾಗಿದ್ದು, ಸಂಬಂಧಪಟ್ಟ ಅರಣ್ಯ ಅಧಿಕಾರಿಗಳ ಅಮಾನತು ಮಾಡಬೇಕು. ಮೃತನ ಕುಟುಂಬಕ್ಕೆ ಪರಿಹಾರ ಘೋಷಿಸಬೇಕೆಂದು ಆಗ್ರಹಿಸಲಾಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
