ಕಾಡಾನೆ ದಾಳಿಗೆ ರೈತ ಬಲಿ: ಅರಣ್ಯಾಧಿಕಾರಿಗಳ ವಿರುದ್ಧ ಸಿಡಿದ ಅನ್ನದಾತರು; ಎನ್.ಆರ್.ಪುರ ಪಟ್ಟಣ ಸ್ತಬ್ಧ
ಕಾಡಾನೆ ದಾಳಿಗೆ ಹೆನ್ನಂಗಿ ಗ್ರಾಮದ ರೈತ ಕೃಷ್ಣಮೂರ್ತಿ ಬಲಿಯಾದ ಹಿನ್ನೆಲೆಯಲ್ಲಿ, ಅರಣ್ಯಾಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ರೈತ ಸಂಘಟನೆಗಳು ಕರೆ ನೀಡಿದ್ದ ಬಂದ್‌ಗೆ ಚಿಕ್ಕಮಗಳೂರಿನ ಎನ್.ಆರ್.ಪುರ ಪಟ್ಟಣ ಸಂಪೂರ್ಣ ಸ್ತಬ್ಧವಾಗಿದೆ. ಸ್ವಯಂ ಪ್ರೇರಿತವಾಗಿ ಅಂಗಡಿ ಮುಂಗಟ್ಟು ಮುಚ್ಚುವ ಮೂಲಕ ಮಾಲೀಕರು ಬಂದ್‌ಗೆ ಬೆಂಬಲ ನೀಡಿದ್ದಾರೆ.
ಚಿಕ್ಕಮಗಳೂರು, ನವೆಂಬರ್ 19: ಕಾಡಾನೆ ದಾಳಿಗೆ ಹೆನ್ನಂಗಿ ಗ್ರಾಮದ ರೈತ ಕೃಷ್ಣಮೂರ್ತಿ ಬಲಿಯಾದ ಬೆನ್ನಲ್ಲೇ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ಪಟ್ಟಣ ಸ್ತಬ್ಧವಾಗಿದ್ದು, ಸ್ವಯಂ ಪ್ರೇರಿತವಾಗಿ ಅಂಗಡಿ ಮುಂಗಟ್ಟು ಮುಚ್ಚುವ ಮೂಲಕ ಮಾಲೀಕರು ಬಂದ್‌ಗೆ ಬೆಂಬಲ ನೀಡಿದ್ದಾರೆ. ಶೃಂಗೇರಿ ಕ್ಷೇತ್ರ ರೈತ ಒಕ್ಕೂಟ ಸೇರಿ ರೈತ ಸಂಘಟನೆಗಳು ಬಂದ್‌ಗೆ ಕರೆ ನೀಡಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಎನ್.ಆರ್.ಪುರ ಪಟ್ಟಣದಲ್ಲಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ಭದ್ರಾ ಅಭಯಾರಣ್ಯಕ್ಕೆ ಕಾಡಾನೆಗಳ ಸ್ಥಳಾಂತರ ಆದೇಶ ಹಿಂಪಡೆಯಬೇಕು ಮತ್ತು ಕಾಡಾನೆ ಉಪಟಳ ಹಿನ್ನೆಲೆ ರೈಲ್ವೆ ಬ್ಯಾರಿಕೇಡ್ ಅಳವಡಿಸುವಂತೆ ಪಟ್ಟು ಹಿಡಿಯಲಾಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Loading...
Unable to load recommendations.
Follow Us
