AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಪಕ್ಷ ನಾಯಕ ಆರ್​. ಅಶೋಕ್​​ಗೆ ಚಾಮರಾಜನಗರದಲ್ಲಿ ರೈತರಿಂದ ಘೇರಾವ್​​

ವಿಪಕ್ಷ ನಾಯಕ ಆರ್​. ಅಶೋಕ್​​ಗೆ ಚಾಮರಾಜನಗರದಲ್ಲಿ ರೈತರಿಂದ ಘೇರಾವ್​​

ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on:Jul 13, 2026 | 4:16 PM

Share

ಚಾಮರಾಜನಗರದಲ್ಲಿ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರನ್ನು ರೈತರು ಸುತ್ತುವರಿದು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಾಮರಾಜನಗರದಲ್ಲಿ ಬರ ಅಧ್ಯಯನ ನಡೆಸದಿರುವುದಕ್ಕೆ ಮತ್ತು ರೈತರ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ಸರ್ಕಾರಕ್ಕೆ ತಲುಪಿಸದಿರುವುದಕ್ಕೆ ರೈತರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ರಾಜ್ಯ ಕಬ್ಬು ಬೆಳೆಗಾರರ ಸಂಘದ ಸದಸ್ಯರು ಸೇರಿದಂತೆ ಹಲವು ರೈತರು ಅಶೋಕ್ ಅವರ ವಾಹನವನ್ನು ತಡೆದು, ಬರ ಘೋಷಣೆ ಮತ್ತು ಪ್ರತಿ ಎಕರೆಗೆ 50,000 ರೂಪಾಯಿ ಬೆಳೆ ನಷ್ಟ ಪರಿಹಾರಕ್ಕೆ ಆಗ್ರಹಿಸಿದ್ದಾರೆ.

ಚಾಮರಾಜನಗರ, ಜುಲೈ 13: ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರು ಘೇರಾವ್​​ ಹಾಕಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಕೇವಲ SIR ಕುರಿತು ಮಾತನಾಡಲು ಚಾಮರಾಜನಗರಕ್ಕೆ ಬಂದಿದ್ದೀರಿ. ಆದ್ರೆ ಮಳೆ ಬಾರದ ಬಗ್ಗೆ ಜಿಲ್ಲೆಯಲ್ಲಿ ಬರ ಅಧ್ಯಯನ ಮಾಡಿಲ್ಲ. ವಿಪಕ್ಷ ನಾಯಕರಾಗಿ ಸರ್ಕಾರಕ್ಕೆ ಕಣ್ಣು ತೆರೆಸುವ ಕೆಲಸ ಮಾಡ್ಬೇಕು. ಬಿಜೆಪಿ ಸಂಸದರು ಬರ ಕುರಿತು ಕೇಂದ್ರಕ್ಕೆ ಮಾಹಿತಿ ನೀಡಬೇಕು ಎಂದು ಅಶೋಕ್ ವಾಹನ ತಡೆದು ರೈತರು ಆಕ್ರೋಶ ವ್ಯಕ್ತಪಡಿಸಿರುವ ಘಟನೆ ನಡೆದಿದೆ. ಈ ವೇಳೆ ರಾಜ್ಯ ಕಬ್ಬು ಬೆಳೆಗಾರರ ಸಂಘದ ಮನವಿಗೆ ವಿರೋಧ ಪಕ್ಷದ ನಾಯಕರು ಕೂಡ ಸ್ಪಂದಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Jul 13, 2026 04:16 PM

Follow Us