15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಶಾಸಕ ಎಚ್​ಸಿ ಬಾಲಕೃಷ್ಣ ಸವಾಲು

Edited By:

Updated on: Jun 19, 2026 | 10:34 PM

ಬಿಡದಿ ಟೌನ್‌ಶಿಪ್ ನಿರ್ಮಾಣಕ್ಕಾಗಿ ಭೂಸ್ವಾಧೀನ ಪ್ರಕ್ರಿಯೆ ಕುರಿತು ರೈತರ ವಿರೋಧ ಮತ್ತು ಪ್ರತಿಭಟನೆಗಳು ನಡೆಯುತ್ತಿವೆ. ಇದರ ನಡುವೆಯೇ, ರಾಮನಗರದ ಜಿಬಿಡಿಎ ಕಚೇರಿಯಲ್ಲಿ ಶಾಸಕ ಎಚ್.ಸಿ. ಬಾಲಕೃಷ್ಣ ಮತ್ತು ಜಿಬಿಡಿಎ ಅಧ್ಯಕ್ಷ ಗಾಣಕಲ್ ನಟರಾಜ್ ಅವರು ಭೂಮಿ ಕಳೆದುಕೊಂಡ ರೈತರಿಗೆ ಪರಿಹಾರ ಚೆಕ್‌ಗಳನ್ನು ವಿತರಿಸಿದ್ದಾರೆ. ಭೂಸ್ವಾಧೀನಕ್ಕೆ ಒಪ್ಪಿಗೆ ನೀಡಿದ ರೈತರಿಗೆ ಅತ್ಯಧಿಕ ಪರಿಹಾರ ನೀಡಲಾಗುತ್ತಿದೆ ಎಂದು ಶಾಸಕರು ತಿಳಿಸಿದ್ದಾರೆ.

ರಾಮನಗರ, ಜೂನ್​​ 19: ಬಿಡದಿ ಟೌನ್‌ಶಿಪ್ ನಿರ್ಮಾಣಕ್ಕೆ ಸಂಬಂಧಿಸಿದಂತೆ ಭೂಸ್ವಾಧೀನ ಪ್ರಕ್ರಿಯೆ ನಡೆಯುತ್ತಿದೆ. ಕೆಲ ರೈತರು ತಮ್ಮ ಜಮೀನುಗಳನ್ನು ಯೋಜನೆಗೆ ನೀಡಲು ಒಪ್ಪಿಗೆ ಸೂಚಿಸಿದ್ದಾರೆ. ಹೀಗಾಗಿ ರಾಮನಗರದ ಜಿಬಿಡಿಎ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ಎಚ್.ಸಿ. ಬಾಲಕೃಷ್ಣ ಮತ್ತು ಜಿಬಿಡಿಎ ಅಧ್ಯಕ್ಷ ಗಾಣಕಲ್ ನಟರಾಜ್​​ ಭೂಸ್ವಾಧೀನಕ್ಕೆ ಒಪ್ಪಿದ ರೈತರಿಗೆ ಪರಿಹಾರ ಚೆಕ್‌ಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಬಾಲಕೃಷ್ಣ, ನಮ್ಮ ವಿರೋಧಿಗಳು ಪರಿಹಾರ ನೀಡಲು ಹಣವಿಲ್ಲ ಎಂದು ಅಪಪ್ರಚಾರ ಮಾಡುತ್ತಿದ್ದರು. ಅದಕ್ಕೆ ನಾವು ಇಂದು ಪರಿಹಾರ ಚೆಕ್ ವಿತರಿಸುವ ಮೂಲಕ ಉತ್ತರ ನೀಡಿದ್ದೇವೆ. ನಮ್ಮ ಬಳಿ ಸಾಕಷ್ಟು ಹಣವಿದ್ದು, ಅರ್ಹ ರೈತರಿಗೆ ಒಂದು ವಾರದಿಂದ 15 ದಿನಗಳ ಒಳಗಾಗಿ ಅವರ ಖಾತೆಗಳಿಗೆ ನೇರವಾಗಿ ಚೆಕ್ ತಲುಪಿಸಲಾಗುವುದು. ಇದನ್ನು ನಾವು ಮಾಡದೇ ಹೋದರೆ ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇವೆ ಎಂದು ಸವಾಲು ಹಾಕಿದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಪ್ರಶಾಂತ್​ ಬಿ.

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More