ಕಬ್ಬು ಬೆಳೆಗಾರರ ಸಮಸ್ಯೆಗಳ ಪರಿಶೀಲನೆಗೆ ಸಮಿತಿ: ಕೇಂದ್ರ ಸರ್ಕಾರದ ನಿರ್ಧಾರ ಸ್ವಾಗತಿಸಿದ ರೈತರು

Edited By:

Updated on: Oct 15, 2026 | 7:28 AM

ಕೇಂದ್ರ ಸರ್ಕಾರ ಕಬ್ಬು ಬೆಳೆಗಾರರ ಸಮಸ್ಯೆ ಪರಿಶೀಲನೆಗೆ ಸಮಿತಿ ರಚಿಸಿರುವುದನ್ನು ಸ್ವಾಗತಿಸಿರುವ ರಾಜ್ಯ ರೈತ ಸಂಘದ ಅಧ್ಯಕ್ಷ ಚೂನಪ್ಪ ಪೂಜಾರಿ, ಕಬ್ಬು ಒಣಗುತ್ತಿದ್ದು ತುರ್ತಾಗಿ ಎಂಎಸ್‌ಪಿ ನಿಗದಿಪಡಿಸುವಂತೆ ಆಗ್ರಹಿಸಿದ್ದಾರೆ. ಸಕ್ಕರೆ ದರ ಏರಿಕೆಯಾದರೆ ಕಬ್ಬಿನ ದರವೂ ಏರಿಕೆ ಆಗುತ್ತೆ. ಹೀಗಾಗಿ ಎಂಎಸ್‌ಪಿ ನಿಗದಿಪಡಿಸಲಿ. ನಾವು ಬಿಜೆಪಿಗೆ ವೋಟ್ ಹಾಕಿದ್ದೇವೆ, ಅಧಿಕಾರ ಇದೆ ಕೇಳ್ತಿದ್ದೇವೆ ಎಂದವರು ಹೇಳಿದ್ದಾರೆ.

ಬೆಳಗಾವಿ, ಅಕ್ಟೋಬರ್​​ 15: ಕಬ್ಬು ಬೆಳೆಗಾರರು ನಡೆಸಿದ ತೀವ್ರ ಪ್ರತಿಭಟನೆ ಮತ್ತು ರಾಷ್ಟ್ರೀಯ ಹೆದ್ದಾರಿ ತಡೆಗೆ ಕೇಂದ್ರ ಸರ್ಕಾರ ಮಣಿದಿದೆ. ರೈತರ ಸಮಸ್ಯೆಗಳನ್ನು ಪರಿಶೀಲಿಸಲು ಕೇಂದ್ರವು ಸಮಿತಿಯೊಂದನ್ನು ರಚಿಸಿದ್ದು, ಈ ಕ್ರಮವನ್ನು ರೈತರು ಸ್ವಾಗತಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ರಾಜ್ಯ ರೈತ ಸಂಘದ ಅಧ್ಯಕ್ಷ ಚೂನಪ್ಪ ಪೂಜಾರಿ, ಸಮಿತಿ ರಚಿಸಿದ್ದು ಬಹಳ ಸಂತೋಷ ತಂದಿದೆ, ಸ್ವಾಗತ ಮಾಡ್ತೀವಿ. ಆದರೆ ನಮಗೆ ತುರ್ತಾಗಿ ಎಂಎಸ್‌ಪಿ ಘೋಷಣೆ ಮಾಡಬೇಕಿದೆ. ಕಬ್ಬಿನ ಬೆಳೆ ಒಣಗುತ್ತಿದೆ, MSP ನಿಗದಿಪಡಿಸದೆ ಕಾರ್ಖಾನೆ ಆರಂಭಿಸಲಾಗಲ್ಲ. ಸಕ್ಕರೆ ದರ ಏರಿಕೆಯಾದರೆ ಕಬ್ಬಿನ ದರವೂ ಏರಿಕೆ ಆಗುತ್ತೆ. ಹೀಗಾಗಿ ಎಂಎಸ್‌ಪಿ ನಿಗದಿಪಡಿಸಲಿ. ನಾವು ಬಿಜೆಪಿಗೆ ವೋಟ್ ಹಾಕಿದ್ದೇವೆ, ಅಧಿಕಾರ ಇದೆ ಕೇಳ್ತಿದ್ದೇವೆ ಎಂದವರು ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More