ಕಾಶ್ಮೀರವನ್ನು ಪಾಕಿಸ್ತಾನವಾಗಲು ಬಿಡುವುದಿಲ್ಲ: ಫಾರೂಕ್ ಅಬ್ದುಲ್ಲಾ

Updated on: Oct 22, 2024 | 8:14 AM

ಕಾಶ್ಮೀರವನ್ನು ಪಾಕಿಸ್ತಾನವಾಗಲು ಬಿಡುವುದಿಲ್ಲ ಎಂದು ಜೆಕೆಎನ್​ಸಿ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ತಿಳಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಗಂದರ್‌ಬಾಲ್‌ನ ಗಗಾಂಗೀರ್‌ನಲ್ಲಿ ನಡೆದ ಉಗ್ರರ ದಾಳಿ ಬಳಿಕ ಅವರು ಈ ಹೇಳಿಕೆ ನೀಡಿದ್ದಾರೆ. ನಿಜವಾಗಿಯೂ ಪಾಕಿಸ್ತಾನವು ಭಾರತದ ಸ್ನೇಹ ಬಯಸಿದರೆ ಈ ಉಗ್ರ ಕೃತ್ಯಗಳನ್ನು ನಿಲ್ಲಿಸಬೇಕು, ಜಮ್ಮುವನ್ನು ಪಾಕಿಸ್ತಾನವಾಗಲು ನಾವು ಎಂದೂ ಬಿಡುವುದಿಲ್ಲ ಎಂದಿದ್ದಾರೆ.

ಕಾಶ್ಮೀರವನ್ನು ಪಾಕಿಸ್ತಾನವಾಗಲು ಬಿಡುವುದಿಲ್ಲ ಎಂದು ಜೆಕೆಎನ್​ಸಿ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ತಿಳಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಗಂದರ್‌ಬಾಲ್‌ನ ಗಗಾಂಗೀರ್‌ನಲ್ಲಿ ನಡೆದ ಉಗ್ರರ ದಾಳಿ ಬಳಿಕ ಅವರು ಈ ಹೇಳಿಕೆ ನೀಡಿದ್ದಾರೆ.
ನಿಜವಾಗಿಯೂ ಪಾಕಿಸ್ತಾನವು ಭಾರತದ ಸ್ನೇಹ ಬಯಸಿದರೆ ಈ ಉಗ್ರ ಕೃತ್ಯಗಳನ್ನು ನಿಲ್ಲಿಸಬೇಕು, ಜಮ್ಮುವನ್ನು ಪಾಕಿಸ್ತಾನವಾಗಲು ನಾವು ಎಂದೂ ಬಿಡುವುದಿಲ್ಲ ಎಂದಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಗಂದರ್‌ಬಾಲ್ ಜಿಲ್ಲೆಯ ಶ್ರೀನಗರ-ಲೇಹ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಸುರಂಗ ನಿರ್ಮಾಣ ಸ್ಥಳದಲ್ಲಿ ಭಾನುವಾರ ಸಂಜೆ ಭಯೋತ್ಪಾದಕರ ದಾಳಿ ನಡೆದಿದ್ದು, ವೈದ್ಯರು ಮತ್ತು ಆರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಭಯೋತ್ಪಾದಕ ದಾಳಿಯ ಕುರಿತು ಜಮ್ಮು ಮತ್ತು ಕಾಶ್ಮೀರದ ಬಿಜೆಪಿ ಅಧ್ಯಕ್ಷ ರವೀಂದರ್ ರೈನಾ ಅವರು, ‘ಪಾಕಿಸ್ತಾನವು ಜಮ್ಮು ಮತ್ತು ಕಾಶ್ಮೀರದ ಶಾಂತಿ, ನೆಮ್ಮದಿ ಮತ್ತು ಸಮೃದ್ಧಿಯನ್ನು ಕದಡಲು ಪದೇ ಪದೇ ಪ್ರಯತ್ನಿಸುತ್ತಿದೆ.

ನಮ್ಮ ಸೈನಿಕರು ಪಾಕಿಸ್ತಾನದ ಪ್ರತಿಯೊಂದು ಪಿತೂರಿ ಮತ್ತು ಪ್ರತಿ ಭಯೋತ್ಪಾದಕ ಘಟನೆಯನ್ನು ವಿಫಲಗೊಳಿಸುತ್ತಾರೆ. ಅಪರಾಧ ಮಾಡಿದವರಿಗೆ ಅವರ ಅಪರಾಧಗಳಿಗೆ ಶೀಘ್ರದಲ್ಲೇ ಶಿಕ್ಷೆಯಾಗುತ್ತದೆ ಎಂದಿದ್ದಾರೆ. ಈ ದಾಳಿ ನಡೆದ ರೀತಿ ಆತಂಕಕಾರಿಯಾಗಿದೆ ಎಂದರು. ಈ ಬಗ್ಗೆ ಕೇಂದ್ರ ಸರ್ಕಾರ ಕಣ್ಣಿಟ್ಟಿದೆ. ಹೊಸ ಸರ್ಕಾರ ರಚನೆಯಾದ ಬೆನ್ನಲ್ಲೇ ಇಂತಹ ಘಟನೆಗಳು ಮತ್ತೆ ಆರಂಭವಾಗಿವೆ.

ಇದು ಎಲ್ಲೋ ಒಂದು ಪ್ರಶ್ನೆಯನ್ನು ಹುಟ್ಟುಹಾಕುತ್ತದೆ. ರಾಜ್ಯ ಸರಕಾರವೂ ಇದನ್ನು ಗಂಭೀರವಾಗಿ ಪರಿಗಣಿಸಬೇಕಿದೆ. ಇದೇ ವೇಳೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಈ ಉಗ್ರರ ದಾಳಿಯನ್ನು ಖಂಡಿಸಿದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us