ದೊಡ್ಡಬಳ್ಳಾಪುರ: ಭೀಕರ ರಸ್ತೆ ಅಪಘಾತ, ನಾಲ್ಕು ಪಲ್ಟಿಯಾದ ಕಾರು
ಧಾರವಾಡದಿಂದ ವಿಜಯಪುರಕ್ಕೆ ತೆರಳುತ್ತಿದ್ದ ಐದು ಮಂದಿ ಇದ್ದ ಕಾರು ದೊಡ್ಡಬಳ್ಳಾಪುರ ತಾಲೂಕಿನ ಕತ್ತಿಹೊಸಹಳ್ಳಿ ಬಳಿ ಹೆದ್ದಾರಿಯಲ್ಲಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಈ ಅಪಘಾತದಲ್ಲಿ ಕಾರು ಚಾಲಕ ಮೃತಪಟ್ಟಿದ್ದಾರೆ ಮತ್ತು ನಾಲ್ವರಿಗೆ ಗಂಭೀರ ಗಾಯಗಳಾಗಿವೆ. ಘಟನೆಯ ಸಿಸಿಟಿವಿ ದೃಶ್ಯಗಳು ಹೊರಬಿದ್ದಿವೆ. ದೊಡ್ಡಬೆಳವಂಗಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಕತ್ತಿಹೊಸಹಳ್ಳಿ ಗ್ರಾಮದ ಬಳಿ ಹೆದ್ದಾರಿಯಲ್ಲಿ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಅಪಘಾತದಲ್ಲಿ ಕಾರು ಚಾಲಕ ಮೊಹಮ್ಮದ್ ಯೂನಿಸ್(20) ಮೃತಪಟ್ಟಿದ್ದಾರೆ. ನಾಲ್ವರಿಗೆ ಗಂಭೀರ ಗಾಯವಾಗಿದೆ. ಸೋಮವಾರ (ಫೆ.24) ರಂದು ಐವರು ಸ್ನೇಹಿತರು ಕಾರಿನಲ್ಲಿ ಧಾರವಾಡದಿಂದ ದೇವನಹಳ್ಳಿಯ ವಿಜಯಪುರಕ್ಕೆ ಹೊರಟಿದ್ದರು. ಕಾರು ಅಪಘಾತದ ಭೀಕರ ದೃಶ್ಯ ಹೆದ್ದಾರಿ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದೆ. ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ.
Follow Us
Latest Videos
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
