Loading video

ದೊಡ್ಡಬಳ್ಳಾಪುರ: ಭೀಕರ ರಸ್ತೆ ಅಪಘಾತ, ನಾಲ್ಕು ಪಲ್ಟಿಯಾದ ಕಾರು

| Updated By: ವಿವೇಕ ಬಿರಾದಾರ

Updated on: Feb 25, 2025 | 12:57 PM

ಧಾರವಾಡದಿಂದ ವಿಜಯಪುರಕ್ಕೆ ತೆರಳುತ್ತಿದ್ದ ಐದು ಮಂದಿ ಇದ್ದ ಕಾರು ದೊಡ್ಡಬಳ್ಳಾಪುರ ತಾಲೂಕಿನ ಕತ್ತಿಹೊಸಹಳ್ಳಿ ಬಳಿ ಹೆದ್ದಾರಿಯಲ್ಲಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಈ ಅಪಘಾತದಲ್ಲಿ ಕಾರು ಚಾಲಕ ಮೃತಪಟ್ಟಿದ್ದಾರೆ ಮತ್ತು ನಾಲ್ವರಿಗೆ ಗಂಭೀರ ಗಾಯಗಳಾಗಿವೆ. ಘಟನೆಯ ಸಿಸಿಟಿವಿ ದೃಶ್ಯಗಳು ಹೊರಬಿದ್ದಿವೆ. ದೊಡ್ಡಬೆಳವಂಗಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಕತ್ತಿಹೊಸಹಳ್ಳಿ ಗ್ರಾಮದ ಬಳಿ ಹೆದ್ದಾರಿಯಲ್ಲಿ ಕಾರು ಡಿವೈಡರ್​​ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಅಪಘಾತದಲ್ಲಿ ಕಾರು ಚಾಲಕ ಮೊಹಮ್ಮದ್​ ಯೂನಿಸ್(20) ಮೃತಪಟ್ಟಿದ್ದಾರೆ. ನಾಲ್ವರಿಗೆ ಗಂಭೀರ ಗಾಯವಾಗಿದೆ. ಸೋಮವಾರ (ಫೆ.24) ರಂದು ಐವರು ಸ್ನೇಹಿತರು ಕಾರಿನಲ್ಲಿ ಧಾರವಾಡದಿಂದ ದೇವನಹಳ್ಳಿಯ ವಿಜಯಪುರಕ್ಕೆ ಹೊರಟಿದ್ದರು. ಕಾರು ಅಪಘಾತದ ಭೀಕರ ದೃಶ್ಯ ಹೆದ್ದಾರಿ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದೆ. ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ.