Video: ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರಿನ ಮೇಲೆ ಉರುಳಿದ ಲಾರಿ, ಭಯಾನಕ ವಿಡಿಯೋ
ಲಾರಿಯೊಂದು ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರಿನ ಮೇಲೆ ಉರುಳಿದ ಘಟನೆ ರಾಂಪುರದಲ್ಲಿ ನಡೆದಿದೆ. ಉತ್ತರ ಪ್ರದೇಶದ ರಾಂಪುರ ಜಿಲ್ಲೆಯಲ್ಲಿ ಭಾನುವಾರ ನೈನಿತಾಲ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಕ್ ಚಲಿಸುತ್ತಿದ್ದ ಬೊಲೆರೊಗ ಮೇಲೆ ಉರುಳಿಬಿದ್ದು, ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ದುರಂತ ಘಟನೆ ವರದಿಯಾಗಿದೆ. ಪಹಾಡಿ ಗೇಟ್ ಬಳಿಯ ಗಂಜ್ ಪೊಲೀಸ್ ಠಾಣೆ ಪ್ರದೇಶದಲ್ಲಿ ಈ ಅಪಘಾತ ಸಂಭವಿಸಿದೆ.
ರಾಂಪುರ, ಡಿಸೆಂಬರ್ 29: ಲಾರಿಯೊಂದು ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರಿನ ಮೇಲೆ ಉರುಳಿದ ಘಟನೆ ರಾಂಪುರದಲ್ಲಿ ನಡೆದಿದೆ. ಉತ್ತರ ಪ್ರದೇಶದ ರಾಂಪುರ ಜಿಲ್ಲೆಯಲ್ಲಿ ಭಾನುವಾರ ನೈನಿತಾಲ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಕ್ ಚಲಿಸುತ್ತಿದ್ದ ಬೊಲೆರೊ ಮೇಲೆ ಉರುಳಿಬಿದ್ದು, ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ದುರಂತ ಘಟನೆ ವರದಿಯಾಗಿದೆ. ಪಹಾಡಿ ಗೇಟ್ ಬಳಿಯ ಗಂಜ್ ಪೊಲೀಸ್ ಠಾಣೆ ಪ್ರದೇಶದಲ್ಲಿ ಈ ಅಪಘಾತ ಸಂಭವಿಸಿದೆ. ಪೊಲೀಸರ ಪ್ರಕಾರ, ಹೊಟ್ಟು ಸಾಗಿಸುತ್ತಿದ್ದ ಟ್ರಕ್ ಹೆದ್ದಾರಿಯಲ್ಲಿ ಹಾದುಹೋಗುವಾಗ ನಿಯಂತ್ರಣ ತಪ್ಪಿ ಪಕ್ಕದಲ್ಲಿ ಚಲಿಸುತ್ತಿದ್ದ ಬೊಲೆರೊ ವಾಹನದ ಮೇಲೆ ಉರುಳಿಬಿದ್ದಿತು. ಡಿಕ್ಕಿಯ ಪರಿಣಾಮ ಮಾರಕವಾಗಿದ್ದು, ಬೊಲೆರೊ ಚಾಲಕ ತಕ್ಷಣವೇ ಸಾವನ್ನಪ್ಪಿದ್ದಾನೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ