Fake Cosmetics: ನಕಲಿ ಸೌಂದರ್ಯವರ್ಧಕಗಳ ವಿರುದ್ಧ FDA ಸಮರ!

Edited By:

Updated on: Aug 26, 2026 | 1:18 PM

ಸೌಂದರ್ಯವರ್ಧಕಗಳ ಹೆಸರಿನಲ್ಲಿ ಮಾರಾಟವಾಗುವ ನಕಲಿ ಉತ್ಪನ್ನಗಳಿಂದ ಆರೋಗ್ಯಕ್ಕೆ ಅಪಾಯವಿದೆ. ಇತ್ತೀಚೆಗೆ ಆಹಾರ ಮತ್ತು ಔಷಧ ಆಡಳಿತ ಇಲಾಖೆ (FDA) ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ 50ಕ್ಕೂ ಹೆಚ್ಚು ಕಡೆ ದಾಳಿ ನಡೆಸಿ, ಲಿಪ್‌ಸ್ಟಿಕ್, ಕ್ರೀಮ್‌ಗಳು ಸೇರಿದಂತೆ 19ಕ್ಕೂ ಹೆಚ್ಚು ಬ್ರಾಂಡ್‌ಗಳ ಸ್ಯಾಂಪಲ್‌ಗಳನ್ನು ಸಂಗ್ರಹಿಸಿದೆ. ಈ ಸ್ಯಾಂಪಲ್‌ಗಳಲ್ಲಿ ಸೀಸ ಮತ್ತು ಪಾದರಸದಂತಹ ಹಾನಿಕಾರಕ ರಾಸಾಯನಿಕಗಳು ಪತ್ತೆಯಾಗಿವೆ.

ಬೆಂಗಳೂರು, ಆಗಸ್ಟ್ 26: ಸೌಂದರ್ಯವರ್ಧಕ ಉತ್ಪನ್ನಗಳ ಹೆಸರಿನಲ್ಲಿ ನಕಲಿ ಮತ್ತು ಹಾನಿಕಾರಕ ರಾಸಾಯನಿಕಗಳನ್ನು ಬಳಸುವ ಕಾಸ್ಮೆಟಿಕ್ಸ್ ವಿರುದ್ಧ ಆಹಾರ ಮತ್ತು ಔಷಧ ಆಡಳಿತ ಇಲಾಖೆ (FDA) ಸಮರ ಸಾರಿದೆ. ಇತ್ತೀಚೆಗೆ, FDA ಬೆಂಗಳೂರು ಸೇರಿದಂತೆ ರಾಜ್ಯದ 50ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ನಡೆಸಿ, 19ಕ್ಕೂ ಹೆಚ್ಚು ಬ್ರ್ಯಾಂಡ್‌ಗಳ ಲಿಪ್‌ಸ್ಟಿಕ್, ಫೇರ್‌ನೆಸ್ ಕ್ರೀಮ್, ಮಾಯಿಶ್ಚರೈಸರ್ ಮತ್ತು ಹೇರ್ ಡೈ ಸೇರಿದಂತೆ ವಿವಿಧ ಉತ್ಪನ್ನಗಳ ಮಾದರಿಗಳನ್ನು ಸಂಗ್ರಹಿಸಿದೆ. ಚಿಕ್ಕಪೇಟೆ, ಮಲ್ಲೇಶ್ವರಂ, ಜಯನಗರದಂತಹ ಮಾರುಕಟ್ಟೆಗಳಲ್ಲಿ ಬ್ರಾಂಡೆಡ್ ಹೆಸರಿನಲ್ಲಿ ನಕಲಿ ಉತ್ಪನ್ನಗಳನ್ನು ಕಡಿಮೆ ಬೆಲೆಗೆ ಮಾರಾಟ ಮಾಡಲಾಗುತ್ತಿದೆ.

ಪ್ರಾಥಮಿಕ ತನಿಖೆಯಲ್ಲಿ, ಸಂಗ್ರಹಿಸಲಾದ ಕೆಲವು ಸ್ಯಾಂಪಲ್‌ಗಳಲ್ಲಿ, ವಿಶೇಷವಾಗಿ ಲಿಪ್‌ಸ್ಟಿಕ್‌ಗಳಲ್ಲಿ ಸೀಸ (Lead) ಮತ್ತು ಪಾದರಸ (Mercury) ದಂತಹ ಅಪಾಯಕಾರಿ ರಾಸಾಯನಿಕಗಳು ಪತ್ತೆಯಾಗಿವೆ. ಈ ರಾಸಾಯನಿಕಗಳು ಚರ್ಮದ ಕ್ಯಾನ್ಸರ್, ಮೂತ್ರಪಿಂಡದ ವೈಫಲ್ಯ ಮತ್ತು ಇನ್ನಿತರ ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ. ಸಡನ್ ಗ್ಲೋ ನೀಡುವ ಕ್ರೀಮ್‌ಗಳಲ್ಲಿ ಅತಿಯಾದ ರಾಸಾಯನಿಕಗಳಿದ್ದು, ಚರ್ಮದ ಅಲರ್ಜಿ ಮತ್ತು ಕ್ಯಾನ್ಸರ್‌ಗೆ ದಾರಿ ಮಾಡಿಕೊಡಬಹುದು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ವಿನಯ್​ ಕಾಶಪ್ಪನವರ್​

ವಿನಯಕುಮಾರ್ ಕಾಶಪ್ಪನವರ್ ಅವರು ಸಮೂಹ ಸಂವಹನ ಹಾಗೂ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಮತ್ತು ಪತ್ರಿಕೋದ್ಯಮದಲ್ಲಿ ವಿದ್ಯಾಭ್ಯಾಸ ಪಡೆದಿದ್ದಾರೆ. ಕಳೆದ 8 ವರ್ಷಗಳಿಂದ ಟಿವಿ9 ಕನ್ನಡದಲ್ಲಿ ಹಿರಿಯ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ನಗರ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಲ್ಲಿ 10 ವರ್ಷಗಳ ವರದಿಗಾರಿಕೆ ಅನುಭವ ಹೊಂದಿದ್ದು, ಸಮಾಜಮುಖಿ ಹಾಗೂ ತನಿಖಾ ವರದಿಗಳ ಮೂಲಕ ಜನಪರ ವಿಷಯಗಳನ್ನು ಬೆಳಕಿಗೆ ತರುತ್ತಿದ್ದಾರೆ.

Read More