ಕಳ್ಳಾಟವಾಡುತ್ತಿದ್ದ ಜನೌಷಧಿ ಕೇಂದ್ರಗಳಿಗೆ ಶಾಕ್: 80ಕ್ಕೂ ಹೆಚ್ಚು ಮಳಿಗೆಗಳಿಗೆ ನೋಟಿಸ್

Edited By:

Updated on: Nov 26, 2026 | 5:07 PM

ಜನೌಷಧಿ ಕೇಂದ್ರಗಳಲ್ಲಿ ಕೇವಲ ಕಡಿಮೆ ದರದ 'ಜೆನೆರಿಕ್' ಔಷಧಿಗಳನ್ನು ಮಾತ್ರ ಮಾರಾಟ ಮಾಡಬೇಕು ಎಂಬ ನಿಯಮವಿದೆ. ಆದರೆ, ಹಲವು ಕೇಂದ್ರಗಳಲ್ಲಿ ಹೆಚ್ಚಿನ ಲಾಭಕ್ಕಾಗಿ ಖಾಸಗಿ ಕಂಪನಿಗಳ ಬ್ರಾಂಡೆಡ್ ಔಷಧಿಗಳು ಹಾಗೂ ಕಾಸ್ಮೆಟಿಕ್ ವಸ್ತುಗಳನ್ನು ಮಾರಾಟ ಮಾಡಲಾಗುತ್ತಿತ್ತು ಎಂಬ ಆರೋಪಗಳು ಕೇಳಿಬಂದಿವೆ. ಇದರ ಬೆನ್ನಲ್ಲೇ ಕರ್ನಾಟಕದ 150 ಜನೌಷಧಿ ಕೇಂದ್ರಗಳ ಮೇಲೆ ಎಫ್​ಡಿಎ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಬೆಂಗಳೂರು, ನವೆಂಬರ್ 26: ಜನೌಷಧಿ ಕೇಂದ್ರಗಳಲ್ಲಿ ಕೇವಲ ಕಡಿಮೆ ದರದ ‘ಜೆನೆರಿಕ್’ ಔಷಧಿಗಳನ್ನು ಮಾತ್ರ ಮಾರಾಟ ಮಾಡಬೇಕು ಎಂಬ ನಿಯಮವಿದೆ. ಆದರೆ, ಹಲವು ಕೇಂದ್ರಗಳಲ್ಲಿ ಹೆಚ್ಚಿನ ಲಾಭಕ್ಕಾಗಿ ಖಾಸಗಿ ಕಂಪನಿಗಳ ಬ್ರಾಂಡೆಡ್ ಔಷಧಿಗಳು ಹಾಗೂ ಕಾಸ್ಮೆಟಿಕ್ ವಸ್ತುಗಳನ್ನು ಮಾರಾಟ ಮಾಡಲಾಗುತ್ತಿತ್ತು ಎಂಬ ಆರೋಪಗಳು ಕೇಳಿಬಂದಿವೆ. ಇದರ ಬೆನ್ನಲ್ಲೇ ಕರ್ನಾಟಕದ 150 ಜನೌಷಧಿ ಕೇಂದ್ರಗಳ ಮೇಲೆ ಎಫ್​ಡಿಎ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಹೌದು.. ರಾಜ್ಯಾದ್ಯಂತ 150 ಜನೌಷಧಿ ಕೇಂದ್ರಗಳ ಮೇಲೆ ದಾಳಿ ಮಾಡಲಾಗಿದ್ದು, ಈ ವೇಳೆ ಕೆಲವು ಜನೌಷಧಿ ಮಳಿಗೆಗಳಲ್ಲಿ ನಿಯಮಬಾಹಿರವಾಗಿ ಬ್ರಾಂಡೆಡ್ ಔಷಧಿಗಳನ್ನು ಮಾರಾಟ ಮಾಡುತ್ತಿರುವುದು ಪತ್ತೆಯಾಗಿದೆ. ನಿಯಮ ಉಲ್ಲಂಘಟನೆ ಮಾಡಿದ 80ಕ್ಕೂ ಹೆಚ್ಚು ಜನೌಷಧಿ ಕೇಂದ್ರಗಳಿಗೆ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ಜನೌಷಧಿ ಕೇಂದ್ರಗಳಲ್ಲಿ ಬ್ರ್ಯಾಂಡೆಡ್ ಔಷಧ ಮಾರಾಟ ಮಾಡುವಂತಿಲ್ಲ. ಆದರೂ ಜನೌಷಧ ಕೇಂದ್ರಗಳಲ್ಲಿ ಬ್ರ್ಯಾಂಡೆಡ್ ಔಷಧ ಮಾರುತ್ತಿದ್ದರು. ಅಲ್ಲದೇ ತೆ ಕಾಸ್ಮೆಟಿಕ್ಸ್ ಮಾರಾಟ ಮಾಡಲಾಗುತ್ತಿದೆ. ಇದರೊಂದಿಗೆ FDA ನಿಯಮ ಗಾಳಿಗೆ ತೂರಿದ್ದು, ನಿಯಮ ಉಲ್ಲಂಘಿಸಿದ ಮಳಿಗೆಗಳ ಪರವಾನಗಿ ರದ್ದುಪಡಿಸುವ ಬಗ್ಗೆಯೂ ಔಷಧ ನಿಯಂತ್ರಣ ಇಲಾಖೆ ಎಚ್ಚರಿಕೆ ನೀಡಿದೆ. ಸದ್ಯ ಬೇರೆ ಬ್ರ್ಯಾಂಡ್​ಗಳ ಔಷಧದ ಮಾದರಿ ಸಂಗ್ರಹಿಸಿದ FDA ಅಧಿಕಾರಿಗಳು, ಲ್ಯಾಬ್​ಗೆ ರವಾನಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ವಿನಯ್​ ಕಾಶಪ್ಪನವರ್​

ವಿನಯಕುಮಾರ್ ಕಾಶಪ್ಪನವರ್ ಅವರು ಸಮೂಹ ಸಂವಹನ ಹಾಗೂ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಮತ್ತು ಪತ್ರಿಕೋದ್ಯಮದಲ್ಲಿ ವಿದ್ಯಾಭ್ಯಾಸ ಪಡೆದಿದ್ದಾರೆ. ಕಳೆದ 8 ವರ್ಷಗಳಿಂದ ಟಿವಿ9 ಕನ್ನಡದಲ್ಲಿ ಹಿರಿಯ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ನಗರ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಲ್ಲಿ 10 ವರ್ಷಗಳ ವರದಿಗಾರಿಕೆ ಅನುಭವ ಹೊಂದಿದ್ದು, ಸಮಾಜಮುಖಿ ಹಾಗೂ ತನಿಖಾ ವರದಿಗಳ ಮೂಲಕ ಜನಪರ ವಿಷಯಗಳನ್ನು ಬೆಳಕಿಗೆ ತರುತ್ತಿದ್ದಾರೆ.

Read More