AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯಾದ್ಯಂತ ಎಫ್‌ಡಿಎ ಕಾರ್ಯಾಚರಣೆ: ನಿಯಮ ಉಲ್ಲಂಘಿಸಿದ್ದ ಎಂಟು ಪ್ಯಾಕೇಜ್ಡ್ ಕುಡಿಯುವ ನೀರಿನ ಘಟಕಗಳು ಬಂದ್

ರಾಜ್ಯಾದ್ಯಂತ ಎಫ್‌ಡಿಎ ಕಾರ್ಯಾಚರಣೆ: ನಿಯಮ ಉಲ್ಲಂಘಿಸಿದ್ದ ಎಂಟು ಪ್ಯಾಕೇಜ್ಡ್ ಕುಡಿಯುವ ನೀರಿನ ಘಟಕಗಳು ಬಂದ್

ಪ್ರಸನ್ನ ಹೆಗಡೆ
|

Updated on: Oct 31, 2026 | 6:24 AM

Share

ರಾಜ್ಯಾದ್ಯಂತ ಆಹಾರ ಮತ್ತು ಔಷಧ ಆಡಳಿತ (ಎಫ್‌ಡಿಎ) ಅಧಿಕಾರಿಗಳು ಪ್ಯಾಕೇಜ್ಡ್ ಕುಡಿಯುವ ನೀರಿನ ಘಟಕಗಳ ಮೇಲೆ ದಾಳಿ ನಡೆಸಿದ್ದಾರೆ. ನಿಯಮಗಳನ್ನು ಪಾಲಿಸದ ಕಾರಣ ಎಂಟು ಕುಡಿಯುವ ನೀರಿನ ಘಟಕಗಳನ್ನು ಬಂದ್ ಮಾಡಲಾಗಿದೆ. ಆರೋಗ್ಯ ಸುರಕ್ಷತೆಯ ದೃಷ್ಟಿಯಿಂದ, ಪ್ಯಾಕೇಜ್ಡ್ ಕುಡಿಯುವ ನೀರಿನ ಘಟಕಗಳು ಕಡ್ಡಾಯವಾಗಿ ಅನುಸರಿಸಬೇಕಾದ ಹಲವು ನಿಯಮಗಳು ಮತ್ತು ನಿರ್ದಿಷ್ಟ ಮಾನದಂಡಗಳನ್ನು ಎಫ್‌ಡಿಎ ನಿಗದಿಪಡಿಸಿದೆ. ಆದರೆ ದಾಳಿ ವೇಳೆ ಘಟಕಗಳಲ್ಲಿ ಕಡ್ಡಾಯ ವ್ಯವಸ್ಥೆಗಳು ಮತ್ತು ನಿಯಮಗಳ ಉಲ್ಲಂಘನೆ ಕಂಡುಬಂದಿದೆ ಎನ್ನಲಾಗಿದೆ.

ಬೆಂಗಳೂರು, ಅಕ್ಟೋಬರ್​​ 31: ರಾಜ್ಯಾದ್ಯಂತ ಆಹಾರ ಮತ್ತು ಔಷಧ ಆಡಳಿತ (ಎಫ್‌ಡಿಎ) ಅಧಿಕಾರಿಗಳು ಬಿರುಸಿನ ಕಾರ್ಯಾಚರಣೆ ನಡೆಸಿದ್ದು, ಪ್ಯಾಕೇಜ್ಡ್ ಕುಡಿಯುವ ನೀರಿನ ಘಟಕಗಳ ಮೇಲೆ ದಾಳಿ ಮಾಡಿದ್ದಾರೆ. ಈ ಕಾರ್ಯಾಚರಣೆಯಲ್ಲಿ, ನಿಯಮಗಳನ್ನು ಸರಿಯಾಗಿ ಪಾಲಿಸದ ಕಾರಣಕ್ಕೆ ಒಟ್ಟು ಎಂಟು ಕುಡಿಯುವ ನೀರಿನ ಘಟಕಗಳನ್ನು ಬಂದ್ ಮಾಡಲಾಗಿದೆ. ಆರೋಗ್ಯ ಸುರಕ್ಷತೆಯ ದೃಷ್ಟಿಯಿಂದ, ಪ್ಯಾಕೇಜ್ಡ್ ಕುಡಿಯುವ ನೀರಿನ ಘಟಕಗಳು ಕಡ್ಡಾಯವಾಗಿ ಅನುಸರಿಸಬೇಕಾದ ಹಲವು ನಿಯಮಗಳು ಮತ್ತು ನಿರ್ದಿಷ್ಟ ಮಾನದಂಡಗಳನ್ನು ಎಫ್‌ಡಿಎ ನಿಗದಿಪಡಿಸಿದೆ. ಆದರೆ, ಅಧಿಕಾರಿಗಳು ದಾಳಿ ನಡೆಸಿದ ಸಂದರ್ಭದಲ್ಲಿ, ಈ ಎಂಟು ಘಟಕಗಳಲ್ಲಿ ಅಗತ್ಯವಿರುವ ವ್ಯವಸ್ಥೆಗಳ ಕೊರತೆ ಮತ್ತು ನಿಯಮಗಳ ಗಂಭೀರ ಉಲ್ಲಂಘನೆಗಳು ಕಂಡುಬಂದಿವೆ ಎನ್ನಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಪ್ರಸನ್ನ ಹೆಗಡೆ
ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More