ಸಮುದ್ರ ಮಾರ್ಗದಲ್ಲಿ ಶತ್ರುಗಳು ನುಸುಳುವ ಭೀತಿ: ಉಡುಪಿಯಲ್ಲಿ ಬೋಟ್​ಗಳ ಶೋಧ ತೀವ್ರ

Updated By: Ganapathi Sharma

Updated on: May 01, 2025 | 9:26 AM

ಕಾಶ್ಮೀರದ ಪಹಲ್ಗಾಮ್ ಉಗ್ರ ದಾಳಿ ನಂತರ ಕರ್ನಾಟಕ ಕರಾವಳಿ ಪ್ರದೇಶಗಳಲ್ಲಿಯೂ ಸಮುದ್ರ ಮಾರ್ಗದ ಮೂಲಕ ಉಗ್ರರು ನುಸುಳುವ ಭೀತಿ ಎದುರಾಗಿದೆ. ಈ ಹಿನ್ನೆಯಲ್ಲಿ ಕರಾವಳಿ ಭದ್ರತಾ ಪಡೆ ಶೋಧ ಹಾಗೂ ಗಸ್ತು ಕಾರ್ಯಾಚರಣೆ ತೀವ್ರಗೊಳಿಸಿದೆ. ಉಡುಪಿಯಲ್ಲಿ ಬೋಟ್​​ಗಳ ತಪಾಸಣೆಯನ್ನು ಪೊಲೀಸರು ತೀವ್ರಗೊಳಿಸಿದ್ದಾರೆ. ವಿಡಿಯೋ ಇಲ್ಲಿದೆ.

ಉಡುಪಿ, ಮೇ 1: ಪಹಲ್ಗಾಮ್​​ನಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ ನಂತರ ಕರ್ನಾಟಕ ಕರಾವಳಿಯಲ್ಲಿ ಕರಾವಳಿ ಕಾವಲು ಪೊಲೀಸರ ಕಟ್ಟೆಚ್ಚರ ವಹಿಸಿದೆ. ಕರಾವಳಿ ಮೂಲಕ ಭಯೋತ್ಪಾದಕ ಚಟುವಟಿಕೆ ಸಾಧ್ಯತೆಯ ಅನುಮಾನದ ಕಾರಣ ಕರಾವಳಿ ಕಾವಲು ಪೊಲೀಸರು ಕಣ್ಗಾವಲು ಹೆಚ್ಚಿಸಿದ್ದಾರೆ. ಸಮುದ್ರ ಮಾರ್ಗದ ಮೂಲಕ ಶತ್ರುಗಳು ಒಳ ನುಗ್ಗದಂತೆ ತಡೆಯಲು ಬೋಟ್​​ಗಳ ತಪಾಸಣೆ ತೀವ್ರಗೊಳಿಸಲಾಗಿದೆ. ಉಡುಪಿ ಕರಾವಳಿ ಪೊಲೀಸ್ ಎಸ್. ಪಿ ಮಿಥುನ್ ಸೂಚನೆಯ ನಂತರ ಪೊಲೀಸರು ತಪಾಸಣೆ ಹೆಚ್ಚಿಸಿದ್ದಾರೆ. ಉಡುಪಿ ಜಿಲ್ಲೆಯ ಗಂಗೊಳ್ಳಿ ಕರಾವಳಿ ಪೊಲೀಸರಿಂದ ಆಳ ಸಮುದ್ರದಲ್ಲಿ ಗಸ್ತು ಕಾರ್ಯಚರಣೆ ಆರಂಭಿಸಲಾಗಿದೆ. ಶಸ್ತ್ರಸನ್ನದ್ಧರಾಗಿ ಕರಾವಳಿ ಕಾವಲು ಪೊಲೀಸರು ಕಾರ್ಯಚರಣೆ ನಡೆಸುತ್ತಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ