Loading video

ಅನುಮತಿ ನಿರಾಕರಿಸಿದ್ದರೂ ಸಿಎಂ ಒತ್ತಡದ ಮೇರೆಗೆ ವಿಧಾನ ಸೌಧದ ಬಳಿ ಸತ್ಕಾರ ಆಯೋಜಿಲಾಯಿತು: ವಿಜಯೇಂದ್ರ

Updated on: Jun 10, 2025 | 12:58 PM

ಚಿನ್ನಸ್ವಾಮಿ ಸ್ಟೇಡಿಯಂ ಬಳಿ ದುರಂತ ನಡೆದಿರುವುದಕ್ಕೆ ಕೆಎಸ್​ಸಿಎ ಮತ್ತು ಅರ್​​ಸಿಬಿ ಅಧಿಕಾರಿಗಳ ವಿರುದ್ಧ ಎಫ್​ಐಅರ್ ಈಗಾಗಲೇ ದಾಖಲಾಗಿದೆ, ಆದರೆ ಅಲ್ಲಿ ಕಾರ್ಯಕ್ರಮ ನಡೆಯುವುದಕ್ಕೆ ಡಿಕೆ ಶಿವಕುಮಾರ್ ಕಾರಣ, ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಸುವುದಕ್ಕೆ ಅಭಯ ಹಸ್ತ ನೀಡಿದ್ದೇ ಅವರು, ನಾನಿದ್ದೇನೆ, ಏನಾದರೂ ಹೆಚ್ಚು ಕಡಿಮೆಯಾದರೂ ನಾನು ನೋಡಿಕೊಳ್ಳುತ್ತೇನೆ ಎಂದಿದ್ದು ಡಿಸಿಎಂ ಎಂದು ವಿಜಯೇಂದ್ರ ಹೇಳಿದರು.

ಶಿವಮೊಗ್ಗ, ಜೂನ್ 10: ಜೂನ್ 3ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bengaluru) ತಂಡ ಐಪಿಎಲ್ ಚಾಂಪಿಯನ್​ಶಿಪ್ ಗೆದ್ದಾಗ, ಕರ್ನಾಟಕ ಮತ್ತು ಬೆಂಗಳೂರಿನ ಹೆಮ್ಮೆಯ ತಂಡಕ್ಕೆ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಜೂನ್ 4 ರ ಸಂಜೆ ಸತ್ಕಾರ ಸಮಾರಂಭವನ್ನು ಏರ್ಪಡಿಸಲಾಗಿದೆ, ಕನ್ನಡಿಗರು ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಮುಖ್ಯಮಂತ್ರಿಯವರೇ ಟ್ವೀಟ್ ಮಾಡಿದ್ದಾರೆ ಈಗ ಹೊಣೆಗಾರಿಕೆಯಿಂದ ನುಣುಚಿಕೊಳ್ಳುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದರು. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತಾಡಿದ ಅವರು, ಪೊಲೀಸರು ಅನುಮತಿ ನೀಡದಿದ್ದರೂ ಕಾರ್ಯಕ್ರಮವನ್ನು ಅಯೋಜಿಸಲಾಯಿತು ಎಂದು ಹೇಳಿದರು.

ಇದನ್ನೂ ಓದಿ: Bengaluru Stampede: ಪೊಲೀಸರು ಯಾಕೆ ಬಲಿಪಶು ಅಂತ ಕೇಳಿದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಂಮಜಸ ಉತ್ತರ

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ