‘ನಾನಿನ್ನೂ ಆ ಕ್ಷಣವನ್ನೇ ಜೀವಿಸುತ್ತಿದ್ದೇನೆ’; ಫೆಮಿನಾ ಮಿಸ್ ಇಂಡಿಯಾ ಸಾಧ್ವಿ ಸೈಲ್

Updated on: May 04, 2026 | 10:17 AM

ಕಾರವಾರ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಮಗಳು ಸಾಧ್ವಿ ಸೈಲ್ ಇತ್ತೀಚೆಗೆ ಫೆಮಿನಾ ಮಿಸ್ ಇಂಡಿಯಾ ಗೆದ್ದರು. ಅವರು ಈಗ ಟಿವಿ9 ಕನ್ನಡ ಪಾಡ್​​ಕಾಸ್ಟ್ ಜೊತೆ ಮಾತನಾಡಿದ್ದಾರೆ. ಏಪ್ರಿಲ್ 18ರಂದು ಒಡಿಶಾದ ಭುವನೇಶ್ವರದಲ್ಲಿರುವ ಕಳಿಂಗ ಇನ್ಸ್ಟಿಟ್ಯೂಟ್ ಆಫ್ ಇಂಡಸ್ಟ್ರಿಯಲ್ ಟೆಕ್ನಾಲಜಿಯಲ್ಲಿ ಫಿನಾಲೆ ನಡೆದಿತ್ತು. ಸಾಧ್ವಿ ತಮ್ಮ ಅನುಭವ ಹಂಚಿಕೊಂಡಿದ್ದಾರೆ.

ಕಾರವಾರ ಶಾಸಕ ಸತೀಶ್ ಸೈಲ್ ಮಗಳು ಸಾಧ್ವಿ ಅವರು 2026ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ಗೆದ್ದಿದ್ದಾರೆ. ಅವರು ಟಿವಿ9 ಪಾಡ್​​ಕಾಸ್ಟ್​​ ಅಲ್ಲಿ ತಮ್ಮ ಮನದಾಳದ ಮಾತನ್ನು ಹಂಚಿಕೊಂಡಿದ್ದಾರೆ. ‘ನಾನು ಇನ್ನೂ ಆ ಕ್ಷಣವನ್ನೇ ಜೀವಿಸುತ್ತೇನೆ’ ಎಂದು ಹೇಳಿದ್ದಾರೆ. ಅವರಿಗೆ ಎಲ್ಲರೂ ಶುಭಾಶಯ ಕೋರುತ್ತಿದ್ದಾರೆ. ಅವರು ಗೋವಾ ರಾಜ್ಯವನ್ನು ಪ್ರತಿನಿಧಿಸಿದ್ದರು. ಅಲ್ಲಿತೂ ಅವರಿಗೆ ಭಾರೀ ಸ್ವಾಗತ ಸಿಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: May 04, 2026 10:15 AM
Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More