Loading video

ಫೆಂಗಲ್ ಚಂಡಮಾರುತ ಎಫೆಕ್ಟ್​​: ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ

| Updated By: ವಿವೇಕ ಬಿರಾದಾರ

Updated on: Dec 01, 2024 | 9:54 AM

ಫೆಂಗಲ್ ಚಂಡಮಾರುತದಿಂದಾಗಿ ದೊಡ್ಡ ಅಲೆಗಳು ಕರಾವಳಿ ಪ್ರದೇಶಕ್ಕೆ ಅಪ್ಪಳಿಸುವ ಸಾಧ್ಯತೆಯಿದೆ. ಸಮುದ್ರ ತೀರದಲ್ಲಿ ಎಚ್ಚರಿಕೆ ನೀಡಲಾಗಿದೆ. ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ನಾಡದೋಣಿಗಳು ಸುರಕ್ಷಿತ ಸ್ಥಳಗಳಲ್ಲಿ ಲಂಗರು ಹಾಕಿವೆ.

ಫೆಂಗಲ್ ಚಂಡಮಾರುತ ಪರಿಣಾಮ ಬೃಹತ್ ಗಾತ್ರದ ಅಲೆಗಳು ದಡಕ್ಕೆ ಅಪ್ಪಳಿಸುವ ಸಾಧ್ಯತೆ. ಹೀಗಾಗಿ ಸಮುದ್ರ ತೀರ ಪ್ರದೇಶದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ನಾಡದೋಣಿಗಳು ಸಮುದ್ರ ತೀರದಲ್ಲಿ ಲಂಗರು ಹಾಕಿವೆ.

ಕರ್ನಾಟಕದ ದಕ್ಷಿಣ ಒಳನಾಡು, ಕರಾವಳಿ ಮತ್ತು ಮಳೆನಾಡು ಜಿಲ್ಲೆಗಳಲ್ಲಿ ಡಿಸೆಂಬರ್‌ 3ರವರೆಗೆ ಗುಡುಗು ಸಿಡಿಲು ಸಹಿತ ಮಳೆಯಾಗಲಿದೆ. ಗಾಳಿ ಗಂಟೆಗೆ 90 ಕಿಮೀ ವೇಗದಲ್ಲಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.