Video: ಕೇರಳದ ಉತ್ಸವದಲ್ಲಿ ನಡುಕ ಹುಟ್ಟಿಸಿದ ಆನೆ ದಾಳಿ, ಇಬ್ಬರು ಸಾವು, ವಿಡಿಯೋದಲ್ಲಿ ಸೆರೆಯಾಯ್ತು ಭೀಕರ ಕ್ಷಣ

Updated on: May 03, 2026 | 7:13 AM

ಕೇರಳದ ದೇವಾಲಯ ಉತ್ಸವಗಳಲ್ಲಿ ಗಜಪಡೆಗಳ ಅಟ್ಟಹಾಸ ಮುಂದುವರೆದಿದ್ದು, ಶುಕ್ರವಾರ (ಮೇ 1) ನಡೆದ ಎರಡು ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಬಲಿಯಾಗಿದ್ದಾರೆ. ಈ ಭೀಕರ ದೃಶ್ಯಗಳು ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಎರ್ನಾಕುಲಂ ಜಿಲ್ಲೆಯ ಕಿಡಂಗೂರ್ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಬೆಳಗ್ಗೆ 9:15 ರ ಸುಮಾರಿಗೆ 'ಮಯ್ಯನಾಡ್ ಪಾರ್ಥಸಾರಥಿ' ಎಂಬ ಆನೆ ದಾಳಿ ನಡೆಸಿತ್ತು. ಆನೆಗೆ ನೀರು ಕುಡಿಸಲು ಕರೆದೊಯ್ಯುತ್ತಿದ್ದಾಗ, ಅದು ಇದ್ದಕ್ಕಿದ್ದಂತೆ ವಿಷ್ಣು ಎಂಬುವವರ ಮೇಲೆ ದಾಳಿ ಮಾಡಿದೆ. ಆನೆ ತನ್ನ ಸೊಂಡಿಲಿನಿಂದ ವಿಷ್ಣು ಅವರನ್ನು ಎತ್ತಿ ಬಿಸಾಡಿ, ತುಳಿದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ತಿರುವನಂತಪುರಂ, ಮೇ 03: ಕೇರಳದ ದೇವಾಲಯ ಉತ್ಸವಗಳಲ್ಲಿ ಗಜಪಡೆಗಳ ಅಟ್ಟಹಾಸ ಮುಂದುವರೆದಿದ್ದು, ಶುಕ್ರವಾರ (ಮೇ 1) ನಡೆದ ಎರಡು ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಬಲಿಯಾಗಿದ್ದಾರೆ. ಈ ಭೀಕರ ದೃಶ್ಯಗಳು ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

ಎರ್ನಾಕುಲಂ ಜಿಲ್ಲೆಯ ಕಿಡಂಗೂರ್ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಬೆಳಗ್ಗೆ 9.15 ರ ಸುಮಾರಿಗೆ ‘ಮಯ್ಯನಾಡ್ ಪಾರ್ಥಸಾರಥಿ’ ಎಂಬ ಆನೆ ದಾಳಿ ನಡೆಸಿತ್ತು. ಆನೆಗೆ ನೀರು ಕುಡಿಸಲು ಕರೆದೊಯ್ಯುತ್ತಿದ್ದಾಗ, ಅದು ಇದ್ದಕ್ಕಿದ್ದಂತೆ ವಿಷ್ಣು ಎಂಬುವವರ ಮೇಲೆ ದಾಳಿ ಮಾಡಿದೆ. ಆನೆ ತನ್ನ ಸೊಂಡಿಲಿನಿಂದ ವಿಷ್ಣು ಅವರನ್ನು ಎತ್ತಿ ಬಿಸಾಡಿ, ತುಳಿದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ವೈರಲ್ ಆಗಿರುವ ವಿಡಿಯೋದಲ್ಲಿ ಉದ್ರೇಕಗೊಂಡ ಆನೆಯು ದೇವಾಲಯದ ಆವರಣದಲ್ಲಿದ್ದ ಕಾರನ್ನು ಉರುಳಿಸುತ್ತಿರುವುದು ಮತ್ತು ದ್ವಿಚಕ್ರ ವಾಹನಗಳ ಮೇಲೆ ದಾಳಿ ನಡೆಸುತ್ತಿರುವುದು ಸೆರೆಯಾಗಿದೆ. ಆನೆಯ ರೌದ್ರಾವತಾರ ಕಂಡು ಭಕ್ತರು ಹಾಗೂ ದೇವಸ್ಥಾನದ ಸಿಬ್ಬಂದಿ ಪ್ರಾಣ ಉಳಿಸಿಕೊಳ್ಳಲು ದಿಕ್ಕಾಪಾಲಾಗಿ ಓಡುತ್ತಿರುವುದು ವಿಡಿಯೋದಲ್ಲಿ ಕಂಡುಬಂದಿದೆ. ತ್ರಿಶೂರ್ ಜಿಲ್ಲೆಯಲ್ಲೂ ಇಂತಹದ್ದೇ ಘಟನೆ ನಡೆದಿದ್ದು, ಆನೆ ದಾಳಿಗೆ ಮಾವುತ ಬಲಿಯಾಗಿದ್ದಾರೆ. ಈ ಘಟನೆಗಳು ಧಾರ್ಮಿಕ ಆಚರಣೆಗಳಲ್ಲಿ ಆನೆಗಳ ಬಳಕೆ ಮತ್ತು ಸುರಕ್ಷತೆಯ ಬಗ್ಗೆ ಮತ್ತೆ ದೊಡ್ಡ ಚರ್ಚೆಯನ್ನು ಹುಟ್ಟುಹಾಕಿವೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More