AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chamundeshwari Pooja Video: ಎರಡನೇ ಆಷಾಢ ಶುಕ್ರವಾರ ಚಾಮುಂಡೇಶ್ವರಿ ತಾಯಿಯ ಅಲಂಕಾರ ಹೇಗಿದೆ ನೋಡಿ

Chamundeshwari Pooja Video: ಎರಡನೇ ಆಷಾಢ ಶುಕ್ರವಾರ ಚಾಮುಂಡೇಶ್ವರಿ ತಾಯಿಯ ಅಲಂಕಾರ ಹೇಗಿದೆ ನೋಡಿ

ಅಕ್ಷತಾ ವರ್ಕಾಡಿ
| Edited By: |

Updated on:Jul 24, 2026 | 12:11 PM

Share

ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಎರಡನೇ ಆಷಾಢ ಶುಕ್ರವಾರದ ನಿಮಿತ್ತ ನಾಡ ಅಧಿದೇವತೆ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಫಲ-ಪುಷ್ಪಗಳಿಂದ ದೇವಾಲಯವನ್ನು ಆಕರ್ಷಕವಾಗಿ ಅಲಂಕರಿಸಲಾಗಿತ್ತು. ಮಹಾಲಕ್ಷ್ಮಿ ಅಲಂಕಾರದಲ್ಲಿ ಕಂಗೊಳಿಸಿದ ಉತ್ಸವ ಮೂರ್ತಿಯ ದರ್ಶನಕ್ಕೆ ಸಹಸ್ರಾರು ಭಕ್ತರು ಸರತಿ ಸಾಲಿನಲ್ಲಿ ನಿಂತಿದ್ದರು. ಲೋಕ ಕಲ್ಯಾಣಕ್ಕಾಗಿ ವಿಶೇಷ ಪ್ರಾರ್ಥನೆಗಳು ನಡೆದವು.

ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಎರಡನೇ ಆಷಾಢ ಶುಕ್ರವಾರದಂದು ನಾಡ ಅಧಿದೇವತೆ ತಾಯಿ ಚಾಮುಂಡೇಶ್ವರಿಗೆ ವಿಜೃಂಭಣೆಯ ಪೂಜಾ ಕೈಂಕರ್ಯಗಳು ನೆರವೇರುತ್ತಿದೆ. ದೇವಾಲಯವು ಫಲ-ಪುಷ್ಪಗಳಿಂದ ಕಂಗೊಳಿಸುತ್ತಿದ್ದು, ವಿಶೇಷವಾಗಿ ತೋತಾಪುರಿ ಮಾವು, ಡ್ರ್ಯಾಗನ್ ಫ್ರೂಟ್‌ಗಳು ಹಾಗೂ ವೈವಿಧ್ಯಮಯ ಹೂವುಗಳಿಂದ ಅಲಂಕರಿಸಲಾಗಿದೆ.

ಆಷಾಢ ಮಾಸದಲ್ಲಿ ಶಕ್ತಿ ದೇವತೆಗಳಿಗೆ ವಿಶೇಷ ಪೂಜೆ ಸಲ್ಲಿಸುವುದು ವಾಡಿಕೆ. ಪ್ರತಿದಿನ ಸಾವಿರಾರು ಭಕ್ತರು ತಾಯಿಯ ದರ್ಶನಕ್ಕೆ ಆಗಮಿಸುತ್ತಿದ್ದು, ಎರಡನೇ ಶುಕ್ರವಾರದ ಇಂದು ಸರತಿ ಸಾಲಿನಲ್ಲಿ ನಿಂತು ಭಕ್ತರು ಭಕ್ತಿಯಿಂದ ಪ್ರಾರ್ಥಿಸಿರುವುದನ್ನು ಕಾಣಬಹುದು. ಈ ದಿನ ದೇವಾಲಯದಲ್ಲಿ ಮಹಾಲಕ್ಷ್ಮಿ ಅಲಂಕಾರದಲ್ಲಿ ಕಂಗೊಳಿಸಿದ ಉತ್ಸವ ಮೂರ್ತಿಯು ಭಕ್ತರ ಗಮನ ಸೆಳೆಯಿತ್ತಿದೆ. ಗುಲಾಬಿ ಬಣ್ಣದ ರೇಷ್ಮೆ ಸೀರೆಯುಟ್ಟು, ಸಕಲ ಆಭರಣಗಳನ್ನು ಧರಿಸಿದ್ದ ತಾಯಿಯ ರೂಪ ಕಣ್ತುಂಬಿಸಿಕೊಳ್ಳುವುದೇ ಕಣ್ಣಿಗೊಂದು ಹಬ್ಬ.

ಮತ್ತಷ್ಟು ವಿಡಿಯೋ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Published on: Jul 24, 2026 09:44 AM

Follow Us