ಈ ವರ್ಷದ ಡಿಸೆಂಬರ್ ಇಲ್ಲವೇ ಜನೆವರಿ-2024ರಲ್ಲಿ ನಮ್ಮ 5ನೇ ಗ್ಯಾರಂಟಿ ಯುವನಿಧಿ ಜಾರಿಗೊಳಿಸುತ್ತೇವೆ: ಸಿದ್ದರಾಮಯ್ಯ, ಸಿಎಂ

ಅರುಣ್​ ಕುಮಾರ್​ ಬೆಳ್ಳಿ

Updated on: Aug 30, 2023 | 5:30 PM

ಇಷ್ಟೆಲ್ಲ ಯೋಜನೆಗಳನ್ನು ಜಾರಿಗೆ ತಂದರೂ ಸರ್ಕಾರದ ಬೇರಾವುದೇ ಕಾರ್ಯಕ್ರಮ ನಿಂತಿಲ್ಲ, ವಿರೋಧ ಪಕ್ಷದ ನಾಯಕರು ಸುಖಾಸುಮ್ಮನೆ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು. 5 ಗ್ಯಾರಂಟಿಗಳಿಗೆ ಸಾಕಷ್ಟು ಹಣ ವ್ಯಯಾವಾಗೋದು ಸತ್ಯ, ಆದರೆ ತಾವು ಎಲ್ಲ ಇಲಾಖೆಗಳಿಗೆ, ಸರ್ಕಾರದ ಉಳಿದೆಲ್ಲ ಯೋಜನೆಗಳಿಗೆ ಹಣ ತೆಗೆದಿರಿಸಲಾಗಿದೆ ಎಂದು ಅವರು ಹೇಳಿದರು.

ಮೈಸೂರು: ನಾಲಕ್ಕಾಯಿತು, ಇನ್ನೊಂದುಳಿಯಿತು, ಅದ್ಯಾವಾಗ? ಹೌದು ಸ್ವಾಮಿ ನಾವು ಸಿದ್ದರಾಮಯ್ಯ ಸರ್ಕಾರ (Siddaramaiah government) ಜನತೆಗೆ ನೀಡಿದ ಗ್ಯಾರಂಟಿಗಳ ಬಗ್ಗೆ ಮಾತಾಡುತ್ತಿದ್ದೇವೆ. ಅದಕ್ಕೂ ಮುಖ್ಯಮಂತ್ರಿಯವರೇ ಉತ್ತರ ನೀಡಿದ್ದಾರೆ. ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ರಾಜ್ಯ ಸರ್ಕಾರದ ನಾಲ್ಕನೇ ಗ್ಯಾರಂಟಿ ಗೃಹಲಕ್ಷ್ಮಿ ಯೋಜನೆಗೆ (Gruha Lakshmi Scheme) ರಾಹುಲ್ ಗಾಂಧಿ (Rahul Gandhi) ಚಾಲನೆ ನೀಡಿದ ಬಳಿಕ ಕಾರ್ಯಕ್ರಮದಲ್ಲಿ ಮಾತಾಡಿದ ಸಿದ್ದರಾಮಯ್ಯ ಈ ವರ್ಷದ ಡಿಸೆಂಬರ್ ಇಲ್ಲವೇ ಮುಂದಿನ ವರ್ಷದ ಜನೆವರಿಯಲ್ಲಿ ಸರ್ಕಾರದ 5ನೇ ಗ್ಯಾರಂಟಿ ಯುವನಿಧಿಯನ್ನು ಜಾರಿಗೊಳಿಸಲಾಗುವುದು ಎಂದು ಹೇಳಿದರು. ಇಷ್ಟೆಲ್ಲ ಯೋಜನೆಗಳನ್ನು ಜಾರಿಗೆ ತಂದರೂ ಸರ್ಕಾರದ ಬೇರಾವುದೇ ಕಾರ್ಯಕ್ರಮ ನಿಂತಿಲ್ಲ, ವಿರೋಧ ಪಕ್ಷದ ನಾಯಕರು ಸುಖಾಸುಮ್ಮನೆ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು. 5 ಗ್ಯಾರಂಟಿಗಳಿಗೆ ಸಾಕಷ್ಟು ಹಣ ವ್ಯಯಾವಾಗೋದು ಸತ್ಯ, ಆದರೆ ತಾವು ಎಲ್ಲ ಇಲಾಖೆಗಳಿಗೆ, ಸರ್ಕಾರದ ಉಳಿದೆಲ್ಲ ಯೋಜನೆಗಳಿಗೆ ಹಣ ತೆಗೆದಿರಿಸಲಾಗಿದೆ ಎಂದು ಅವರು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.