ಬಿಗ್ ಬಾಸ್ ರಂಜಿತ್ ಮನೆಯಲ್ಲಿ ಫೈಟ್: ಇಲ್ಲಿದೆ ವೈರಲ್ ವಿಡಿಯೋ

Updated on: Sep 18, 2025 | 6:56 PM

ಬಿಗ್ ಬಾಸ್ ಖ್ಯಾತಿಯ ನಟ ರಂಜಿತ್ ಅವರ ಮನೆಯಲ್ಲಿ ಜಗಳ ಆಗಿದೆ. ರಂಜಿತ್ ಪತ್ನಿ ಹಾಗೂ ಅಕ್ಕನ ನಡುವೆ ಗಲಾಟೆ ನಡೆದಿದೆ. ಇಬ್ಬರೂ ಪರಸ್ಪರ ಬೈಯ್ದುಕೊಂಡಿದ್ದಾರೆ. ಕೈ ಮಾಡುವ ಹಂತಕ್ಕೂ ಹೋಗಿದೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಆ ವಿಡಿಯೋ ಇಲ್ಲಿದೆ..

ಮನೆಯ ಒಡೆತನದ ವಿಚಾರಕ್ಕೆ ಸಂಬಂಧಿಸಿದಂತೆ ಬಿಗ್ ಬಾಸ್ ರಂಜಿತ್ (Bigg Boss Ranjith) ಕುಟುಂಬದಲ್ಲಿ ಜಗಳ ಉಂಟಾಗಿದೆ. ರಂಜಿತ್ ಅವರ ಪತ್ನಿ ಹಾಗೂ ಸಹೋದರಿ ನಡುವೆ ಮಾತಿನ ಚಕಮಕಿ ನಡೆದಿದೆ. ಅವರ ಮೊಬೈಲ್​​ನಲ್ಲೇ ಈ ಸಂದರ್ಭದ ವಿಡಿಯೋ (Bigg Boss Ranjith Viral Video) ಸೆರೆಯಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಈ ವಿಡಿಯೋಗಳು ವೈರಲ್ ಆಗಿವೆ. ಚಪ್ಪರ್, ಭಿಕಾರಿ ಎಂದೆಲ್ಲ ಅವರು ಬೈಯ್ದುಕೊಂಡಿದ್ದಾರೆ. ಮಾತಿನ ಮೂಲಕ ಬಗೆಹರಿಸಿಕೊಳ್ಳಬೇಕಾಗಿದ್ದ ವಿಷಯ ಈಗ ಬೀದಿಗೆ ಬಂದಿದೆ. ರಂಜಿತ್ ಕುಟುಂಬದ ಸದಸ್ಯರು ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More